ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ(IPL Auction 2024) ದಿನಗಣನೆ ಆರಂಭವಾಗಿದೆ.
ಈ ಬಾರಿಯ ಐಪಿಎಲ್ ಹರಾಜನ್ನು ಡಿಸೆಂಬರ್ 19ರಂದು ದುಬೈನಲ್ಲಿ ಆಯೋಜಿಸಲಾಗಿದೆ.
ತಂಡದಲ್ಲಿ ಸ್ಟಾರ್ ಆಟಗಾರರನ್ನು ಉಳಿಸಿಕೊಂಡು, ಕಳಪೆ ಪ್ರದರ್ಶನ ನೀಡಿರುವರಿಗೆ ಗೇಟ್ ಪಾಸ್ ನೀಡಲು ಫ್ರಾಂಚೈಸಿಗಳು ಯೋಜನೆ ರೂಪಿಸಿವೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರ ಮೇಲೆ ತಂಡಗಳು ಕೋಟಿಗಟ್ಟಲೇ ಹಣ ಖರ್ಚು ಮಾಡುತ್ತಿವೆ.
ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಗೆ ಕೋಟ್ಯಂತರ ರೂ. ನೀಡಿ ತಮ್ಮ ತಂಡಕ್ಕೆ ಬರ ಮಾಡಿಕೊಳ್ಳಲು ಫ್ರಾಂಚೈಸಿಗಳು ಪ್ಲ್ಯಾನ್ ಮಾಡುತ್ತಿವೆ.
ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನ್ಯೂಜಿಲ್ಯಾಂಡ್ ಆಲ್ರೌಂಡರ್ ರಚಿನ್ ರವೀಂದ್ರ ಮೇಲೆ ಎಲ್ಲಾ ಫ್ರಾಂಚೈಸಿಗಳು ಕಣ್ಣಿಟ್ಟಿವೆ.
ಹರಾಜಿನಲ್ಲಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೇಲೆ ಹೆಚ್ಚು ಹಣ ಸುರಿಯಲು ಮಾಲೀಕರು ಆಸಕ್ತಿ ಹೊಂದಿದ್ದಾರೆ.
ವಿಶ್ವಕಪ್ ನಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ನ್ಯೂಜಿಲ್ಯಾಂಡ್ ನ ಡ್ಯಾರಿಲ್ ಮಿಚೆಲ್ ಖರೀದಿಗೆ ತಂಡಗಳು ಹೆಚ್ಚಿನ ಆಸಕ್ತಿ ತೋರಿವೆ.