IPL 2023: ಕ್ರಿಸ್ ಗೇಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಭಾರತದ ಮಾಜಿ ನಾಯಕ ಕೊಹ್ಲಿ ತಮ್ಮ ಏಳನೇ ಶತಕವನ್ನು ಗಳಿಸಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಕ್ರಿಸ್ ಗೇಲ್ ಅವರ ದಾಖಲೆಯನ್ನು ಅಳಿಸಿದ್ದಾರೆ. 

Written by - Zee Kannada News Desk | Last Updated : May 22, 2023, 12:24 AM IST
  • ಜೋಸ್ ಬಟ್ಲರ್ ಮತ್ತು ಧವನ್ ನಂತರ ಸತತ ಐಪಿಎಲ್ ಶತಕಗಳನ್ನು ದಾಖಲಿಸಿದ ಮೂರನೇ ಬ್ಯಾಟ್ಸ್ಮನ್ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು.
  • ಅಷ್ಟೇ ಅಲ್ಲದೆ ಒಟ್ಟಾರೆಯಾಗಿ 16 ಆವೃತ್ತಿಯಲ್ಲಿ ಮೂರನೇ ಬಾರಿಗೆ 600 ರನ್‌ಗಳ ಗಡಿಯನ್ನು ದಾಟಿದರು.
  • ವಿಶೇಷವೆಂದರೆ 2016 ರಲ್ಲಿ ವಿರಾಟ್ ಕೊಹ್ಲಿ 973 ರನ್ ಗಳಿಸಿದ್ದು ಸಾರ್ವಕಾಲಿಕ ದಾಖಲೆಯಾಗಿ ಉಳಿದಿದೆ.
 IPL 2023: ಕ್ರಿಸ್ ಗೇಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ  title=

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಭಾರತದ ಮಾಜಿ ನಾಯಕ ಕೊಹ್ಲಿ ತಮ್ಮ ಏಳನೇ ಶತಕವನ್ನು ಗಳಿಸಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಕ್ರಿಸ್ ಗೇಲ್ ಅವರ ದಾಖಲೆಯನ್ನು ಅಳಿಸಿದ್ದಾರೆ. 

ವಿರಾಟ್ ಕೊಹ್ಲಿ 60 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸುವ ಮೂಲಕ ಶತಕದ ಗಡಿ ತಲುಪಿದರು.ಇದರ ಜೊತೆಗೆ ಜೋಸ್ ಬಟ್ಲರ್ ಮತ್ತು ಶಿಖರ್ ಧವನ್ ನಂತರ ಸತತ ಐಪಿಎಲ್ ಶತಕಗಳನ್ನು ದಾಖಲಿಸಿದ ಮೂರನೇ  ಬ್ಯಾಟ್ಸ್ಮನ್ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು.ಅಷ್ಟೇ ಅಲ್ಲದೆ ಒಟ್ಟಾರೆಯಾಗಿ 16 ಆವೃತ್ತಿಯಲ್ಲಿ ಮೂರನೇ ಬಾರಿಗೆ  600 ರನ್‌ಗಳ ಗಡಿಯನ್ನು ದಾಟಿದರು.ವಿಶೇಷವೆಂದರೆ 2016 ರಲ್ಲಿ ವಿರಾಟ್ ಕೊಹ್ಲಿ  973 ರನ್ ಗಳಿಸಿದ್ದು ಸಾರ್ವಕಾಲಿಕ ದಾಖಲೆಯಾಗಿ ಉಳಿದಿದೆ.

ಇದನ್ನೂ ಓದಿ: ವ್ಯರ್ಥವಾದ ರಿಂಕು ಸಿಂಗ್ ಹೋರಾಟ, ಲಕ್ನೋ ಗೆ 1 ರನ್ ಗಳ ರೋಚಕ ಗೆಲುವು 

ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳಿಸಿದ ಆಟಗಾರರು

7 - ವಿರಾಟ್ ಕೊಹ್ಲಿ

6 - ಕ್ರಿಸ್ ಗೇಲ್

5 - ಜೋಸ್ ಬಟ್ಲರ್

ಐಪಿಎಲ್ ನಲ್ಲಿ ಸತತವಾಗಿ ಶತಕಗಳಿಸಿದ ಆಟಗಾರರು 

2 - ಶಿಖರ್ ಧವನ್ (DC, 2020)

2 - ಜೋಸ್ ಬಟ್ಲರ್ (RR, 2022)

2 - ವಿರಾಟ್ ಕೊಹ್ಲಿ (RCB, 2023)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News