ಮುಂಬೈ: 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 38ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ  ಪಂದ್ಯವು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಸಂಜೆ  7.30ಕ್ಕೆ ನಡೆಯಲಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: Gold Price Today: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ...ಇಲ್ಲಿದೆ ಇಂದಿನ ಹಳದಿಲೋಹದ ಬೆಲೆ


ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಎರಡನೇ ಬಾರಿ ಮುಖಾಮುಖಿಯಾಗುತ್ತಿದ್ದು, ಏಪ್ರಿಲ್ 3ರಂದು ನಡೆದಿದ್ದ 11ನೇ ಪಂದ್ಯದಲ್ಲಿ ಮೊದಲ ಬಾರಿಗೆ ಸೆಣಸಾಡಿದ್ದವು. ಆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ 54 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತ್ತು.


ಇನ್ನು ಈ ಟೂರ್ನಿಯಲ್ಲಿ ಎರಡೂ ತಂಡಗಳು ನಿರಾಶಾದಾಯಕ ಪ್ರದರ್ಶನ ನೀಡುತ್ತಿದೆ. ಕನ್ನಡಿಗ ಮಯಾಂಕ್‌ ಅಗರ್‌ವಾಲ್‌ ನಾಯಕತ್ವದಲ್ಲಿ ಕಣಕ್ಕಳಿದಿರುವ ಪಂಜಾಬ್‌ ಕಿಂಗ್ಸ್‌ ಆಡಿರುವ ಏಳು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಇನ್ನು ಉಳಿದ ನಾಲ್ಕು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. 


ಇನ್ನೊಂದೆಡೆ ರವೀಂದ್ರ ಜಡೇಜಾ ನೇತೃತ್ವದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಮುನ್ನಡೆಯುತ್ತಿದ್ದು, ಕಳಪೆ ಪ್ರದರ್ಶನ ನೀಡುತ್ತಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎರಡರಲ್ಲಿ ಜಯ ಸಾಧಿಸಿದ್ದು, ಐದರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. 


ಇದನ್ನು ಓದಿ: iPhone 12 ಖರೀದಿಯ ಮೇಲೆ ಭರ್ಜರಿ ಡಿಸ್ಕೌಂಟ್


ಈ ಹಿಂದೆ ನಡೆದ ಪಂದ್ಯದಲ್ಲಿ ಚೆನ್ನೈಸೂಪರ್ ಕಿಂಗ್ಸ್  ಹೀನಾಯ ಸೋಲು ಅನುಭವಿಸಿತ್ತು. ಈ ಬಾರಿಯ ಆಟದಲ್ಲಿ ಗೆಲುವು ಸಾಧಿಸಿ ಸೇಡನ್ನು ತೀರಿಸಿಕೊಳ್ಳುತ್ತಾ ಎಂದು ಕಾದು ನೋಡಬೇಕಿದೆ. 


ಸಂಭಾವ್ಯ ಆಟಗಾರರ ಪಟ್ಟಿ: 
ಪಂಜಾಬ್ ಕಿಂಗ್ಸ್: 
ಮಯಾಂಕ್ ಅಗರ್ವಾಲ್ (ಕ್ಯಾ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಶಾರುಖ್ ಖಾನ್, ಬೆನ್ನಿ ಹೋವೆಲ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್ದೀಪ್ ಸಿಂಗ್


ಚೆನ್ನೈ ಸೂಪರ್ ಕಿಂಗ್ಸ್: 
ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ಕ್ಯಾ), ಎಂ.ಎಸ್‌ ಧೋನಿ (ವಿ.ಕೀ), ಡ್ವೈನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ