ಅಡಿಲೇಡ್: ಇಲ್ಲಿನ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಭಾರತ ತಂಡವು ಹೀನಾಯವಾಗಿ ಸೋಲುವ ಮೂಲಕ ಈಗ ವಿಶ್ವಕಪ್ ಗೆಲ್ಲುವ ಅದರ ಕನಸು ಭಗ್ನವಾಗಿದೆ.


COMMERCIAL BREAK
SCROLL TO CONTINUE READING

ಈಗ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸೋಲನ್ನು ಅನುಭವಿಸುವ ಮುಂಚಿನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ರೋಹಿತ್ ಶರ್ಮಾ ಕಣ್ಣಿರು ಹಾಕುತ್ತಿದ್ದಾರೆ. ಇದನ್ನು ಗಮನಿಸಿದ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬೆನ್ನು ತಟ್ಟಿ ಸಮಾಧಾನ ಹೇಳುತ್ತಿರುವುದನ್ನು ನಾವು ಕಾಣಬಹುದಾಗಿದೆ.


ಇದನ್ನೂ ಓದಿ : "ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ


ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ತಂಡದ ನಾಯಕನನ್ನಾಗಿ ರೋಹಿತ್ ಶರ್ಮಾರನ್ನು ಬಿಸಿಸಿಐ ನೇಮಕ ಮಾಡಿತ್ತು, ಆದರೆ ಭಾರತ ತಂಡವು ಈಗ ಇತ್ತೀಚಿನ ಪ್ರತಿಷ್ಠಿತ ಐಸಿಸಿ ಟೂರ್ನಿಗಳಲ್ಲಿ ಕೊನೆಯ ಕ್ಷಣದಲ್ಲಿ ತಂಡವು ಸೋಲನ್ನು ಅನುಭವಿಸುತ್ತಿರುವುದು ಈಗ ಆಡಳಿತ ಮಂಡಳಿಯ ತಲೆ ಬಿಸಿ ಮಾಡಿದೆ.ಈಗ ತಂಡವು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಕುರಿತಾಗಿ ಹಲವು ಪ್ರಶ್ನೆಗಳು ಎದುರಾಗಿವೆ.


7th Pay Commission: ದಿನ ಒಂದು ಗಂಟೆ ಹೆಚ್ಚು ಕೆಲಸ ಮಾಡುವಂತೆ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ


ಈಗ ಏನೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ಆಟಗಾರರು ಐಪಿಎಲ್ ಟೂರ್ನಿಗೆ ನೀಡುತ್ತಿರುವ ಪ್ರಾಮುಖ್ಯ್ಯತೆಯನ್ನು ವಿಶ್ವಕಪ್ ನಂತಹ ಪ್ರತಿಷ್ಠಿತ ಟೂರ್ನಿಗಳಿಗೆ ನೀಡದೆ ಇರುವುದಕ್ಕೆ ನೆಟ್ಟಿಗರು ಟೀಮ್ ಇಂಡಿಯಾದ ಆಟಗಾರರ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.