ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೈದನೇ ಆವೃತ್ತಿಯು ಭರ್ಜರಿಯಾಗಿ ಸಾಗುತ್ತಿದೆ. ಇದೀಗ ಲೀಗ್‌ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಪ್ಲೇ ಆಫ್‌ ಪಂದ್ಯಗಳು ಇಂದಿನಿಂದ ಆರಂಭಗೊಳ್ಳಲಿದೆ. ಮೊದಲ ನಾಲ್ಕು ಸ್ಥಾನಗಳನ್ನು ಪಡೆದ ತಂಡಗಳು ಪ್ಲೇ ಆಫ್‌ ಜಿದ್ದಾಜಿದ್ದಿಯಲ್ಲಿ ಭಾಗಿಯಾಗಲಿವೆ.  


COMMERCIAL BREAK
SCROLL TO CONTINUE READING

ಇದನ್ನು ಓದಿ: ‘ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ’


ಪ್ಲೇ ಆಫ್‌ನ ಮೊದಲ ಪಂದ್ಯ ಇಂದು ಸಂಜೆ 7.30ಕ್ಕೆ ಕೊಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ನಡೆಯಲಿದೆ. ರಾಜಸ್ಥಾನ ರಾಯಲ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ನಡುವೆ ಈ ಪಂದ್ಯ ನಡೆಯಲಿದ್ದು, ಜಿದ್ದಾಜಿದ್ದಿಯಲ್ಲಿ ಯಾರು ಫೈನಲ್‌ಗೆ ನೇರ ಪ್ರವೇಶ ಪಡೆಯುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ. 


ಈಗಾಗಲೇ ಒಂದು ಬಾರಿ ಚಾಂಪಿಯನ್ಸ್‌ ಪಟ್ಟ ಪಡೆದಿರುವ ರಾಜಸ್ಥಾನ ರಾಯಲ್ಸ್‌ ತಂಡ ಮತ್ತೊಮ್ಮೆ ಐಪಿಎಲ್‌ ಗರಿ ಮುಡಿಯಲು ಕಾತುರವಾಗಿದೆ. ಇನ್ನೊಂದೆಡೆ ಮೊದಲ ಬಾರಿಗೆ ಐಪಿಎಲ್‌ ಪ್ರವೇಶಿಸಿರುವ ಗುಜರಾತ್‌ ಟೈಟಾನ್ಸ್‌ ತಂಡವು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ, ಅಂಕಪಟ್ಟಿಯಲ್ಲಿ 20 ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿಯೂ ಇದೆ. 


ಇದೀಗ ಉಭಯ ತಂಡಗಳು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಟ್ರೋಫಿ ಮೇಲೆ ಕಣ್ಣಿಟ್ಟಿದ್ದು, ಯಾವ ತಂಡ ವಿಜೇತರಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಚೊಚ್ಚಲ ಬಾರಿಗೆ ನಾಯಕತ್ವ ವಹಿಸಿದ ಹಾರ್ದಿಕ್‌ ಪಾಂಡ್ಯ ಗುಜರಾತ್‌ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇನ್ನೊಂದೆಡೆ ರಾಜಸ್ಥಾನ ರಾಯಲ್ಸ್‌ ತಂಡ ಸಂಜು ಸ್ಯಾಮ್ಸನ್‌ ನಾಯಕತ್ವದೊಂದಿಗೆ ಸಾಗಿದ್ದು, ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. 


ಇದನ್ನು ಓದಿ: Fenugreek Seed Benefits: ಮೆಂತೆ ಕಾಳುಗಳ ಸೇವನೆಯಿಂದಾಗುವ ಈ ಅದ್ಭುತ ಲಾಭ ನಿಮಗೆ ತಿಳಿದಿದೆಯೇ?


ಸಂಭಾವ್ಯ ಆಟಗಾರರ ಪಟ್ಟಿ: 
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ಕ್ಯಾ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ


ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಕ್ಯಾ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.