ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ 33ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ(357-8) ಬೃಹತ್ ಮೊತ್ತ ಪೇರಿಸಿದೆ.
ಆರಂಭಿಕ ಆಟಗಾರನಾಗಿ ಆಗಮಿಸಿದ ಶುಭಮನ್ ಗಿಲ್ ಶ್ರೀಲಂಕಾ ಬೌಲರ್ ಗಳ ಬೆವರಿಳಿಸಿದರು. 92 ಎಸೆತಗಳಲ್ಲಿ 11 ಬೌಂಡರಿ 2 ಸಿಕ್ಸರ್ ಇದ್ದ 92 ರನ್ ಗಳಿಸಿದರು.
ಈ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಮತ್ತೊಂದು ಶತಕ ಬಾರಿಸುವ ಅವಕಾಶದಿಂದ ವಂಚಿತರಾದರು. 94 ಎಸೆಗಳಲ್ಲಿ 11 ಬೌಂಡರಿ ಇದ್ದ 88 ರನ್ ಗಳಿಸಿ ಕೊಹ್ಲಿ ಔಟಾದರು.
ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ 56 ಎಸೆಗಳಲ್ಲಿ 6 ಸಿಕ್ಸರ್ ಮತ್ತು 3 ಬೌಂಡರಿ ಇದ್ದ 82 ರನ್ ಗಳಿಸಿದರು.
ಗಿಲ್, ಕೊಹ್ಲಿ, ಅಯ್ಯರ್ ಮತ್ತು ಜಡೇಜಾ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಗಳ ಬೃಹತ್ ಮೊತ್ತ ಪೇರಿಸಿತು.
ಈ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾದ ವೇಗದ ಬೌಲರ್ ದಿಲ್ಶನ್ ಮಧುಶಂಕ 80ಕ್ಕೆ 5 ವಿಕೆಟ್ ಪಡೆಯುವ ಮೂಲಕ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.
ಶ್ರೀಲಂಕಾದ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಪರಿಣಾಮ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು.