Virat Kohli Record: ಟೀಂ ಇಂಡಿಯಾದ ಏಸ್ ಬ್ಯಾಟ್ಸ್‌’ಮನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌’ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿ ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


COMMERCIAL BREAK
SCROLL TO CONTINUE READING

ಏಕದಿನ ಕ್ರಿಕೆಟ್‌’ನಲ್ಲಿ ಈ ವಿಶ್ವ ದಾಖಲೆ ಮೂಲಕ ವಿರಾಟ್ ಕೊಹ್ಲಿ ಅನೇಕ ದಿಗ್ಗಜ ಬ್ಯಾಟ್ಸ್‌’ಮನ್‌’ಗಳನ್ನು ಹಿಂದಿಕ್ಕಿ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಚೆನ್ನೈನಲ್ಲಿ ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 116 ಎಸೆತಗಳಲ್ಲಿ 85 ರನ್ ಗಳಿಸಿ ಟೀಮ್ ಇಂಡಿಯಾದ ಗೆಲುವಿಗೆ ಕಾರಣರಾದರು.


ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಲ್ಲಿ ಆಸೀಸ್ ವಿರುದ್ಧ ಗೆದ್ದ ಭಾರತ ಪಾಯಿಂಟ್ ಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿದೆ?


ಏಕದಿನ ಕ್ರಿಕೆಟ್‌’ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ದಾಖಲೆ:


ಭಾನುವಾರ ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 85 ರನ್ ಗಳಿಸುವ ಮೂಲಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಶ್ರೇಷ್ಠ ದಾಖಲೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 50+ ರನ್ ಗಳಿಸಿದ ವಿಶ್ವದ ಮೊದಲ ನಾನ್ ಓಪನಿಂಗ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಈ ವಿಚಾರದಲ್ಲಿ ಶ್ರೀಲಂಕಾದ ಮಾಜಿ ಬ್ಯಾಟ್ಸ್‌’ಮನ್ ಕುಮಾರ ಸಂಗಕ್ಕಾರ ಅವರನ್ನೂ ಹಿಂದಿಕ್ಕಿದ್ದಾರೆ


ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ 113 ಬಾರಿ 50+ ರನ್ ಗಳಿಸಿದ್ದಾರೆ. ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ಅವರು ತಮ್ಮ ಏಕದಿನ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಆರಂಭಿಕರಲ್ಲದ ಬ್ಯಾಟ್ಸ್‌ಮನ್ ಆಗಿ 112 ಬಾರಿ 50+ ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರು 109 ಬಾರಿ 50+ ರನ್ ಗಳಿಸಿದ್ದರು. ದಕ್ಷಿಣ ಆಫ್ರಿಕಾದ ಮಾಜಿ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ 102 ಬಾರಿ ಈ ಸಾಧನ ಮಾಡಿದ್ದರು.


ODIನಲ್ಲಿ ನಾನ್-ಓಪನಿಂಗ್ ಬ್ಯಾಟ್ಸ್‌ಮನ್ ಆಗಿ 50+ ಗರಿಷ್ಠ ಸ್ಕೋರ್ ಮಾಡಿದ ಆಟಗಾರರು:


  • 113 ಬಾರಿ - ವಿರಾಟ್ ಕೊಹ್ಲಿ (ಭಾರತ)

  • 112 ಬಾರಿ - ಕುಮಾರ್ ಸಂಗಕ್ಕಾರ (ಶ್ರೀಲಂಕಾ)

  • 109 ಬಾರಿ - ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ)

  • 102 ಬಾರಿ - ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ)


ಇದನ್ನೂ ಓದಿ: World Cup 2023: ಕೊಹ್ಲಿ, ರಾಹುಲ್ ಅದ್ಭುತ ಜೊತೆಯಾಟ-ಜಡೇಜಾ ಸ್ಪಿನ್ ಮೋಡಿ: ವಿಶ್ವಕಪ್’ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.