CSK vs GT: ಗುಜರಾತ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕುತ್ತಾ ಚೆನ್ನೈ!

ಚೊಚ್ಚಲ ಬಾರಿಗೆ ನಾಯಕತ್ವ ವಹಿಸಿಕೊಂಡ ಹಾರ್ದಿಕ್‌ ಪಾಂಡ್ಯ ಟೂರ್ನಿಯಲ್ಲಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಗುಜರಾತ್‌ ಟೈಟಾನ್ಸ್‌ ತಂಡವು ಮೊದಲ ಬಾರಿಗೆ ಟೂರ್ನಿಯಲ್ಲಿ ಆಡುತ್ತಿದ್ದರೂ ಸಹ ಆಟದ ವೈಖರಿ ಮಾತ್ರ ಭರ್ಜರಿಯಾಗಿದೆ.    

Written by - Bhavishya Shetty | Last Updated : May 15, 2022, 09:52 AM IST
  • ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ಪಂದ್ಯ
  • ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಟ
  • ಉಭಯ ತಂಡಗಳ ಆಟ ನೋಡಲು ಕ್ರಿಕೆಟ್‌ ಪ್ರಿಯರು ಕಾತುರ
CSK vs GT: ಗುಜರಾತ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕುತ್ತಾ ಚೆನ್ನೈ!  title=
Indian Premier League

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 62ನೇ ಪಂದ್ಯವು ಇಂದು ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ನಡುವೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳ ಹೋರಾಟ ನೋಡಲು ಐಪಿಎಲ್‌ ಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. 

ಇದನ್ನು ಓದಿ: ಕಾರು ಅಪಘಾತ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ

ಚೊಚ್ಚಲ ಬಾರಿಗೆ ನಾಯಕತ್ವ ವಹಿಸಿಕೊಂಡ ಹಾರ್ದಿಕ್‌ ಪಾಂಡ್ಯ ಟೂರ್ನಿಯಲ್ಲಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಗುಜರಾತ್‌ ಟೈಟಾನ್ಸ್‌ ತಂಡವು ಮೊದಲ ಬಾರಿಗೆ ಟೂರ್ನಿಯಲ್ಲಿ ಆಡುತ್ತಿದ್ದರೂ ಸಹ ಆಟದ ವೈಖರಿ ಮಾತ್ರ ಭರ್ಜರಿಯಾಗಿದೆ.  

ಈವರೆಗೆ ಗುಜರಾತ್‌ ಟೈಟಾನ್ಸ್‌ ಆಡಿರುವ ಹನ್ನೆರಡು ಆಟಗಳ ಪೈಕಿ ಒಂಬತ್ತರಲ್ಲಿ ಗೆಲುವು ಸಾಧಿಸಿದ್ದು, ಮೂರರಲ್ಲಿ ಸೋಲು ಅನುಭವಿಸಿದೆ. ಇನ್ನು ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. 

ಇನ್ನೊಂದೆಡೆ ಟೂರ್ನಿಯುದ್ದಕ್ಕೂ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್‌ಕಿಂಗ್ಸ್‌ ತಂಡದ ನಾಯಕತ್ವವನ್ನು ಈ ಹಿಂದೆ ರವೀಂದ್ರ ಜಡೇಜಾ ವಹಿಸಿಕೊಂಡಿದ್ದರು. ಆದರೆ ನಿರ್ವಹಣೆ ಕಷ್ಟಸಾಧ್ಯವಾದ ಕಾರಣ ಕ್ಯಾಪ್ಟನ್‌ ಕೂಲ್‌ ಎಂ.ಎಸ್‌ ಧೋನಿ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಈ ಬಳಿಕ ಕೊಂಚ ಸುಧಾರಿಸಿಕೊಂಡಿರುವ ತಂಡವು ಇದೀಗ ಸಮಾಧಾನಕರ ಪ್ರದರ್ಶನ ನೀಡುತ್ತಿದೆ. 

ಸದ್ಯ ಈವರೆಗೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಹನ್ನೆರಡು ಪಂದ್ಯಗಳನ್ನಾಡಿದೆ. ಅದರಲ್ಲಿ ಕೇವಲ ನಾಲ್ಕು ಪಂದ್ಯಗಳನ್ನು  ಗೆದ್ದಿದ್ದು ಹೊರತಾಗಿ ಉಳಿದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಗಳಿಸಿದೆ. 

ಒಟ್ಟಾರೆಯಾಗಿ ಟೂರ್ನಿಯಲ್ಲಿ ಮೊದಲ ಸ್ಥಾನ ಪಡೆದ ಮತ್ತು ಕೊನೆಯ ಸ್ಥಾನದಲ್ಲಿರುವ ಎರಡು ತಂಡಗಳಿಗೆ ಇಂದು ಪಂದ್ಯ ನಡೆಯಲಿದೆ. ಉಭಯ ತಂಡಗಳ ಈ ಆಟ ನೋಡಲು ಐಪಿಎಲ್‌ ಪ್ರಿಯರು ಕಾದುಕುಳಿತಿದ್ದಾರೆ. 

ಸಂಭಾವ್ಯ ಆಟಗಾರರ ಪಟ್ಟಿ 
ಚೆನ್ನೈ ಸೂಪರ್‌ ಕಿಂಗ್ಸ್‌: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮೊಯಿನ್ ಅಲಿ, ಎಂಎಸ್ ಧೋನಿ (ಕ್ಯಾ & ವಿ.ಕೀ), ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ

ಇದನ್ನು ಓದಿ: KKR vs SRH, IPL 2022: ಕೆಕೆಆರ್ ಎದುರು ಸೋತ ಹೈದರಾಬಾದ್ ಪ್ಲೇ ಆಫ್ ಕನಸು ನುಚ್ಚುನೂರು!

ಗುಜರಾತ್‌ ಟೈಟಾನ್ಸ್‌: 
ವೃದ್ಧಿಮಾನ್ ಸಹಾ (ವಿ.ಕೀ), ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ಕ್ಯಾ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News