ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಆವೃತ್ತಿಯ 52 ನೇ ಪಂದ್ಯ ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ.ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.
ಪ್ಲೇ ಆಫ್ ಪ್ರವೇಶಿಸಲು ಉಭಯ ತಂಡಗಳು ಭರ್ಜರಿ ಹೋರಾಟ ನಡೆಸುತ್ತಿದೆ.ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಈ ಬಾರಿಯ ಟೂರ್ನಿಯಲ್ಲಿ ಸಮಾಧಾನಕರ ಪ್ರದರ್ಶನ ನೀಡಿದೆ.ಈಗಾಗಲೇ ಆಡಿರುವ ಹತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು, ಉಳಿದ ಐದು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ.ಈ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ...? ಗಂಗೂಲಿ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿರುವ ಅಮಿತ್ ಶಾ..!
ಇನ್ನೊಂದೆಡೆ ರಾಜಸ್ಥಾನ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದು, ತಂಡ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ.ಆಡಿರುವ ಹತ್ತು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಸಾಧಿಸಿದ್ದು, ನಾಲ್ಕರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: IPL 2022 : 'ಸಿಎಸ್ಕೆ ಕೆಟ್ಟ ಸ್ಥಿತಿಯನ್ನು ಕಂಡು ಸಿಟ್ಟಿಗೆದ್ದ ಸೆಹ್ವಾಗ್'
ಸದ್ಯ ಇಂದು ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ಸಂಭಾವ್ಯ ಆಟಗಾರರ ಪಟ್ಟಿ:
ಪಂಜಾಬ್ ಕಿಂಗ್ಸ್
ಮಯಾಂಕ್ ಅಗರ್ವಾಲ್ (ಕ್ಯಾ), ಶಿಖರ್ ಧವನ್, ಜಾನಿ ಬೈರ್ಸ್ಟೋ, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್ದೀಪ್ ಸಿಂಗ್, ಸಂದೀಪ್ ಶರ್ಮಾ
ರಾಜಸ್ಥಾನ್ ರಾಯಲ್ಸ್
ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ಕ್ಯಾ& ವಿ.ಕೀ), ಕರುಣ್ ನಾಯರ್ / ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್