ನವದೆಹಲಿ: ಭಾರತದ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕಳೆದ ಕೆಲವು ಸಮಯದಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾದ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ವಿರಾಟ್ ಕೊಹ್ಲಿ ಬದಲಿಗೆ 3ನೇ ಕ್ರಮಾಂಕದಲ್ಲಿ ಅವಕಾಶ ಸಿಕ್ಕಾಗಲೆಲ್ಲ ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.


COMMERCIAL BREAK
SCROLL TO CONTINUE READING

ಅಯ್ಯರ್ ಬ್ಯಾಟ್‍ನಿಂದ ಮೂಡಿಬಂತು ಈ ದಾಖಲೆ!


ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬಿರುಸಿನ ಅರ್ಧಶತಕ ಬಾರಿಸಿದರು. 27 ವರ್ಷದ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್‌ನಲ್ಲಿ 10ನೇ ಅರ್ಧಶತಕ ದಾಖಲಿಸಿದರು. ಪೋರ್ಟ್ ಆಫ್ ಸ್ಪೇನ್ ಮೈದಾನದ ಮೂಲೆ ಮೂಲೆಗೆ ಬೌಂಡರಿ ಸಿಕ್ಸರ್ ಸಿಡಿಸಿ ಅಯ್ಯರ್ ಮಿಂಚಿದರ. ಶುಬ್ಮನ್ ಗಿಲ್ ನಿರ್ಗಮನದ ಬಳಿಕ ನಾಯಕ ಶಿಖರ್ ಧವನ್ ಜೊತೆಗೆ ಅಯ್ಯರ್ ಉತ್ತಮ ಜೊತೆಯಾಟವಾಡಿದರು. 57 ಎಸೆತಗಳಲ್ಲಿ 54 ರನ್ ಗಳಿಸಿದ ಅಯ್ಯರ್, ಏಕದಿನ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ ಸಾಧನೆ ಮಾಡಿದರು.


ಇದನ್ನೂ ಓದಿ: ಭಾರತ-ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಈ ಸೂಪರ್‌ ಸ್ಟಾರ್‌ ಆಟಗಾರ ಕಾಣಿಸೋದು ಡೌಟ್‌: ಕಾರಣ ಏನು ಗೊತ್ತಾ?


ಅತಿವೇಗದ 1000 ರನ್ ಗಳಿಸಿದ 3ನೇ ಭಾರತೀಯ


ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 1000 ರನ್ ಗಳಿಸಿದ 3ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 25ನೇ ಇನ್ನಿಂಗ್ಸ್‌ನಲ್ಲಿ ಅವರು ಈ ಸಾಧನೆ ಮಾಡಿದರು. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ಶಿಖರ್ ಧವನ್ 24 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಅಯ್ಯರ್ ಕೆಲವೇ ಎಸೆತಗಳಲ್ಲಿ ಪಂದ್ಯದ ದಿಕ್ಕನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶ್ರೇಯಸ್ ಅಯ್ಯರ್ ಅದ್ಭುತ ಆಟ ಪ್ರದರ್ಶಿಸಿದರೆ, ಟಿ-20 ವಿಶ್ವಕಪ್‌ನಲ್ಲಿ ಅವರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಬಹುದು.


ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ


ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಕಲೆ ಹಾಕಿತು. ಶಿಖರ್ ಧವನ್(97) ಮತ್ತು ಶುಭಮನ್ ಗಿಲ್(64) ಆರಂಭಿಕ ವಿಕೆಟ್‌ಗೆ 17.4 ಓವರ್‌ಗಳಲ್ಲಿ 119 ರನ್‌ಗಳ ಜೊತೆಯಾಟವಾಡಿದರು. ಗಿಲ್ ರನ್ ಔಟ್ ಆದ ನಂತರ ಶ್ರೇಯಸ್ ಅಯ್ಯರ್(54) ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಂಡ ಬೃಹತ್ ಮೊತ್ತ ಪೇರಿಸಲು ನೆರವಾದರು.


ಇದನ್ನೂ ಓದಿ: IND vs WI : ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಎಂಟ್ರಿ ನೀಡಿದ ಈ ಮಾರಣಾಂತಿಕ ಆಲ್‌ರೌಂಡರ್!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.