CSK vs SRH: ಚೆನ್ನೈ-ಹೈದರಾಬಾದ್ ಹಣಾಹಣಿ: ಧೋನಿ ನಾಯಕತ್ವದಲ್ಲಿ ಗೆಲ್ಲುತ್ತಾ ಚೆನ್ನೈ!
ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿಯವರಿಗೆ ನಾಯಕತ್ವವನ್ನು ಬಿಟ್ಟುಕೊಟ್ಟ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ. ಇನ್ನು ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ ಮತ್ತೆ ಎದ್ದು ನಿಲ್ಲಿಲಿದೆಯೇ ಎಂದು ಕಾದು ನೋಡಬೇಕಿದೆ.
ಮುಂಬೈ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಶಸ್ವಿಯಾಗಿ ನಡೆಯುತ್ತಿದ್ದು, ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿದೆ. ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ನಡೆಯಲಿರುವ ಪಂದ್ಯವು ಭಾರೀ ಕುತೂಹಲ ಮೂಡಿಸಿದೆ.
ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿಯವರಿಗೆ ನಾಯಕತ್ವವನ್ನು ಬಿಟ್ಟುಕೊಟ್ಟ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ. ಇನ್ನು ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ ಮತ್ತೆ ಎದ್ದು ನಿಲ್ಲಿಲಿದೆಯೇ ಎಂದು ಕಾದು ನೋಡಬೇಕಿದೆ. ಇನ್ನೊಂದೆಡೆ ಸನ್‌ರೈಸರ್ಸ್ ತಂಡವೂ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಇಂದಿನ ಪಂದ್ಯದಲ್ಲಿ ಧೋನಿ ನಾಯಕತ್ವವನ್ನು ಎದುರಿಸಲಿದೆ.
ಇದನ್ನು ಓದಿ: CSK ನಾಯಕತ್ವ ತೊರೆದ ಜಡೇಜಾ : ಕ್ಯಾಪ್ಟನ್ ಹುದ್ದೆಗೆ ಮರಳಿದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡವು ಟೂರ್ನಿಯಲ್ಲಿ ಎಂಟು ಪಂದ್ಯಗಳನ್ನು ಆಡಿದ್ದು, ಐದರಲ್ಲಿ ಗೆಲುವು ಸಾಧಿಸಿದೆ. ಇನ್ನು ಮೂರರಲ್ಲಿ ಸೋಲನ್ನನುಭವಿಸಿದ್ದು, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಚೆನೈ ಸೂಪರ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯ ಗೆದ್ದಿದೆ. ಆರರಲ್ಲಿ ಸೋಲು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಪಡೆದಿದೆ.
ಇಂದು ನಡೆಯುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಮುನ್ನಡೆಸಲಿದ್ದಾರೆ. 15ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ಮೊದಲ ಬಾರಿಗೆ ಧೋನಿ ನಾಯಕತ್ವ ವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.
ಇದನ್ನು ಓದಿ: ಹಾಟ್ ನಟಿ ದಿಶಾ ಪಟಾನಿಯ ಈ ಪರ್ಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!
ಸಂಭಾವ್ಯ ಆಟಗಾರರ ಪಟ್ಟಿ:
ಸನ್‌ರೈಸರ್ಸ್ ಹೈದರಾಬಾದ್:
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಕ್ಯಾ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿ.ಕೀ), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್ ಅಥವಾ ಸೀನ್ ಅಬಾಟ್, ಟಿ ನಟರಾಜನ್
ಚೆನ್ನೈ ಸೂಪರ್ ಕಿಂಗ್ಸ್:
ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮಿಚೆಲ್ ಸ್ಯಾಂಟ್ನರ್ ಅಥವಾ ಡೆವೊನ್ ಕಾನ್ವೇ ಅಥವಾ ಮೊಯಿನ್ ಅಲಿ, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿ.ಕೀ), ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್ ಅಥವಾ ಮಥೀಶ ಪತಿರಣ, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.