ಹದಿನೈದನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ಯಶಸ್ವಿಯಾಗಿ ನಡೆಯುತ್ತಿದೆ. ಇಂದು ಸಂಜೆ  7.30ಕ್ಕೆ ನಡೆಯಲಿರುವ 60ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಎದುರಿಸಲಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಉಭಯ ತಂಡಗಳು ಇಂದು ಯಾವ ರೀತಿ ಆಟ ಆಡಲಿದೆ ಎಂದು ಕಾದುನೋಡಬೇಕಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಕಲ್ಲಂಗಡಿ ಹಣ್ಣು ಕೆಂಪಗೆ ಮತ್ತು ಸಿಹಿಯಾಗಿದೆಯೇ ಎಂದು ಸುಲಭವಾಗಿ ಹೀಗೆ ಕಂಡುಕೊಳ್ಳಿ ..!


ಇನ್ನು ಫಾಫ್‌ ಡು ಪ್ಲೆಸಿಸ್‌ ನಾಯಕತ್ವದಲ್ಲಿ ಆಡುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಟೂರ್ನಿಯಲ್ಲಿ ಅದ್ಭುತವಾಗಿ ಆಡುತ್ತಿದೆ. ಇಲ್ಲಿವರೆಗೆ ಆಟವಾಡಿರುವ  ಹನ್ನೆರಡು ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ಸಾಧಿಸಿದ್ದು, ಐದರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. 


ಇನ್ನು ಪಂಜಾಬ್‌ ಕಿಂಗ್ಸ್‌ ತಂಡವನ್ನು ಮಯಾಂಕ್‌ ಅಗರ್‌ವಾಲ್‌ ಮುನ್ನಡೆಸುತ್ತಿದ್ದು, ಈವರೆಗೆ ಒಟ್ಟು ಹನ್ನೊಂದು ಪಂದ್ಯಗಳನ್ನಾಡಿದೆ. ಈ ಪೈಕಿ ಐದರಲ್ಲಿ ಗೆಲುವು ಸಾಧಿಸಿದ್ದು, ಆರರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಸದ್ಯ ಉಭಯ ತಂಡಗಳು ಪ್ಲೇ ಆಫ್‌ಗೆ ಪ್ರವೇಶ ಪಡೆಯಲು ಹೋರಾಟ ನಡೆಯುತ್ತಿದೆ. ಈ ಮೂಲಕ ಇಂದಿನ ಪಂದ್ಯವು ಕುತೂಹಲ ಕೆರಳಿಸಿದೆ. 


ಸಂಭಾವ್ಯ ಆಟಗಾರರ ಪಟ್ಟಿ: 
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ಕ್ಯಾ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮೊರೊರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್


ಇದನ್ನು ಓದಿ: ಗ್ರಾಹಕರಿಗೆ ಕೊಂಚ ರಿಲೀಫ್‌: ಇಲ್ಲಿದೆ ಇಂದಿನ ತರಕಾರಿ ಬೆಲೆ


ಪಂಜಾಬ್ ಕಿಂಗ್ಸ್: 
ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಮಯಾಂಕ್ ಅಗರ್ವಾಲ್ (ಕ್ಯಾ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ರಿಷಿ ಧವನ್. ರಾಹುಲ್ ಚಹಾರ್, ಕಗಿಸೊ ರಬಾಡ, ಇಶಾನ್ ಪೊರೆಲ್, ಅರ್ಷದೀಪ್ ಸಿಂಗ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.