IND vs WI, Virat Kohli Record: ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್‌ಗಳಿಂದ ಗೆದ್ದು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಎರಡನೇ ಟೆಸ್ಟ್ ಪಂದ್ಯ ಜುಲೈ 20 ಗುರುವಾರ ಟ್ರಿನಿಡಾಡ್‌ ನಲ್ಲಿ ನಡೆಯಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮೊದಲ ಟೆಸ್ಟ್’ನಲ್ಲಿ ಗೆದ್ದರೂ Team India ಪ್ಲೇಯಿಂಗ್ 11ನಲ್ಲಿ ಆಗಲಿದೆ ಬದಲಾವಣೆ: ಇವರು ಇನ್… ಅವರು ಔಟ್!


ಟ್ರಿನಿಡಾಡ್‌ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ದಾಖಲೆ ನಿರ್ಮಿಸಲಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಬಾರಿಯ ಶ್ರೇಷ್ಠ ದಾಖಲೆಯನ್ನು ಮಾಡಲಿದ್ದಾರೆ. ಪ್ರಸ್ತುತ ಸಮಯದಲ್ಲಿ ಯಾವುದೇ ಬ್ಯಾಟ್ಸ್‌ಮನ್ ಮಾಡಲು ಈ ಸಾಧನೆಯನ್ನು ಮಾಡಲು ಸಾಧ್ಯವಾಗಿಲ್ಲ. ರಾಹುಲ್ ದ್ರಾವಿಡ್ ಅವರಂತಹ ಶ್ರೇಷ್ಠ ಬ್ಯಾಟ್ಸ್‌ಮನ್ ಕೂಡ ತಮ್ಮ ಇಡೀ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಈ ಶ್ರೇಷ್ಠ ದಾಖಲೆಯನ್ನು ಮಾಡಲು ಸಾಧ್ಯವಾಗಲಿಲ್ಲ.


ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯುತ್ತಿರುವ ಈ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 39 ರನ್ ಗಳಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 25,500 ರನ್ ಪೂರೈಸಲಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಂತರ ಈ ದೊಡ್ಡ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ. ರಾಹುಲ್ ದ್ರಾವಿಡ್ ಅವರಂತಹ ಶ್ರೇಷ್ಠ ಬ್ಯಾಟ್ಸ್‌ಮನ್ ಕೂಡ ತಮ್ಮ ಇಡೀ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಈ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಸದ್ಯ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 25,461 ರನ್ ಗಳಿಸಿರುವ ದಾಖಲೆ ಹೊಂದಿದ್ದಾರೆ.


ಸಚಿನ್ ತೆಂಡೂಲ್ಕರ್ ನಂತರ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಈ ಶ್ರೇಷ್ಠ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಪ್ರಸ್ತುತ ಆಡುತ್ತಿರುವ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,461 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 34,357 ರನ್ ಗಳಿಸಿದ್ದಾರೆ. ರಾಹುಲ್ ದ್ರಾವಿಡ್ ಅವರಂತಹ ಶ್ರೇಷ್ಠ ಬ್ಯಾಟ್ಸ್‌ಮನ್ ಕೂಡ ತಮ್ಮ ಇಡೀ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಈ ಶ್ರೇಷ್ಠ ದಾಖಲೆಯನ್ನು ಮಾಡಲು ಸಾಧ್ಯವಾಗಲಿಲ್ಲ. ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,208 ರನ್ ಗಳಿಸಿದ್ದಾರೆ. ರಾಹುಲ್ ದ್ರಾವಿಡ್ ಅವರಂತಹ ಅನುಭವಿಗಳು ತಮ್ಮ ಇಡೀ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ 25,000 ರನ್ ಪೂರೈಸಲು ಸಾಧ್ಯವಾಗಲಿಲ್ಲ.


ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ


1. ಸಚಿನ್ ತೆಂಡೂಲ್ಕರ್ (ಭಾರತ) - 34357 ರನ್


2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 28016 ರನ್


3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 27483 ರನ್


4. ಮಹೇಲಾ ಜಯವರ್ಧನೆ (ಶ್ರೀಲಂಕಾ) - 25957 ರನ್


5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 25534 ರನ್


6. ವಿರಾಟ್ ಕೊಹ್ಲಿ (ಭಾರತ) - 25461 ರನ್


7. ರಾಹುಲ್ ದ್ರಾವಿಡ್ (ಭಾರತ) - 24208 ರನ್


 


ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು


1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು


2. ವಿರಾಟ್ ಕೊಹ್ಲಿ (ಭಾರತ) - 75 ಶತಕಗಳು


3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 71 ಶತಕಗಳು


4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 63 ಶತಕಗಳು


5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 62 ಶತಕಗಳು


6. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) - 55 ಶತಕಗಳು


ಇದನ್ನೂ ಓದಿ:“ಒಂದು ವರ್ಷದಿಂದ ಭಾರತ ತಂಡ ಈ ಆಟಗಾರನನ್ನು ಮಿಸ್ ಮಾಡಿಕೊಳ್ಳುತ್ತಿದೆ”: Team India ಕೋಚ್ ಹೇಳಿಕೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ