ಮುಂಬೈ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಶಸ್ವಿಯಾಗಿ ನಡೆಯುತ್ತಿದ್ದು, ಇಂದು 37ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯವನ್ನಾಡಲಿದೆ. ಈ ಆಟ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಕಳೆದ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಇದೀಗ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದೆ.
ಇದನ್ನು ಓದಿ: 49ನೇ ವಸಂತಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್: ‘ಗಾಡ್ ಆಫ್ ಕ್ರಿಕೆಟ್’ಗೆ ಶುಭಾಶಯಗಳ ಮಹಾಪೂರ
ಕನ್ನಡಿಗ ಕೆ. ಎಲ್ ರಾಹುಲ್ ನಾಯಕತ್ವದಲ್ಲಿ ಕಣಕ್ಕಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಇನ್ನೊಂದೆಡೆ ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, ಮೂರರಲ್ಲಿ ಸೋಲನ್ನು ಅನುಭವಿಸಿದ್ದಾರೆ. ಈ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.
ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡವು ಈ ಬಾರಿಯ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಆಡಿರುವ ಏಳು ಪಂದ್ಯಗಳಲ್ಲಿ ಏಳರಲ್ಲೂ ಸೋಲು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ಇದನ್ನು ಓದಿ: RCB vs SRH: ಹೀನಾಯ ಸೋಲಿನ ಬಳಿಕ ಡು ಪ್ಲೆಸಿಸ್ ಗೆ ಕೋಪ, ಹೇಳಿದ್ದೇನು..?
ಪಿಚ್ ರಿಪೋರ್ಟ್:
ಕಳೆದ ಬಾರಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಹೆಚ್ಚು ಸ್ಕೋರ್ ಮಾಡಲು ಇಲ್ಲಿನ ಪಿಚ್ ಸಹಕರಿಸಿತ್ತು. ಇನ್ನು ಈ ಕ್ರೀಡಾಂಗಣ ಶಾರ್ಟ್ ಬೌಂಡರಿಯನ್ನು ಹೊಂದಿದ್ದು, ಸುಲಭವಾಗಿ ರನ್ ಕಲೆ ಹಾಕಬಹುದಾಗಿದೆ.
ಸಂಭಾವ್ಯ ಆಟಗಾರರ ಪಟ್ಟಿ:
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ಕ್ಯಾಪ್ಟನ್), ಕ್ವಿಂಟನ್ ಡಿ ಕಾಕ್ (ವಿ.ಕೀ), ಮನೀಶ್ ಪಾಂಡೆ, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ಕ್ಯಾಪ್ಟನ್), ಇಶಾನ್ ಕಿಶನ್ (ವಿ.ಕೀ), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ