ಭಾರತ-ಪಾಕ್ ಐತಿಹಾಸಿಕ ಪಂದ್ಯವನ್ನು ಉಚಿತವಾಗಿಯೂ ನೋಡಬಹುದು: ಈ ಸಣ್ಣ ಕೆಲಸ ಮಾಡಿದ್ರೆ ಸಾಕು…

Watch India-Pak Historic Match For Free: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023 ರ ಶ್ರೇಷ್ಠ ಪಂದ್ಯವು ಇಂದು ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಎರಡೂ ತಂಡಗಳು ‘ಎ’ ಗುಂಪಿನ ಭಾಗವಾಗಿವೆ.

Written by - Bhavishya Shetty | Last Updated : Sep 2, 2023, 01:44 PM IST
    • ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2023 ರ ಶ್ರೇಷ್ಠ ಪಂದ್ಯ
    • ಶ್ರೀಲಂಕಾದ ಕ್ಯಾಂಡಿಯಲ್ಲಿರುವ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ
    • ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಮಾಡಲಾಗುತ್ತದೆ.
ಭಾರತ-ಪಾಕ್ ಐತಿಹಾಸಿಕ ಪಂದ್ಯವನ್ನು ಉಚಿತವಾಗಿಯೂ ನೋಡಬಹುದು: ಈ ಸಣ್ಣ ಕೆಲಸ ಮಾಡಿದ್ರೆ ಸಾಕು… title=
India vs Pakistan

IND vs PAK: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೆಪ್ಟೆಂಬರ್ 2 ರಂದು ಅಂದರೆ ಇಂದು ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಏಷ್ಯಾ ಕಪ್ 2023 ಲೈವ್ ಸ್ಟ್ರೀಮಿಂಗ್:

ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023 ರ ಶ್ರೇಷ್ಠ ಪಂದ್ಯವು ಇಂದು ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಎರಡೂ ತಂಡಗಳು ‘ಎ’ ಗುಂಪಿನ ಭಾಗವಾಗಿವೆ. ನೇಪಾಳ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ 238 ರನ್‌’ಗಳ ದೊಡ್ಡ ಗೆಲುವು ದಾಖಲಿಸಿದ ಪಾಕ್ ತಂಡ ಸೂಪರ್-4 ನಲ್ಲಿ ಸ್ಥಾನ ಪಡೆಯುವತ್ತ ಹೆಜ್ಜೆ ಹಾಕಿದೆ. ಇನ್ನು ಈ ಪಂದ್ಯದಿಂದ ಭಾರತ ತಂಡ ತನ್ನ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ: ಇನ್ನು 428 ರೂಪಾಯಿಗೆ ಎಲ್ ಪಿಜಿ : ಪಡಿತರ ಚೀಟಿದಾರರಿಗೆ ಸರ್ಕಾರದ ಕೊಡುಗೆ 

ಬಹಳ ಸಮಯದ ನಂತರ ಭಾರತ ತಂಡ ತನ್ನ ಸಂಪೂರ್ಣ ಬಲದೊಂದಿಗೆ ಏಕದಿನದಲ್ಲಿ ಆಡಲಿದೆ. ಮುಂಬರುವ ಏಕದಿನ ವಿಶ್ವಕ್ಕೆ ಮೊದಲು ಎಲ್ಲಾ ಆಟಗಾರರನ್ನು ಪರೀಕ್ಷಿಸಲು ಇದು ಉತ್ತಮ ಅವಕಾಶವಾಗಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅಲ್ಲದೆ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದ ಪ್ರಮುಖ ಆಟಗಾರರಾಗಿದ್ದಾರೆ,

ಭಾರತ-ಪಾಕಿಸ್ತಾನ ಪಂದ್ಯ ಎಲ್ಲಿ ನಡೆಯಲಿದೆ?

ಏಷ್ಯಾ ಕಪ್ 2023 ರ ಮೂರನೇ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಶ್ರೀಲಂಕಾದ ಕ್ಯಾಂಡಿಯಲ್ಲಿರುವ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ಪಾಕ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭ?

ಭಾರತ ಮತ್ತು ಪಾಕಿಸ್ತಾನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಮಧ್ಯಾಹ್ನ 2:30ಕ್ಕೆ ನಡೆಯಲಿದೆ.

ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಡಿ ಸ್ಪೋರ್ಟ್ಸ್ ಚಾನೆಲ್‌’ನಲ್ಲಿ ಫ್ರೀ-ಡಿಶ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ. ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಮಾಡಲಾಗುತ್ತದೆ. ಇದನ್ನು ಬಳಕೆದಾರರು ಮೊಬೈಲ್‌ ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಭಾರತ-ಪಾಕಿಸ್ತಾನದ ಸಂಭಾವ್ಯ ಪ್ಲೇಯಿಂಗ್ 11 ಆಟಗಾರರು:

ಭಾರತ - ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಕೊಹ್ಲಿಯನ್ನು ಹುಡುಕಿಕೊಂಡು ಮೈದಾನಕ್ಕೆ ಬಂದ ಪಾಕ್ ಆಟಗಾರ! ನಂತರ ಹೇಳಿದ್ದು ಹೀಗೆ…

ಪಾಕಿಸ್ತಾನ - ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News