15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಶಸ್ವಿಯಾಗಿ ನಡೆಯುತ್ತಿದ್ದು, ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಸೆಣಸಾಡಲಿದೆ.
ಇದನ್ನು ಓದಿ: ಒಮ್ಮೆ ಫುಲ್ ಚಾರ್ಜ್ ಮಾಡಿದರೆ 300 ಕಿಮೀ ವರೆಗೆ ಮೈಲೇಜ್ ನೀಡುತ್ತಂತೆ ಈ ಹೊಸ ಸ್ಕೂಟರ್
ಸತತ ಸೋಲುಗಳಿಂದ ಕಂಗಾಲಾಗಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವಿಗಾಗಿ ತಯಾರು ನಡೆಸುತ್ತಿದೆ. ಇನ್ನೊಂದೆಡೆ ರಾಜಸ್ಥಾನ ರಾಯಲ್ಸ್ ತಂಡವೂ ಗೆಲುವಿನ ಲಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತಿದ್ದರೂ ಸಹ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅನುಭವಿಸಿದ ಸೋಲು ತಂಡಕ್ಕೆ ಆಘಾತ ನೀಡಿತ್ತು.
ಇಲ್ಲಿವರೆಗೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಪಡೆ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಸಾಧಿಸಿದ್ದು, ಮೂರರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿದೆ. ಇನ್ನೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿರುವ ಒಂಬತ್ತು ಆಟಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದ್ದು, ಆರರಲ್ಲಿ ಮಖಾಡೆ ಮಲಗಿದೆ. ಹೀಗಾಗಿ, ತಂಡವು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಸದ್ಯ ಉಭಯ ತಂಡಗಳು ಗೆಲುವಿನ ಲಯಕ್ಕೆ ಮರಳಲು ಭರ್ಜರಿ ತಯಾರಿ ನಡೆಸುತ್ತಿದೆ.
ಪಿಚ್ ರಿಪೋರ್ಟ್: ವಾಂಖೆಡೆ ಕ್ರೀಡಾಂಗಣದ ಬೌಂಡರಿ ಪ್ರಮಾಣ ಕಡಿಮೆ ಇರುವುದರಿಂದ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಅಂಗಣ ಎನಿಸಿಕೊಂಡಿದೆ. ಇನ್ನೊಂದೆಡೆ ಸಂಜೆ ವೇಳೆ ಇಬ್ಬನಿ ಹೆಚ್ಚಾಗಿರುವ ಕಾರಣ ಪಂದ್ಯದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.
ಇದನ್ನು ಓದಿ: Gold-Silver Price: ಚಿನ್ನ ಪ್ರಿಯರೇ ಗುಡ್ ನ್ಯೂಸ್: ಮತ್ತೆ ಇಳಿಕೆಯಾಗಿದೆ ಚಿನ್ನದ ಬೆಲೆ!
ಸಂಭಾವ್ಯ ಆಟಗಾರರ ಪಟ್ಟಿ:
ಕೋಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ಕ್ಯಾ), ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್ (ವಿ.ಕೀ), ರಿಂಕು ಸಿಂಗ್, ಆಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.