Virat Kohli: ಮತ್ತೊಂದು ದಾಖಲೆಯ ಹೊಸ್ತಿಲಲ್ಲಿರುವ ಕೊಹ್ಲಿ.. 3ನೇ ಟೆಸ್ಟ್‌ನಲ್ಲಿ 77 ರನ್ ಗಳಿಸಿದರೆ..!!
IND vs AUS 3rd Test: ಟೀಂ ಇಂಡಿಯಾಗೆ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ. ಇನ್ನೊಂದು ಪಂದ್ಯ ಗೆದ್ದರೆ ಸರಣಿ ಗೆದ್ದು ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪ್ರವೇಶಿಸಲಿದೆ. 3ನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.
IND vs AUS 3rd Test: ಟೀಂ ಇಂಡಿಯಾಗೆ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ. ಇನ್ನೊಂದು ಪಂದ್ಯ ಗೆದ್ದರೆ ಸರಣಿ ಗೆದ್ದು ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪ್ರವೇಶಿಸಲಿದೆ. ಟೀಂ ಇಂಡಿಯಾ ಎರಡು ಟೆಸ್ಟ್‌ಗಳಲ್ಲಿ ಸತತ ಗೆಲುವು ಸಾಧಿಸಿದ್ದರೂ ಇನ್ನೂ ಹಲವು ಸಮಸ್ಯೆಗಳು ತಂಡವನ್ನು ಕಾಡುತ್ತಿವೆ. ಭಾರತ ಬೌಲರ್‌ಗಳ ಮೇಲೆ ಭಾರ ಹಾಕುತ್ತಿದೆ. ರೋಹಿತ್ ಶರ್ಮಾ, ಜಡೇಜಾ, ಅಕ್ಷರ್ ಪಟೇಲ್ ಹೊರತುಪಡಿಸಿ ಉಳಿದವರೆಲ್ಲರೂ ಬ್ಯಾಟಿಂಗ್‌ನಲ್ಲಿ ವಿಫಲರಾದರು. ಈ ಸರಣಿಯಲ್ಲಿ ಸಿಡಿದೇಳುವ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿಗೂ ಈ ಸರಣಿಯಲ್ಲಿ ದೊಡ್ಡ ಇನ್ನಿಂಗ್ಸ್ ಆಡಲಾಗಲಿಲ್ಲ. 3ನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.
ಇದನ್ನೂ ಓದಿ : ICC T20 ವಿಶ್ವಕಪ್ 2023 ಅತ್ಯುತ್ತಮ ತಂಡ ಘೋಷಣೆ: ಟೀಮ್ ಇಂಡಿಯಾದ ಈ ಕ್ರಿಕೆಟರ್’ಗೆ ಲಭಿಸಿದ ಸ್ಥಾನ
ಮೂರನೇ ಪಂದ್ಯ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 77 ರನ್ ಗಳಿಸಿದರೆ ತವರಿನಲ್ಲಿ 4000 ರನ್ ಸ್ಕೋರ್ ಮಾಡಿದ ದಾಖಲೆ ನಿರ್ಮಿಸಲಿದ್ದಾರೆ. ಭಾರತದಲ್ಲಿ ಇದುವರೆಗೆ 48 ಪಂದ್ಯಗಳನ್ನು ಆಡಿದ್ದಾರೆ. ಅವರು 74 ಇನ್ನಿಂಗ್ಸ್‌ಗಳಲ್ಲಿ 59.43 ಸರಾಸರಿಯಲ್ಲಿ 3923 ರನ್ ಗಳಿಸಿದ್ದಾರೆ. ಇಂದೋರ್ ಟೆಸ್ಟ್ ನಲ್ಲಿ 4 ಸಾವಿರ ಟೆಸ್ಟ್ ರನ್ ಪೂರೈಸುವ ಸುವರ್ಣಾವಕಾಶ ಸಿಕ್ಕಿದೆ. ವಿರಾಟ್ ಭಾರತದಲ್ಲಿ ಇದುವರೆಗೆ 13 ಶತಕ ಮತ್ತು 12 ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಮಾತ್ರ ಕೊಹ್ಲಿಗಿಂತ ಮುಂದಿದ್ದಾರೆ. ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 7216 ರನ್‌ಗಳೊಂದಿಗೆ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದರೆ, ರಾಹುಲ್ ದ್ರಾವಿಡ್ 5598 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಸುನಿಲ್ ಗವಾಸ್ಕರ್ 5067 ರನ್ ಮತ್ತು ವೀರೇಂದ್ರ ಸೆಹ್ವಾಗ್ 4656 ರನ್ ಗಳಿಸಿದ್ದಾರೆ.
ಇದನ್ನೂ ಓದಿ : ENG vs NZ: ಕ್ರೀಸ್ ಒಳಗೆ ಬಂದರೂ ಬ್ಯಾಟ್ಸ್’ಮನ್ ರನೌಟ್: ಅದ್ಹೇಗೆ ಸಾಧ್ಯ? ಈ ವಿಡಿಯೋ ನೋಡಿ
ಸತತ ಎರಡು ಟೆಸ್ಟ್‌ಗಳಲ್ಲಿ ಸೋತ ನಂತರ ಆಸ್ಟ್ರೇಲಿಯಾ ನೆಲಕಚ್ಚಿತು. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ 132 ರನ್ ಆಗಿದ್ದರೆ, ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 6 ವಿಕೆಟ್‌ಗಳಿಂದ ಸೋಲು ಕಂಡಿದೆ. ಇಂದೋರ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ನಲ್ಲಿ ಭಾರತ ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಲಗ್ಗೆ ಇಡಲಿದೆ. ಪ್ರಸ್ತುತ, ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ 64.06 ಶೇಕಡಾ ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 66.67 ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಈ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುವ ಸಾಧ್ಯತೆ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.