ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 54ನೇ ಪಂದ್ಯವು ಇಂದು ಮಧ್ಯಾಹ್ನ 3.30ಕ್ಕೆ ಪ್ರಾರಂಭವಾಗಲಿದ್ದು, ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಧ್ಯೆ ನಡೆಯಲಿದೆ. ಉಭಯ ತಂಡಗಳು ಸಹ ಪ್ಲೇ ಆಫ್‌ಗೆ ಪ್ರವೇಶ ಪಡೆಯಲು ಹೋರಾಟ ನಡೆಸಲಿವೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: Weight Loss: ತೂಕ ಕಳೆದುಕೊಳ್ಳುವಾಗ ಈ ತಪ್ಪುಗಳನ್ನು ಮಾಡಲೇಬಾರದು


ಮುಂಬರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಪಡೆದರೆ ಮಾತ್ರ ಆರ್‌ಸಿಬಿ ತಂಡವು ಪ್ಲೇ ಆಫ್‌ಗೆ ಪ್ರವೇಶ ಪಡೆಯಬಹುದು. ಹೀಗಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಾಲಿಗೆ ಈ ಪಂದ್ಯವು ನಿರ್ಣಾಯಕವಾಗಲಿದೆ. ಇನ್ನೊಂದೆಡೆ ಆರ್‌ಸಿಬಿಯನ್ನು ಕಟ್ಟಿಹಾಕಲು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಭರ್ಜರಿ ತಯಾರಿ ನಡೆಸುತ್ತಿದೆ. 


ಫಾಫ್‌ ಡು ಪ್ಲೆಸಿಸ್‌ ನಾಯಕತ್ವದಲ್ಲಿ ಆಡುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಇನ್ನು ಆಡಿರುವ ಹನ್ನೊಂದು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಸಾಧಿಸಿದ್ದು, ಐದರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿದೆ. 


ಇನ್ನೊಂದೆಡೆ ಕೇನ್‌ ವಿಲಿಯಮ್ಸನ್‌ ನೇತೃತ್ವದಲ್ಲಿ ಕಣಕ್ಕಿಳಿದಿರುವ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಟೂರ್ನಿಯಲ್ಲಿ ಸಮಾಧಾನಕರ ಪ್ರದರ್ಶನ ನೀಡುತ್ತಿದೆ. ಆಡಿರುವ ಹತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು, ಉಳಿದ ಪಂದ್ಯದಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. 


ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ನಿರ್ಣಾಯಕವಾಗಲಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ತೀವ್ರ ಕುತೂಹಲ ಮೂಡಿಸಿದೆ. 


ಇದನ್ನು ಓದಿ: ದೇಶದ ಕೆಲವೆಡೆ ಇಂಧನ ಬೆಲೆ ಏರಿಕೆ: ಇಲ್ಲಿದೆ ನೋಡಿ ನಿಮ್ಮೂರಿನ ಪೆಟ್ರೋಲ್‌-ಡೀಸೆಲ್‌ ದರಪಟ್ಟಿ


ಸಂಭಾವ್ಯ ಆಟಗಾರರ ಪಟ್ಟಿ: 


ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಕ್ಯಾ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿ.ಕೀ), ಶಶಾಂಕ್ ಸಿಂಗ್, ಸೀನ್ ಅಬಾಟ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಟಿ ನಟರಾಜನ್ / ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್


ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ಕ್ಯಾ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್‌ವುಡ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.