IND vs PAK: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೆಪ್ಟೆಂಬರ್ 2 ರಂದು ಅಂದರೆ ಇಂದು ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.


COMMERCIAL BREAK
SCROLL TO CONTINUE READING

ಏಷ್ಯಾ ಕಪ್ 2023 ಲೈವ್ ಸ್ಟ್ರೀಮಿಂಗ್:


ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023 ರ ಶ್ರೇಷ್ಠ ಪಂದ್ಯವು ಇಂದು ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಎರಡೂ ತಂಡಗಳು ‘ಎ’ ಗುಂಪಿನ ಭಾಗವಾಗಿವೆ. ನೇಪಾಳ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ 238 ರನ್‌’ಗಳ ದೊಡ್ಡ ಗೆಲುವು ದಾಖಲಿಸಿದ ಪಾಕ್ ತಂಡ ಸೂಪರ್-4 ನಲ್ಲಿ ಸ್ಥಾನ ಪಡೆಯುವತ್ತ ಹೆಜ್ಜೆ ಹಾಕಿದೆ. ಇನ್ನು ಈ ಪಂದ್ಯದಿಂದ ಭಾರತ ತಂಡ ತನ್ನ ಅಭಿಯಾನ ಆರಂಭಿಸಲಿದೆ.


ಇದನ್ನೂ ಓದಿ: ಇನ್ನು 428 ರೂಪಾಯಿಗೆ ಎಲ್ ಪಿಜಿ : ಪಡಿತರ ಚೀಟಿದಾರರಿಗೆ ಸರ್ಕಾರದ ಕೊಡುಗೆ 


ಬಹಳ ಸಮಯದ ನಂತರ ಭಾರತ ತಂಡ ತನ್ನ ಸಂಪೂರ್ಣ ಬಲದೊಂದಿಗೆ ಏಕದಿನದಲ್ಲಿ ಆಡಲಿದೆ. ಮುಂಬರುವ ಏಕದಿನ ವಿಶ್ವಕ್ಕೆ ಮೊದಲು ಎಲ್ಲಾ ಆಟಗಾರರನ್ನು ಪರೀಕ್ಷಿಸಲು ಇದು ಉತ್ತಮ ಅವಕಾಶವಾಗಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅಲ್ಲದೆ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದ ಪ್ರಮುಖ ಆಟಗಾರರಾಗಿದ್ದಾರೆ,


ಭಾರತ-ಪಾಕಿಸ್ತಾನ ಪಂದ್ಯ ಎಲ್ಲಿ ನಡೆಯಲಿದೆ?


ಏಷ್ಯಾ ಕಪ್ 2023 ರ ಮೂರನೇ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಶ್ರೀಲಂಕಾದ ಕ್ಯಾಂಡಿಯಲ್ಲಿರುವ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.


ಭಾರತ-ಪಾಕ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭ?


ಭಾರತ ಮತ್ತು ಪಾಕಿಸ್ತಾನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಮಧ್ಯಾಹ್ನ 2:30ಕ್ಕೆ ನಡೆಯಲಿದೆ.


ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?


ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಡಿ ಸ್ಪೋರ್ಟ್ಸ್ ಚಾನೆಲ್‌’ನಲ್ಲಿ ಫ್ರೀ-ಡಿಶ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ. ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಮಾಡಲಾಗುತ್ತದೆ. ಇದನ್ನು ಬಳಕೆದಾರರು ಮೊಬೈಲ್‌ ನಲ್ಲಿ ಉಚಿತವಾಗಿ ವೀಕ್ಷಿಸಬಹುದು.


ಭಾರತ-ಪಾಕಿಸ್ತಾನದ ಸಂಭಾವ್ಯ ಪ್ಲೇಯಿಂಗ್ 11 ಆಟಗಾರರು:


ಭಾರತ - ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.


ಇದನ್ನೂ ಓದಿ: ಕೊಹ್ಲಿಯನ್ನು ಹುಡುಕಿಕೊಂಡು ಮೈದಾನಕ್ಕೆ ಬಂದ ಪಾಕ್ ಆಟಗಾರ! ನಂತರ ಹೇಳಿದ್ದು ಹೀಗೆ…


ಪಾಕಿಸ್ತಾನ - ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.