ನವದೆಹಲಿ: ಮುಂಬರುವ ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಟಿ 20 ಐಗಳ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಧೃಢಪಡಿಸಿದ್ದಾರೆ.
ಅಕ್ಟೋಬರ್ 17 ರಿಂದ ಓಮನ್ ನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ ಮುಗಿದ ನಂತರ ವಿರಾಟ್ ಕೊಹ್ಲಿ ಅವರು ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದರು.ಆದರೆ ಅವರು ಟೆಸ್ಟ್ ಕ್ರಿಕೆಟ್ ಮತ್ತು ಏಕದಿನಗಳಲ್ಲಿ ತಂಡವನ್ನು ಮುನ್ನಡೆಸುವುದನ್ನು ಮುಂದುವರಿಸಲಿದ್ದಾರೆ ಎಂದು ಹೇಳಿದ್ದಾರೆ.
'ಅಕ್ಟೋಬರ್‌ನಲ್ಲಿ ದುಬೈನಲ್ಲಿ ನಡೆಯಲಿರುವ ಈ ಟಿ 20 ವಿಶ್ವಕಪ್ ನಂತರ ನಾನು ಟಿ 20 ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ" ಎಂದು ಕೊಹ್ಲಿ (Virat Kohli) ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಆಫ್ರಿಕನ್ ಮಣ್ಣಿನಲ್ಲಿ ಸಚಿನ್ ಅತ್ಯುತ್ತಮ ಆಟಗಾರ
2017 ರಲ್ಲಿ ಎಂಎಸ್ ಧೋನಿ ತಮ್ಮ ಸ್ಥಾನದಿಂದ ಕೆಳಗಿಳಿದ ನಂತರ ಕೊಹ್ಲಿ ಟಿ20 ತಂಡದ ನಾಯಕನಾಗಿ ಅಧಿಕಾರ ವಹಿಸಿಕೊಂಡರು. ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಕೊಹ್ಲಿ ಭಾರತವನ್ನು ಮುನ್ನಡೆಸುವುದು ಇದೇ ಮೊದಲು. ಅವರು 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಮತ್ತು ಈ ಹಿಂದೆ 2019 ಐಸಿಸಿ ವಿಶ್ವಕಪ್‌ನ ಸೆಮಿಫೈನಲ್‌ಗೆ ತಂಡವನ್ನು ಮುನ್ನಡೆಸಿದ್ದಾರೆ.
ಇದನ್ನೂ ಓದಿ: ಕೇಪ್ ಟೌನ್ ಸ್ಟ್ರೀಟ್ನಲ್ಲಿ ತನ್ನ ನೃತ್ಯ ಕೌಶಲ್ಯವನ್ನು ಪ್ರದರ್ಶಿಸಿದ ಅನುಷ್ಕಾ ಶರ್ಮಾ
ಈಗಾಗಲೇ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದ ಮೂಲಕ ಹಲವು ಬಾರಿ ಟ್ರೋಪಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿರುವ ರೋಹಿತ್ ಶರ್ಮಾ ಅವರು ಟಿ-20 ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.