ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 197 ರನ್ ಗಳನ್ನು ಗಳಿಸಿದೆ.
ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಮೊದಲು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬ್ಯಾಟಿಂಗ್ ಅವಕಾಶ ನೀಡಿತು. ಈ ಅವಕಾಶ ವನ್ನು ಸದುಪಯೋಗಪಡಿಸಿಕೊಂಡ ಬೆಂಗಳೂರು ತಂಡವು ನಾಯಕ ಫ್ಯಾಪ್ ದುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಅವರ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಮೊದಲ ವಿಕೆಟ್ 67 ರನ್ ಗಳಿಸುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿದರು.
ಇನ್ನೇನೂ ಈ ಇಬ್ಬರೂ ಆಟಗಾರರು ತಮ್ಮ ಸ್ಥಿರ ಬ್ಯಾಟಿಂಗ್ ಮುಂದುವರೆಸುತ್ತಾರೆ ಎನ್ನುವಷ್ಟರಲ್ಲಿ ಫ್ಯಾಫ್ ದುಪ್ಲೆಸಿಸ್ ನೂರ್ ಅಹಮದ್ ಅವರಿಗೆ 28 ರನ್ ಗಳಾಗಿದ್ದಾಗ ವಿಕೆಟ್ ಒಪ್ಪಿಸಿದರು.ಇದಾದ ನಂತರ ಬಂದಂತಹ ಮ್ಯಾಕ್ಸ್ ವೆಲ್ ಹಾಗೂ ಮಹಿಪಾಲ್ ಲೋಮ್ರೋವ್ ಬೇಗನೆ ವಿಕೆಟ್ ಒಪ್ಪಿಸಿದ್ದರಿಂದಾಗಿ ಆರ್ಸಿಬಿ ಸಂಕಷ್ಟದಲ್ಲಿ ಸಿಲುಕಿತು.
Back to back centuries for Virat Kohli! 🙌 🤌
Brings up his 7️⃣th IPL Century! There is no competition! G.O.A.T #PlayBold #ನಮ್ಮRCB #IPL2023 #RCBvGT pic.twitter.com/w8xmFqccny
— Royal Challengers Bangalore (@RCBTweets) May 21, 2023
ಇಷ್ಟೆಲ್ಲದರ ನಡುವೆಯೂ ತಮ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದ ವಿರಾಟ್ ಕೊಹ್ಲಿ ಕೇವಲ 61 ಎಸೆತಗಳಲ್ಲಿ 13 ಬೌಂಡರಿ ಹಾಗೂ ಒಂದು ಭರ್ಜರಿ ಸಿಕ್ಸರ್ ನೆರವಿನೊಂದಿಗೆ 101 ರನ್ ಗಳೊಂದಿಗೆ ಅಜೇಯ ಶತಕ ಸಿಡಿಸಿದರು. ಆ ಮೂಲಕ ಈ ಐಪಿಎಲ್ ಟೂರ್ನಿಯಲ್ಲಿ ಸತತ ಎರಡು ಶತಕ ಸಿಡಿಸಿದ್ದಲ್ಲದೆ ಒಟ್ಟಾಗಿ ಏಳನೇ ಶತಕವನ್ನು ಅವರು ದಾಖಲಿಸಿದರು. ಕೊಹ್ಲಿಗೆ ಸಾಥ್ ನೀಡಿದ ಮೈಕಲ್ ಬ್ರಾಸ್ವೆಲ್ 26,ಹಾಗೂ ಅನುಜ್ ರಾವತ್ 23 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 197 ರನ್ ಗಳನ್ನು ಗಳಿಸಿದೆ. ಈಗ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿರುವ ಬೆಂಗಳೂರು ತಂಡವು, ಒಂದು ವೇಳೆ ಗೆದ್ದಲ್ಲಿ ನೇರವಾಗಿ ಪ್ಲೇ ಆಫ್ ಗೆ ಪ್ರವೇಶ ಪಡೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.