WTC Finalನಲ್ಲಿ ವಿವಿ ರಿಚರ್ಡ್ಸ್-ಸೆಹ್ವಾಗ್ ದಾಖಲೆಯನ್ನೇ ಮುರಿದು ಇತಿಹಾಸ ಸೃಷ್ಟಿಸಲಿದ್ದಾರೆ ಟೀಂ ಇಂಡಿಯಾದ ಈ ದಿಗ್ಗಜ!

WTC Final 2023: ಐಪಿಎಲ್ 2023 ರಲ್ಲಿ ವಿರಾಟ್ ಕೊಹ್ಲಿ ಅವರ ಫಾರ್ಮ್ ತುಂಬಾ ಅಪಾಯಕಾರಿಯಾಗಿತ್ತು. ಮತ್ತೊಮ್ಮೆ ಅವರು ಮಾರಣಾಂತಿಕ ಬ್ಯಾಟಿಂಗ್ ಮೂಲಕ ವಿಶ್ವದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ WTC ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಹುದೊಡ್ಡ ಸಾಧನೆ ಮಾಡುವ ಎಲ್ಲಾ ಸಾಧ್ಯತೆ ಇದೆ.

Written by - Bhavishya Shetty | Last Updated : Jun 4, 2023, 09:16 AM IST
    • ಜೂನ್ 7 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಾರಂಭವಾಗಲಿದೆ.
    • ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸುವ ಮೂಲಕ ತಮ್ಮ ಹೆಸರಿನಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ
    • ವೀರೇಂದ್ರ ಸೆಹ್ವಾಗ್ ಮತ್ತು ವೆಸ್ಟ್ ಇಂಡೀಸ್‌ನ ವಿವ್ ರಿಚರ್ಡ್ಸ್ ಅವರ ದಾಖಲೆಯನ್ನೇ ಮುರಿಯುವ ಸಾಧ್ಯತೆ ಇದೆ
WTC Finalನಲ್ಲಿ ವಿವಿ ರಿಚರ್ಡ್ಸ್-ಸೆಹ್ವಾಗ್ ದಾಖಲೆಯನ್ನೇ ಮುರಿದು ಇತಿಹಾಸ ಸೃಷ್ಟಿಸಲಿದ್ದಾರೆ ಟೀಂ ಇಂಡಿಯಾದ ಈ ದಿಗ್ಗಜ! title=
WTC Final 2023

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಯುದ್ಧವು ಜೂನ್ 7 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಾರಂಭವಾಗಲಿದೆ. ಈ ಪಂದ್ಯ ಲಂಡನ್‌ ನ ಕೆನ್ನಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಸದ್ಯ, ಮಾರಕ ಫಾರ್ಮ್‌ನಲ್ಲಿ ಓಡುತ್ತಿರುವ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸುವ ಮೂಲಕ ತಮ್ಮ ಹೆಸರಿನಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ. ಅವರು ಭಾರತದ ಅನುಭವಿ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಮತ್ತು ವೆಸ್ಟ್ ಇಂಡೀಸ್‌ನ ವಿವ್ ರಿಚರ್ಡ್ಸ್ ಅವರ ದಾಖಲೆಯನ್ನೇ ಮುರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರ್ತಿಯನ್ನೇ ಗುಟ್ಟಾಗಿ ಮದುವೆಯಾದ ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್’ಮನ್! ಫೋಟೋಸ್ ನೋಡಿ

WTC ಫೈನಲ್‌ ನಲ್ಲಿ ಇತಿಹಾಸ ಸೃಷ್ಟಿಸಲಿರುವ ವಿರಾಟ್!

 ಐಪಿಎಲ್ 2023 ರಲ್ಲಿ ವಿರಾಟ್ ಕೊಹ್ಲಿ ಅವರ ಫಾರ್ಮ್ ತುಂಬಾ ಅಪಾಯಕಾರಿಯಾಗಿತ್ತು. ಮತ್ತೊಮ್ಮೆ ಅವರು ಮಾರಣಾಂತಿಕ ಬ್ಯಾಟಿಂಗ್ ಮೂಲಕ ವಿಶ್ವದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ WTC ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಹುದೊಡ್ಡ ಸಾಧನೆ ಮಾಡುವ ಎಲ್ಲಾ ಸಾಧ್ಯತೆ ಇದೆ.

ವಿರಾಟ್ ಕೊಹ್ಲಿ ಇದುವರೆಗೆ 108 ಟೆಸ್ಟ್ ಪಂದ್ಯಗಳಲ್ಲಿ 8416 ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 125 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ವೆಸ್ಟ್ ಇಂಡೀಸ್ ಮಾಜಿ ಬ್ಯಾಟ್ಸ್‌ಮನ್ ವಿವ್ ರಿಚರ್ಡ್ಸ್ ಅವರ 8540 ಟೆಸ್ಟ್ ರನ್‌ಗಳ ದಾಖಲೆಯನ್ನು ಹಿಂದೆ ಹಾಕುತ್ತಾರೆ. ಅಷ್ಟೇ ಅಲ್ಲ, ವೀರೇಂದ್ರ ಸೆಹ್ವಾಗ್ ಅವರ ಟೆಸ್ಟ್ ರನ್‌ ಗಳನ್ನು ಮೀರಿಸುವ ಉತ್ತಮ ಅವಕಾಶವೂ ಇದೆ. ಸೆಹ್ವಾಗ್ ಟೆಸ್ಟ್ ಕ್ರಿಕೆಟ್‌ನಲ್ಲಿ 8586 ರನ್ ಗಳಿಸಿದ್ದಾರೆ. ಕೊಹ್ಲಿ ಅವರಿಗಿಂತ ಮುಂದೆ ಬರಲು 171 ರನ್ ಗಳಿಸಬೇಕಾಗಿದೆ. ಇಷ್ಟು ರನ್ ಗಳಿಸುವುದು ಸುಲಭವಲ್ಲ, ಆದರೆ ಸದ್ಯ ವಿರಾಟ್ ಇರುವ ಮಾರಕ ಫಾರ್ಮ್ ನೋಡಿದರೆ ಈ ಇಬ್ಬರೂ ದಿಗ್ಗಜ ಆಟಗಾರರ ದಾಖಲೆಗಳನ್ನು ಮುರಿಯಬಹುದು ಎಂದನಿಸುತ್ತದೆ.

ಇದನ್ನೂ ಓದಿ: ಇದು ಭಾರತದ ಅತಿದೊಡ್ಡ ರೈಲ್ವೆ ಜಂಕ್ಷನ್! ದೇಶದ ಮೂಲೆ ಮೂಲೆಗೂ ಇಲ್ಲಿಂದ ಸಿಗುತ್ತೆ ರೈಲು ಸೇವೆ…

ಭಾರತದ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಟಾಪ್-5 ಬ್ಯಾಟ್ಸ್‌ಮನ್‌ಗಳು

ಭಾರತದ ಪರ ಅತಿ ಹೆಚ್ಚು ಟೆಸ್ಟ್ ರನ್‌ ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 15921 ರನ್‌ ಗಳೊಂದಿಗೆ, ಅವರು ವಿಶ್ವದ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಆಟಗಾರರಾಗಿದ್ದಾರೆ. ಭಾರತದ ಪರ ರಾಹುಲ್ ದ್ರಾವಿಡ್ 13288 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಸುನಿಲ್ ಗವಾಸ್ಕರ್ 10122 ರನ್ ಗಳಿಸಿ ಮೂರನೇ ಸ್ಥಾನದಲ್ಲಿ, ವಿವಿಎಸ್ ಲಕ್ಷ್ಮಣ್ 8781 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇನ್ನು ವೀರೇಂದ್ರ ಸೆಹ್ವಾಗ್ 8586 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಇಲ್ಲಿಯವರೆಗೆ 8416 ರನ್ ಗಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News