ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‍ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಭರ್ಜರಿ ಸೆಣಸಾಟ ನಡೆಯುತ್ತಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ನಿಗದಿತ 20 ಓವರ್‍ಗಳಲ್ಲಿ ಆರ್‍ಸಿಬಿ 4 ವಿಕೆಟ್ ಕಳೆದುಕೊಂಡು 181 ರನ್‍ಗಳ ಬೃಹತ್ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೊಡ್ಡ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಏಕೈಕ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.


COMMERCIAL BREAK
SCROLL TO CONTINUE READING

ಕೊಹ್ಲಿಯ ಸೂಪರ್ ದಾಖಲೆ!


ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 12 ರನ್ ಗಳಿಸಿದ ತಕ್ಷಣ ಐಪಿಎಲ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದರು. ಈ ಸಾಧನೆಯನ್ನು ಇಲ್ಲಿಯವರೆಗೆ ಯಾರೂ ಮಾಡಲು ಸಾಧ್ಯವಾಗಿಲ್ಲ. ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ 7000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದು. ಈ ಪಂದ್ಯಕ್ಕೂ ಮುನ್ನ ಕೊಹ್ಲಿ 6988 ರನ್ ಗಳಿಸಿದ್ದರು.  ಈ ಪಂದ್ಯದಲ್ಲಿ 55 ರನ್ ಗಳಿಸಿದ ಅವರು 7043 ರನ್‌ಗಳೊಂದಿಗೆ ಅತಿಹೆಚ್ಚು ಐಪಿಎಲ್ ರನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.  


ಇದನ್ನೂ ಓದಿ: WTC Final 2023: ಡಬ್ಲ್ಯುಟಿಸಿ ಫೈನಲ್‍ಗೆ ರಾಹುಲ್ ಬದಲಿಗೆ ಈ ಡ್ಯಾಶಿಂಗ್ ಬ್ಯಾಟ್ಸ್‌ಮನ್ ಎಂಟ್ರಿ!  


ಅತಿಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟ್ಸ್‌ಮನ್‌ಗಳು


ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರ. ಕೊಹ್ಲಿ 7043 ರನ್ ಗಳಿಸಿದ್ರೆ, ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿರುವ ಶಿಖರ್ ಧವನ್ 6536 ರನ್ ಗಳಿಸಿದ್ದು, 2ನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ 6189 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದು, 6036 ರನ್ ಗಳಿಸಿದ್ದಾರೆ. ಸುರೇಶ್ ರೈನಾ 5528 ರನ್‌ಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.


ವಿರಾಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ!


ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ವಿರಾಟ್ ಕೊಹ್ಲಿ ಅವರ ಫಾರ್ಮ್ ಈ ಋತುವಿನಲ್ಲಿ ಅತ್ಯುತ್ತಮವಾಗಿದೆ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 416 ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲ 6 ಅರ್ಧ ಶತಕ ಬಾರಿಸಿದ್ದಾರೆ. ಆರೆಂಜ್ ಕ್ಯಾಪ್ ರೇಸ್‍ನಲ್ಲಿ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ತಂಡದ ಮೊದಲ ಪಂದ್ಯದಲ್ಲಿ ಗಳಿಸಿದ 82 ರನ್‌ಗಳು ಈ ಋತುವಿನ ಅವರ ಗರಿಷ್ಠ ಸ್ಕೋರ್ ಆಗಿದೆ.    


ಇದನ್ನೂ ಓದಿ: Wrestlers FIR: 'ಉಸಿರು ಪರೀಕ್ಷೆಯ ನೆಪ ಹೇಳಿ ಬೃಜ್ ಭೂಷಣ್ ಎದೆ-ಹೊಟ್ಟೆ ಸ್ಪರ್ಶಿಸುತ್ತಿದ್ದ'


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.