IPL : ಇಂದು ಹೈದರಾಬಾದ್‌-ಗುಜರಾತ್‌ ನಡುವೆ ಹಣಾಹಣಿ: ಇಲ್ಲಿದೆ ಪಿಚ್‌ ರಿಪೋರ್ಟ್‌

ಗುಜರಾತ್‌ ಟೈಟಾನ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ. ಗುಜರಾತ್‌ ಟೈಟಾನ್ಸ್‌ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದೆ. ಈ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Written by - Bhavishya Shetty | Last Updated : Apr 27, 2022, 09:15 AM IST
  • ಇಂದು ಹೈದರಾಬಾದ್‌-ಗುಜರಾತ್‌ ಪಂದ್ಯ
  • ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಆಟ
  • ಮೈದಾನದ ಪಿಚ್‌ ರಿಪೋರ್ಟ್‌ ಇಲ್ಲಿದೆ
IPL : ಇಂದು ಹೈದರಾಬಾದ್‌-ಗುಜರಾತ್‌ ನಡುವೆ ಹಣಾಹಣಿ: ಇಲ್ಲಿದೆ ಪಿಚ್‌ ರಿಪೋರ್ಟ್‌  title=
Indian Premier League

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 15ನೇ ಆವೃತ್ತಿಯ 40 ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಇಂದು ನಡೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ ಭರ್ಜರಿ ಪ್ರದರ್ಶನ ನೀಡುವ ಸಾಧ್ಯತೆಯಿದೆ. ಉಭಯ ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದೆ. 

ಇದನ್ನು ಓದಿ: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ: ಭಾರೀ ಇಳಿಕೆ ಕಂಡ ಬಂಗಾರದ ಬೆಲೆ

ಗುಜರಾತ್‌ ಟೈಟಾನ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ. ಗುಜರಾತ್‌ ಟೈಟಾನ್ಸ್‌ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದೆ. ಈ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. 

ಇನ್ನೊಂದೆಡೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದ್ದು, ಎರಡರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಈ ಹಿಂದೆಯೂ ಮುಖಾಮುಖಿಯಾಗಿದ್ದ ಉಭಯ ತಂಡಗಳ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡವು ಜಯ ಸಾಧಿಸಿತ್ತು. ಸದ್ಯ ಇಂದು ನಡೆಯುವ ಪಂದ್ಯದಲ್ಲಿ ಉಭಯ ತಂಡಗಳು ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ. 

​ಇದನ್ನು ಓದಿ: ಸ್ಥಿರವಾಗಿದೆ ಇಂಧನ ಬೆಲೆ: ಸಾರ್ವಜನಿಕರಿಗೆ ಕೊಂಚ ರಿಲೀಫ್‌

ಪಿಚ್‌ ರಿಪೋರ್ಟ್‌:
ವಾಂಖೆಡೆ ಸ್ಟೇಡಿಯಂ ಶಾರ್ಟ್‌ ಬೌಂಡರಿ ಹೊಂದಿರುವ ಹಿನ್ನೆಲೆಯಲ್ಲಿ ಸುಲಭವಾಗಿ ಸ್ಕೋರ್‌ ಕಲೆ ಹಾಕಬಹುದಾಗಿದೆ. ಗುಜರಾತ್‌ ಮತ್ತು ಹೈದರಾಬಾದ್‌ ತಂಡಗಳ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗ ಉತ್ತಮವಾಗಿದ್ದು, ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ಪಂದ್ಯ ಸಂಜೆ ವೇಳೆ ನಡೆಯುತ್ತಿದ್ದು, ಇಬ್ಬನಿ ಬೀಳುವ ಸಂಭವವಿದೆ. ಇದು ಪಂದ್ಯದ ಮೇಲೆ ಪರಿಣಾಮ ಬೀರಬಹುದು. 

ಸಂಭಾವ್ಯ ಆಟಗಾರರ ಪಟ್ಟಿ: 
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿ.ಕೀ), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ಕ್ಯಾ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಕ್ಯಾ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿ.ಕೀ), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News