ನವದೆಹಲಿ: ತಮಿಳುನಾಡಿನ ನಾರಾಯಣ ಜಗದೀಸನ್ ಸೋಮವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಮಿಳುನಾಡು ಮತ್ತು ಅರುಣಾಚಲ ಪ್ರದೇಶ ನಡುವಿನ ಪಂದ್ಯದಲ್ಲಿ ಅಜೇಯ 277 ರನ್ ಗಳಿಸಿ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.
ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ, ನಾರಾಯಣ್ ಜಗದೀಸನ್ 141 ಎಸೆತಗಳಲ್ಲಿ 196.45 ಸ್ಟ್ರೈಕ್ ರೇಟ್‌ನೊಂದಿಗೆ 277 ರನ್‌ಗಳನ್ನು ಸಿಡಿಸುವ ಮೂಲಕ ಪಂದ್ಯಾವಳಿಯಲ್ಲಿ ಐದನೇ ಸತತ ಶತಕವನ್ನು ಗಳಿಸಿದ್ದಾರೆ. ಆ ಮೂಲಕ ಲಿಸ್ಟ್ ಎ ಕ್ರಿಕೆಟ್‌ನ ಇತಿಹಾಸದಲ್ಲಿ ಶ್ರೀಲಂಕಾದ ದಂತಕಥೆ ಕುಮಾರ್ ಸಂಗಕರ ಅವರ ದಾಖಲೆಯನ್ನು ಜಗದೀಶನ್ ಹಿಂದಿಕ್ಕಿದ್ದಾರೆ.
ಇದನ್ನೂ ಓದಿ: ಚುಮು ಚುಮು ಚಳಿ ನಡುವೆ ರಾಜ್ಯದ ಜನತೆಗೆ ಮತ್ತೆ ವರುಣನ ಕಾಟ- ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ವರದಿಗಳ ಪ್ರಕಾರ, ಅವರು ವಿಜಯ್ ಹಜಾರೆ ಟ್ರೋಫಿಯ ಒಂದೇ ಋತುವಿನಲ್ಲಿ ಸತತವಾಗಿ ಅತಿ ಹೆಚ್ಚು ಶತಕಗಳನ್ನು ಹೊಂದಿದ್ದಾರೆ, ತಲಾ ನಾಲ್ಕು ಶತಕಗಳನ್ನು ಗಳಿಸಿದ ವಿರಾಟ್ ಕೊಹ್ಲಿ, ಪೃಥ್ವಿ ಶಾ, ರುತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್ ಅವರಂತಹ ಆಟಗಾರರನ್ನು ಮೀರಿಸಿದ್ದಾರೆ.27 ಅಕ್ಟೋಬರ್ 2016 ರಂದು 2016-17 ರ ರಣಜಿ ಟ್ರೋಫಿಯಲ್ಲಿ ತಮಿಳುನಾಡಿಗೆ ಪ್ರಥಮ ದರ್ಜೆಯ ಚೊಚ್ಚಲ ಪಂದ್ಯದೊಂದಿಗೆ ತಮ್ಮ ಕ್ರಿಕೆಟ್ ಪ್ರಯಾಣವನ್ನು ಪ್ರಾರಂಭಿಸಿದರು.
Some freaking innings from Tamilnadu. Narayan jagadeesan on fire in this Vijay hazare.#VijayHazareTrophy#naryanjagadeesan pic.twitter.com/zEMdp2Lw1f
— Vali Pspk (@pspk_vali) November 21, 2022
ಜಗದೀಸನ್ ಅವರು ಆರು ಪಂದ್ಯಗಳಲ್ಲಿ 156.00 ಸರಾಸರಿಯಲ್ಲಿ 624 ರನ್ ಗಳಿಸಿ, ಇದುವರೆಗಿನ ಪಂದ್ಯಾವಳಿಯಲ್ಲಿ ಪ್ರಮುಖ ರನ್ ಗಳಿಸಿದ ಆಟಗಾರರಾಗಿದ್ದಾರೆ. ಇದರೊಂದಿಗೆ 2015ರ ವಿಶ್ವಕಪ್‌ನಲ್ಲಿ ಸತತ ನಾಲ್ಕು ಶತಕ ಸಿಡಿಸಿದ್ದ ಕುಮಾರ ಸಂಗಕರ ಅವರನ್ನು ಹಿಂದಿಕ್ಕಿದ್ದಾರೆ.
ಜಗದೀಸನ್ ಅವರು ಬಾಂಗ್ಲಾದೇಶ ವಿರುದ್ಧ 105*, ಇಂಗ್ಲೆಂಡ್ ವಿರುದ್ಧ 117*, ಆಸ್ಟ್ರೇಲಿಯಾ ವಿರುದ್ಧ 104 ಮತ್ತು ಸ್ಕಾಟ್ಲೆಂಡ್ ವಿರುದ್ಧ 124 ರನ್ ಗಳಿಸಿ ಪಂದ್ಯಾವಳಿಯಲ್ಲಿ 108.20 ಸರಾಸರಿಯಲ್ಲಿ 541 ರನ್ ಗಳಿಸಿದರು. ಅವರು ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.