Jasprit Bumrah- Sam Konstas: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನ, ಕೊನೆಯ ಸೆಷನ್‌ನಲ್ಲಿ ಭಾರತೀಯ ನಾಯಕ ಜಸ್ಪ್ರೀತ್ ಬುಮ್ರಾ ಮತ್ತು ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಸ್ಯಾಮ್ ಕಾನ್ಸ್ಟಾಸ್ ನಡುವೆ ತೀವ್ರ ವಾಗ್ವಾದ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ʼಆ ರೀತಿ ತೊಂದರೆ ಕೊಟ್ರು ಅದಕ್ಕೆ ಧಾರವಾಹಿಯಿಂದ ಹೊರಬಂದೆʼ ಖ್ಯಾತ ಹಿರಿಯ ಸಿರೀಯಲ್‌ ನಟಿ ಸೆನ್ಸೇಷನಲ್‌ ಕಾಮೆಂಟ್!! 


ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಸಮಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಸ್ಟ್ರೈಕ್ ತೆಗೆದುಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದಾಗ ಈ ಹೈಡ್ರಾಮ ಕಾಣಿಸಿಕೊಂಡಿದೆ.


ಖವಾಜ ಅವರು ಬುಮ್ರಾ ಬೌಲಿಂಗ್ ಮಾಡಲು ರನ್ ಅಪ್ ತೆಗೆದುಕೊಳ್ಳುತ್ತಿದ್ದಾಗ ಆಟವಾಡಲು ಸಿದ್ಧರಾಗಿರಲಿಲ್ಲ. ಇದಕ್ಕೆ ಬುಮ್ರಾ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ವೇಳೆ ಪ್ರವೇಶಿಸಿದ ಕೊನ್ಸ್ಟಾಸ್ ಬುಮ್ರಾ ಅವರನ್ನು ಬೌಲಿಂಗ್ ಮಾಡದಂತೆ ತಡೆದಿದ್ದಾರೆ. ಆಗ  ಜಸ್ಪ್ರೀತ್ ಬುಮ್ರಾ ಅವರು ಸ್ಯಾಮ್ ಕಾನ್ಸ್ಟಾಸ್‌ಗೆ 'ಏನು ಸಮಸ್ಯೆ?' ಎಂದು ಕೇಳಿದ್ದಾರೆ. ಈ ಸಂದರ್ಭದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಸ್ಯಾಮ್ ಕಾನ್ಸ್ಟಾಸ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದನ್ನು ನೋಡಿದ ಮೈದಾನದ ಅಂಪೈರ್ ತಕ್ಷಣ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.


ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು: ಪ್ರಾಂಶುಪಾಲ ಸೇರಿ ಇಬ್ಬರು ಅಮಾನತು


ಇದಾದ ಸ್ವಲ್ಪ ಸಮಯದಲ್ಲೇ ಉಸ್ಮಾನ್ ಖವಾಜಾ ವಿಕೆಟ್‌ ಪಡೆದು ಬುಮ್ರಾ ಸಂಭ್ರಮಿಸಿದ್ದರು. ಜಸ್ಪ್ರೀತ್ ಬುಮ್ರಾ ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆದು, ನಾನ್-ಸ್ಟ್ರೈಕರ್ನ ತುದಿಯಲ್ಲಿ ನಿಂತಿದ್ದ ಸ್ಯಾಮ್ ಕಾನ್ಸ್ಟಾಸ್ ಕಡೆಗೆ ಹಿಂತಿರುಗಿ ನೋಡಿದ್ದರು. ಈ ಹಿಂದೆ ವಿರಾಟ್ ಕೊಹ್ಲಿ ಜೊತೆಗೂ ಇದೇ ಸ್ಯಾಮ್‌ ಜಗಳವಾಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ