RCB vs RR: ಇಂದು ಆರ್ಸಿಬಿಗೆ ಆರ್‌ಆರ್ ಸವಾಲು: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ
ರಾಯಲ್ ಚಾಲೆಂಜರ್ಸ್ ತಂಡ ಈ ಬಾರಿ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದು, ಉತ್ತಮವಾಗಿ ಆಡುತ್ತಿದೆ. ಆದರೆ ಕಳೆದ ಬಾರಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭಾರೀ ಕಳಪೆ ಪ್ರದರ್ಶನ ನೀಡಿ ಕೇವಲ 68 ರನ್‌ಗೆ ಆಲ್‌ಔಟ್ ಆಗಿತ್ತು.
ಮುಂಬೈ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಇಂದು ನಡೆಯಲಿರುವ ಐಪಿಎಲ್ 2022ರ 39ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದೆ. ಈ ಸೀಸನ್‌ನಲ್ಲಿ ಐದು ಪಂದ್ಯಗಳನ್ನ ಗೆದ್ದಿರುವ ಎರಡೂ ತಂಡಗಳ ಹಣಾಹಣಿ ಜೋರಾಗಿದೆ.
ಇದನ್ನು ಓದಿ: ಬೆಳಗಿನ ಉಪಾಹಾರಕ್ಕಾಗಿ 6 ಬಗೆಯ ಆರೋಗ್ಯಕರ ಚಟ್ನಿಗಳು!
ರಾಯಲ್ ಚಾಲೆಂಜರ್ಸ್ ತಂಡ ಈ ಬಾರಿ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದು, ಉತ್ತಮವಾಗಿ ಆಡುತ್ತಿದೆ. ಆದರೆ ಕಳೆದ ಬಾರಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭಾರೀ ಕಳಪೆ ಪ್ರದರ್ಶನ ನೀಡಿ ಕೇವಲ 68 ರನ್‌ಗೆ ಆಲ್‌ಔಟ್ ಆಗಿತ್ತು. ಇನ್ನೊಂದೆಡೆ ಕಳೆದ ಬಾರಿಯ ಮುಖಾಮುಖಿಯಲ್ಲಿ ಆರ್‌ಆರ್ ವಿರುದ್ಧ ಆರ್‌ಸಿಬಿ ತಂಡ 4 ವಿಕೆಟ್‌ಗಳ ಜಯ ಸಾಧಿಸಿತ್ತು. ಇದೀಗ ಇಂದು ನಡೆಯುವ ಪಂದ್ಯದಲ್ಲಿ ಉಭಯ ತಂಡಗಳು ಯಾವರೀತಿ ಆಟದ ಪ್ರದರ್ಶನ ನೀಡಲಿದೆ ಎಂದು ಕಾದುನೋಡಬೇಕಿದೆ.
ಫಾಫ್ ಡು ಪ್ಲೆಸಿಸ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಎಂಟು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದ್ದು, ಮೂರರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ.
ಇನ್ನೊಂದೆಡೆ ಸಂಜು ಸ್ಯಾಮ್ಸನ್ ಮುಂದಾಳತ್ವದಲ್ಲಿ ಕಣಕ್ಕಿಳಿದ ರಾಜಸ್ಥಾನ ರಾಯಲ್ಸ್ ತಂಡ ಆಡಿರುವ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದ್ದು, ಎರಡರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನು ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿರುವುದು ದೊಡ್ಡ ಫಾರ್ಮ್ ವೈಫಲ್ಯವನ್ನ ಎದ್ದು ತೋರಿಸುತ್ತಿದೆ. ಸದ್ಯ ನಾಯಕ ಫಾಫ್ ಡುಪ್ಲೆಸಿಸ್‌ಗೆ ಉತ್ತಮ ಜೊತೆಯಾಟ ಸಿಗದೇ ಆರ್‌ಸಿಬಿ ಉತ್ತಮ ಆರಂಭ ಪಡೆದಿದ್ದರೂ ಸಹ ಕ್ರಮೇಣ ವೈಫಲ್ಯತೆಯನ್ನು ಅನುಭವಿಸುತ್ತಿದೆ ಎನ್ನಬಹುದು.
ಇದನ್ನು ಓದಿ: Gold Price: ಬಂಗಾರ ಪ್ರಿಯರೇ ಗುಡ್ ನ್ಯೂಸ್: ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಫಾಫ್ ಡು ಪ್ಲೆಸಿಸ್ (ಕ್ಯಾ), ಅನುಜ್ ರಾವತ್ ಅಥವಾ ಮಹಿಪಾಲ್ ಲೊಮೊರೊರ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ರಾಜಸ್ಥಾನ್ ರಾಯಲ್ಸ್
ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ಕ್ಯಾ.& ವಿ.ಕೀ), ಶಿಮ್ರೋನ್ ಹೆಟ್ಮೆಯರ್, ಕರುಣ್ ನಾಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್ ಅಥವಾ ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.