ತವರಿನಲ್ಲಿ ನಡೆಯಲಿರುವ ODI ವಿಶ್ವಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಸಮಿತಿ ಸೆಪ್ಟೆಂಬರ್ 5ರಂದು ಪ್ರಕಟಿಸಿದೆ. ಈ ಪಂದ್ಯದಲ್ಲಿ ಪ್ರಮುಖ 7 ಮಂದಿ ಆಟಗಾರರನ್ನು ಕೈಬಿಡಲಾಗಿದ್ದು, ಅನೇಕರ ಅಸಮಾಧಾನಕ್ಕೆ ಕಾರಣವಾಗಿದೆ.
ನಾವಿಂದು ಈ ವರದಿಯಲ್ಲಿ ಅರ್ಹತೆ ಇದ್ದರೂ ವಿಶ್ವಕಪ್ ಭಾರತ ತಂಡದಲ್ಲಿ ಅವಕಾಶ ಪಡೆಯದ 7 ಸ್ಟಾರ್ ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಕುಲದೀಪ್ ಯಾದವ್ ಇತ್ತೀಚಿನ ದಿನಗಳಲ್ಲಿ ಒಡಿಐ ಸ್ವರೂಪದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕಾರಣ ಯುಜ್ವೇಂದ್ರ ಚಹಲ್ ಕೈಬಿಟ್ಟು, ಅವರಿಗೆ ಅವಕಾಶ ನೀಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದರೂ ಸಹ ಕೆ.ಎಲ್ ರಾಹುಲ್ ಹಾಗೂ ಇಶಾನ್ ಕಿಶನ್’ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಅನೇಕ ಕ್ರಿಕೆಟ್ ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಶಿಖರ್ ಧವನ್: ಕಳೆದ 2015 ಹಾಗೂ 2019ರ ಏಕದಿನ ವಿಶ್ವಕಪ್ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದ ಶಿಖರ್ ಧವನ್’ಗೆ ಈ ಬಾರಿ ಅವಕಾಶ ನೀಡಲಾಗಿಲ್ಲ.
ತಿಲಕ್ ವರ್ಮಾ: ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದ ತಿಲಕ್ ವರ್ಮಾರಿಗೂ ಅವಕಾಶ ಕೈ ತಪ್ಪಿದೆ.
ಕನ್ನಡಿಗ ಪ್ರಸಿಧ್ ಕೃಷ್ಣ ಅವರಿಗೂ ವಿಶ್ವಕಪ್ ತಂಡದಲ್ಲಿ ಸ್ಥಾನ ಕೈ ತಪ್ಪಿದೆ. ಐರ್ಲೆಂಡ್ ವಿರುದ್ದದ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ 4 ವಿಕೆಟ್ ಕಬಳಿಸಿದ್ದ ಅವರಿಗೆ ಏಷ್ಯಾಕಪ್’ನಲ್ಲಿ ಸ್ಥಾನ ಸಿಕ್ಕಿದ್ದರೂ ಪ್ಲೇಯಿಂಗ್ 11ನಲ್ಲಿ ಅವಕಾಶ ಸಿಕ್ಕಿಲ್ಲ.
ಟೀಂ ಇಂಡಿಯಾದ ಸ್ಟಾರ್ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಮಾತ್ರ ತಂಡದಲ್ಲಿ ಸ್ಪಿನ್ನರ್ ಆಗಿ ಅವಕಾಶ ಪಡೆದಿದ್ದಾರೆ.
ವಾಷಿಂಗ್ಟನ್ ಸುಂದರ್ ಬದಲು ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಶ್ವಿನ್ ಬೇಡ, ಕನಿಷ್ಟ ಪಕ್ಷ ವಾಷಿಂಗ್ಟನ್ ಸುಂದರ್ ಅವರಿಗಾದರೂ ತಂಡದಲ್ಲಿ ಸ್ಥಾನ ನೀಡಬೇಕಿತ್ತು ಎಂಬುದು ಅನೇಕರ ಅಭಿಪ್ರಾಯವಾಗಿದೆ.