15ನೇ ಆವೃತ್ತಿಯ 48 ನೇ ಐಪಿಎಲ್ ಕ್ರಿಕೆಟ್ ಪಂದ್ಯಾಟ ಇಂದು ಮಹಾರಾಷ್ಟ್ರದ ಡಾ.ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಉಭಯ ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಇನ್ನು ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಗುಜರಾತ್ ತಂಡ ಅಗ್ರಸ್ಥಾನ ಕಾಪಾಡಿಕೊಳ್ಳಲು ಹೋರಾಡಿದರೆ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ತಂಡವು ಗೆಲುವಿನ ಲಯಕ್ಕೆ ಮರಳಲು ಹೆಣಗಾಡುತ್ತಿದೆ.
ಇದನ್ನು ಓದಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬೊಮ್ಮಯಿ ಸರ್ಕಾರಕ್ಕೆ ಮೇಜರ್ ಸರ್ಜರಿ ಸಾಧ್ಯತೆ!
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಆಡಿರುವ ಒಂಬತ್ತು ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲನ್ನಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಟೂರ್ನಿಗೆ ಮೊದಲ ಬಾರಿ ಎಂಟ್ರಿ ಕೊಟ್ಟಿರುವ ಗುಜರಾತ್ ಅದ್ಭುತ ಪ್ರದರ್ಶನ ನೀಡುತ್ತಿದೆ.
ಇನ್ನು ಪಂಜಾಬ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, ಐದರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನ ಗಳಿಸಿದೆ. ಮಯಾಂಕ್ ಅಗರ್ವಾಲ್ ನೇತೃತ್ವದ ತಂಡ ಗೆಲುವಿನ ಲಯಕ್ಕೆ ಮರಳಲು ಹೆಣಗಾಡುತ್ತಿದೆ.
ಇದನ್ನು ಓದಿ: ಅಕ್ಷಯ ತೃತೀಯದ ದಿನ ಆಭರಣಗಳ ಖರೀದಿ ಬದಲು ಡಿಜಿಟಲ್ ಚಿನ್ನದ ಮೇಲೆ ಕೂಡಾ ಹೂಡಿಕೆ ಮಾಡಬಹುದು
ಸಂಭಾವ್ಯ ಆಟಗಾರರ ಪಟ್ಟಿ
ಗುಜರಾತ್ ಟೈಟಾನ್ಸ್:
ಶುಭ್‌ಮನ್ ಗಿಲ್, ವೃದ್ಧಿಮಾನ್ ಸಹಾ (ವಿ.ಕೀ), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ಕ್ಯಾ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ಯಶ್ ದಯಾಲ್
ಪಂಜಾಬ್ ಕಿಂಗ್ಸ್:
ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಸಂದೀಪ್ ಶರ್ಮಾ, ಅರ್ಶ್‌ದೀಪ್ ಸಿಂಗ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.