ಮೊದಲು ಟಿ20 ನಂತರ ಟೆಸ್ಟ್!ವಿರಾಟ್ ಕೊಹ್ಲಿ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿರುವ ಹಿಂದಿದೆ ಈ ಕಾರಣ

t20 ನಂತರ ಟೆಸ್ಟ್ ಕ್ರಿಕೆಟ್ ಗೆ ಇದ್ದಕ್ಕಿದ್ದಂತೆ ವಿದಾಯ ಹೇಳಿದ ವಿರಾಟ್ ಕೊಹ್ಲಿ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವೊಂದಿದೆ. ಈ ಕಾರಣದಿಂದಾಗಿಯೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆಯಂತೆ.  

Written by - Ranjitha R K | Last Updated : May 12, 2025, 02:31 PM IST
  • ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ಹಠಾತ್ತನೆ ನಿವೃತ್ತಿ ಹೊಂದುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.
  • ಇಂಗ್ಲೆಂಡ್ ಪ್ರವಾಸಕ್ಕೆ ತಂಡವನ್ನು ಆಯ್ಕೆ ಮಾಡುವ ಮುನ್ನ ಅವರು ಈ ನಿರ್ಧಾರ
  • 123 ಟೆಸ್ಟ್ ಪಂದ್ಯಗಳನ್ನು ಆಡಿರುವ ಇವರು ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಸ್ಥಾನ
ಮೊದಲು ಟಿ20 ನಂತರ ಟೆಸ್ಟ್!ವಿರಾಟ್ ಕೊಹ್ಲಿ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿರುವ ಹಿಂದಿದೆ ಈ ಕಾರಣ

Virat Kohli Ritement :ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ಹಠಾತ್ತನೆ ನಿವೃತ್ತಿ ಹೊಂದುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೆ ತಂಡವನ್ನು ಆಯ್ಕೆ ಮಾಡುವ ಮುನ್ನ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ತಮ್ಮ 14 ವರ್ಷಗಳ ಟೆಸ್ಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸುವುದಾಗಿ ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದಾರೆ. ಭಾರತ ಪರ 123 ಟೆಸ್ಟ್ ಪಂದ್ಯಗಳನ್ನು ಆಡಿರುವ ಇವರು  ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 

Add Zee News as a Preferred Source

ಕಳೆದ ಸರಣಿಯಲ್ಲಿ ಗೆಲ್ಲಲಿಲ್ಲ :
ಕೊಹ್ಲಿ 210 ಇನ್ನಿಂಗ್ಸ್‌ಗಳಲ್ಲಿ 46.85 ಸರಾಸರಿಯಲ್ಲಿ 9230 ರನ್ ಗಳಿಸಿದ್ದರು. ಇದರಲ್ಲಿ 30 ಶತಕಗಳು ಮತ್ತು 31 ಅರ್ಧಶತಕಗಳು ಸೇರಿವೆ. ರೆಕಾರ್ಡ್ ಕಿಂಗ್ ಎಂದೇ ಕರೆಯಲ್ಪಡುವ ಇವರ ಅತ್ಯಧಿಕ ಸ್ಕೋರ್ ಅಂದರೆ ಅಜೇಯ 254 ರನ್‌ಗಳು. ವಿರಾಟ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡಿದ್ದರು. ಸಿಡ್ನಿಯಲ್ಲಿ ನಡೆದ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಿತ್ತು. .

ಇದನ್ನೂ ಓದಿ:  ಟೀಂ ಇಂಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಆಟಗಾರ ವಿರಾಟ್‌ ಅಲ್ಲ! ಅಗ್ರಸ್ಥಾನದಲ್ಲಿರುವುದು ಈ ಸ್ಟಾರ್‌ ಬ್ಯಾಟ್ಸ್‌ಮನ್‌.. ಈತ ಕೊಹ್ಲಿಗೇ ಕಾಂಪಿಟೇಟರ್‌

ನಾಯಕತ್ವ ಸಿಗದ ನಂತರ ನಿವೃತ್ತಿ ?: 
ಕಳೆದ ವಾರ ಮೇ 7 ರಂದು ರೋಹಿತ್ ಶರ್ಮಾ ನಿವೃತ್ತರಾದಾಗ, ತಂಡದ ಆಡಳಿತ ಮಂಡಳಿ ಹೊಸ ನಾಯಕನನ್ನು ಹುಡುಕಲು ಪ್ರಾರಂಭಿಸಿತು. ಅವರು ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಅವರನ್ನು ಆಯ್ಕೆ ಮಾಡಿದರು. ಇದರಲ್ಲಿ ಕೆಲಸದ ಹೊರೆಯಿಂದಾಗಿ ಬುಮ್ರಾಗೆ ನಾಯಕತ್ವ ನೀಡದಿರಲು ನಿರ್ಧರಿಸಲಾಯಿತು. ಪ್ರಸ್ತುತ ಗಿಲ್ ಮತ್ತು ಪಂತ್ ರೇಸ್‌ನಲ್ಲಿದ್ದಾರೆ. ಈ ಮಧ್ಯೆ, ಕೊಹ್ಲಿ ಮತ್ತೆ ನಾಯಕತ್ವ ವಹಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು. ಆದರೆ ಮಂಡಳಿಗೆ ಕೊಹ್ಲಿಗೆ ಸಾರಥ್ಯ ನೀಡುವುದು ಬೇಡವಾಗಿತ್ತು. ಈ ವಿಚಾರದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿರಾಟ್ ಮತ್ತು ಬಿಸಿಸಿಐ ನಡುವೆ ಇಗೋ ಕ್ಲಾಶ್ ಆಗಿ ವಿರಾಟ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. 

ಫಾರ್ಮ್ ಕೂಡಾ ಒಂದು ಕಾರಣ : 
ಕೊಹ್ಲಿ ನಿವೃತ್ತಿಯ ಹಿಂದೆ ಫಾರ್ಮ್ ಕೂಡಾ ಒಂದು ದೊಡ್ಡ ಕಾರಣ. ಕಳೆದ 3-4 ವರ್ಷಗಳಿಂದ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂಥ ಸಾಧನೆ ಮಾಡುವುದು ಸಾಧ್ಯವಾಗುತ್ತಿಲ್ಲ.2020ರಿಂದ ವಿರಾಟ್ 69 ಇನ್ನಿಂಗ್ಸ್‌ಗಳಲ್ಲಿ ಕೇವಲ 30.72 ಸರಾಸರಿಯಲ್ಲಿ ರನ್ ಗಳಿಸಲು ಸಾಧ್ಯವಾಗಿದೆ. 2020 ರ ನಂತರದ ಅತಿದೊಡ್ಡ ಕ್ರಿಕೆಟ್ ಸ್ವರೂಪದಲ್ಲಿ ಕೊಹ್ಲಿ ಕೇವಲ 3 ಶತಕಗಳನ್ನು ಮಾತ್ರ ಗಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ಕಳಪೆ ಪ್ರದರ್ಶನದಿಂದಾಗಿ ಅವರು ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ವಿರಾಟ್‌ಗೂ ಇದು ತಿಳಿದಿತ್ತು.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟಿಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿ ಓದಿದ್ದೆಷ್ಟು ? ಬಂಗಲೆ, ಬ್ಯಾಂಕ್ ಬ್ಯಾಲೆನ್ಸ್, ಕಾರು, ಕಂಪನಿ ಸೇರಿದಂತೆ ಇವರ ಹೆಸರಿನಲ್ಲಿರುವ ಒಟ್ಟು ಆಸ್ತಿ ಎಷ್ಟು ?

"ಬಿಳಿ ಉಡುಪಿನಲ್ಲಿ ಆಡುವುದು ತುಂಬಾ ವೈಯಕ್ತಿಕ ಅನುಭವ. ಶಾಂತತೆ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವ ನಿರ್ಧಾರ ತೆಗೆದುಕೊಂಡಿರುವ ಅಷ್ಟು ಸುಲಭವಲ್ಲ. ಆದರೆ ಈ ಬಗ್ಗೆ ತೆಗೆದುಕೊಂಡಿರುವ ನಿರ್ಧಾರ ಸರಿ ಅನಿಸುತ್ತದೆ ವಂದು ಕೊಹ್ಲಿ ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

  

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News