ಸಚಿನ್‌ ತೆಂಡೂಲ್ಕರ್‌ ದೊಡ್ಡ ದಾಖಲೆಯ ಮೇಲೆ ಕೊಹ್ಲಿ ಕಣ್ಣು; ಹೀಗೆ ಮಾಡಿದ್ರೆ ನಂ.1 ಆಗ್ತಾರೆ ವಿರಾಟ್!!

IND vs NZ: 2025ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿಯಾಗಿದೆ. ಇದೀಗ ಮಾರ್ಚ್ 2ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಗುಂಪು ಹಂತದ ತನ್ನ ಕೊನೆಯ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯದಲ್ಲಿ ಮತ್ತೊಮ್ಮೆ ಎಲ್ಲರ ಕಣ್ಣುಗಳು ವಿರಾಟ್ ಕೊಹ್ಲಿ ಅವರ ಪ್ರದರ್ಶನದ ಮೇಲೆ ನೆಟ್ಟಿದೆ.

Written by - Puttaraj K Alur | Last Updated : Feb 28, 2025, 01:32 PM IST
  • ಟೀಂ ಇಂಡಿಯಾ ಮಾರ್ಚ್ 2ರಂದು ನ್ಯೂಜಿಲೆಂಡ್ ವಿರುದ್ಧ ಗುಂಪು ಹಂತದ ಕೊನೆ ಪಂದ್ಯ ಆಡಲಿದೆ
  • ಈ ಪಂದ್ಯದಲ್ಲಿ ರನ್‌ಮಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ
  • ವಿರಾಟ್‌ ಕೊಹ್ಲಿಗೆ ಸಚಿನ್‌ ತೆಂಡೂಲ್ಕರ್‌ ಅವರ ದೊಡ್ಡ ದಾಖಲೆಯನ್ನು ಮುರಿಯುವ ಅವಕಾಶವಿದೆ
ಸಚಿನ್‌ ತೆಂಡೂಲ್ಕರ್‌ ದೊಡ್ಡ ದಾಖಲೆಯ ಮೇಲೆ ಕೊಹ್ಲಿ ಕಣ್ಣು; ಹೀಗೆ ಮಾಡಿದ್ರೆ ನಂ.1 ಆಗ್ತಾರೆ ವಿರಾಟ್!!
ವಿರಾಟ್‌ ಕೊಹ್ಲಿ ಮೇಲೆ ಎಲ್ಲರ ಕಣ್ಣು!

ICC Champions Trophy 2025: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧದ ಗ್ರೂಪ್‌ ಸ್ಟೇಜ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಗೆಲುವು ಮಹತ್ವದ್ದಾಗಿತ್ತು. ಏಕೆಂದರೆ ವಿರಾಟ್ ಕೊಹ್ಲಿ ಆ ಪಂದ್ಯದಲ್ಲಿ ತಮ್ಮ ದೀರ್ಘಕಾಲದ ಶತಕದ ಬರವನ್ನ ನಿಗಿಸುವಲ್ಲಿ ಯಶಸ್ವಿಯಾದರು. ಈ ಪಂದ್ಯದಲ್ಲಿ ಕೊಹ್ಲಿ ತಮ್ಮ ಶತಕದ ಮೂಲಕ ಟೀಂ ಇಂಡಿಯಾಗೆ ಅಮೋಘ ಗೆಲುವು ತಂದುಕೊಡುವುದಲ್ಲದೇ ಹಲವು ದಾಖಲೆಗಳನ್ನ ನಿರ್ಮಿಸಿದರು. ಈಗ ಭಾರತ ತಂಡವು ಮಾರ್ಚ್ 2ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಗುಂಪು ಹಂತದ ತನ್ನ ಕೊನೆಯ ಪಂದ್ಯವನ್ನು ಆಡಬೇಕಿದೆ. ಈ ಪಂದ್ಯದಲ್ಲೂ ಕೊಹ್ಲಿ ಅವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಏಕೆಂದರೆ ಅವರು ಸೆಮಿಫೈನಲ್ ಪಂದ್ಯಕ್ಕೂ ಮೊದಲು ಮತ್ತೊಂದು ಶತಕದ ಇನ್ನಿಂಗ್ಸ್ ಆಡಿದರೆ, ಮತ್ತೊಂದು ಉತ್ತಮ ಸಾಧನೆ ಮಾಡಲಿದ್ದಾರೆ.  

Add Zee News as a Preferred Source

ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವ ಅವಕಾಶ!

ಭಾರತದ ಪರ ನ್ಯೂಜಿಲೆಂಡ್ ವಿರುದ್ಧ ಏಕದಿನ ಮಾದರಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ದಾಖಲೆ ಪ್ರಸ್ತುತ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಅವರು ಕಿವೀಸ್ ತಂಡದ ವಿರುದ್ಧ ಒಟ್ಟು 42 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಅವರು 46.05 ಸರಾಸರಿಯಲ್ಲಿ 1750 ರನ್ ಗಳಿಸಿದ್ದಾರೆ. ಬ್ಲ್ಯಾಕ್‌ ಕ್ಯಾಪ್ಸ್‌ ವಿರುದ್ಧ ಅವರು 5 ಶತಕ ಮತ್ತು 8 ಆಕರ್ಷಕ ಅರ್ಧಶತಕ ಗಳಿಸಿದ್ದಾರೆ. ಕೊಹ್ಲಿ ಪ್ರಸ್ತುತ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಈ ಪೈಕಿ ಅವರು ನ್ಯೂಜಿಲೆಂಡ್ ವಿರುದ್ಧ 31 ಏಕದಿನ ಪಂದ್ಯಗಳಲ್ಲಿ 58.75 ಸರಾಸರಿಯಲ್ಲಿ 1645 ರನ್ ಗಳಿಸಿದ್ದಾರೆ. 

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಮಧ್ಯೆ ತವರಿಗೆ ಮರಳಿದ ಟೀಂ ಇಂಡಿಯಾ ಆಟಗಾರ?

ಇದರಲ್ಲಿ 6 ಶತಕಗಳು ಮತ್ತು 9 ಅರ್ಧಶತಕಗಳು ಸೇರಿವೆ. ಹೀಗಾಗಿ ಮಾರ್ಚ್ 2ರಂದು ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಕೊಹ್ಲಿ 106 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಏಕದಿನ ಸ್ವರೂಪದಲ್ಲಿ ಕಿವಿಸ್ ತಂಡದ ವಿರುದ್ಧ ಟೀಂ ಇಂಡಿಯಾ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರನಾಗುತ್ತಾರೆ.

ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ದಾಖಲೆ

ಐಸಿಸಿ ಏಕದಿನ ಪಂದ್ಯಾವಳಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ದಾಖಲೆಯನ್ನು ನೋಡುವುದಾದರೆ, ಅವರು ಮೂರು ಪಂದ್ಯಗಳಲ್ಲಿ 71 ಸರಾಸರಿಯಲ್ಲಿ ಒಟ್ಟು 213 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ ಅವರ ಬ್ಯಾಟ್‌ನಿಂದ ಒಂದು ಶತಕ ಮತ್ತು ಒಂದು ಅರ್ಧಶತಕದ ಇನ್ನಿಂಗ್ಸ್‌ಗಳು ಕಂಡುಬಂದಿವೆ. ಐಸಿಸಿ ಏಕದಿನ ಪಂದ್ಯಾವಳಿಯಲ್ಲಿ ಕಿವೀಸ್ ತಂಡದ ವಿರುದ್ಧ ಕೊಹ್ಲಿ ಗಳಿಸಿದ ಅತ್ಯುತ್ತಮ ಸ್ಕೋರ್ 117 ರನ್‌ ಆಗಿದೆ.

ಇದನ್ನೂ ಓದಿ: ಮಾ.22 ರಿಂದ IPL ಆರಂಭ, ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವುದು ಹೇಗೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News