Amit Mishra: ಅನೈತಿಕ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಹೌದು, ಭಾರತೀಯ ಕ್ರಿಕೆಟ್‌ನ ಮತ್ತೊಂದು ದಂಪತಿ ನಡುವೆ ದೊಡ್ಡ ಬಿರುಕು ಮೂಡಿರುವುದು ಬಹಿರಂಗವಾಗಿದೆ. ಒಂದು ಕಾಲದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ತನಗೆ ವರದಕ್ಷಿಣ ಕಿರುಕುಳ ನೀಡುತ್ತಿದ್ದು, ಅನೇಕ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆಂದು ಪತ್ನಿ ದೂರಿದ್ದಾರೆ. ಅಷ್ಟಕ್ಕೂ ಯಾರು ಆ ಸ್ಟಾರ್ ಕ್ರಿಕೆಟಿಗ ಅಂತೀರಾ? ಅದು ಬೇರಾರೂ ಅಲ್ಲ.. ಒಂದು ಕಾಲದ ಭಾರತ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ನರ್ ಅಮಿತ್ ಮಿಶ್ರಾ..
ಅಮಿತ್ ಮಿಶ್ರಾ ಮತ್ತು ಅವರ ಪತ್ನಿ ಗರಿಮಾ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿರುವುದು ಬಹಿರಂಗವಾಗಿದೆ. ಗರಿಮಾ ಇದೀಗ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಅಮಿತ್ ಮಿಶ್ರಾ ಮತ್ತು ಅವರ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಅಮಿತ್ ಮಿಶ್ರಾ ಹಾಗೂ ಅವರ ಕುಟುಂಬಸ್ಥರು ಹಣಕ್ಕಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ ಅಂತಾ ಗರಿಮಾ ಆರೋಪಿಸಿದ್ದಾರೆ. ಅಲ್ಲದೆ ಅಮಿತ್ ಮಿಶ್ರಾ ಹಲವಾರು ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆಂದು ಆರೋಪವನ್ನೂ ಮಾಡಿದ್ದಾರೆ.
ಇದನ್ನೂ ಓದಿ: ಎಂ.ಎಸ್.ಧೋನಿ, ಕೊಹ್ಲಿ, ರೋಹಿತ್‌ಗೆ ಕೊಟ್ಟ ಗೌರವ ಮನೀಶ್ ಪಾಂಡೆಗೇಕಿಲ್ಲ..?
ಅಮಿತ್ ಮಿಶ್ರಾ ನನಗೆ ಹಲವು ಬಾರಿ ಹೊಡೆದಿದ್ದಾರೆಂದು ಆರೋಪಿಸಿರುವ ಪತ್ನಿ ಗರಿಮಾ, 'ಅಮಿತ್ ಇತರ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿರುವುದನ್ನ ನಾಲ್ಕು ತಿಂಗಳ ಹಿಂದೆ ವಿರೋಧಿಸಿದ್ದೆ. ಆಗ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದರು. ಹೀಗಾಗಿ ನಾನು ಪ್ರಸ್ತುತ ತವರು ಮನೆಯಲ್ಲಿ ವಾಸಿಸುತ್ತಿದ್ದೇನೆ' ಎಂದು ಅಳಲು ತೋಡಿಕೊಂಡಿದ್ದಾರೆ. ಅಮಿತ್ ಮತ್ತು ಅವರ ಕುಟುಂಬಸ್ಥರು ಹೋಂಡಾ ಸಿಟಿ ಕಾರು ಮತ್ತು 10 ಲಕ್ಷ ರೂ. ತರುವಂತೆ ಕಿರುಕುಳ ನೀಡುತ್ತಿದ್ದಾರೆಂದು ಗರಿಮಾ ಆರೋಪಿಸಿದ್ದಾರೆ. ಈ ಕುರಿತು ಪೊಲೀಸ್ ಆಯುಕ್ತರ ಬಳಿಯೂ ಗರಿಮಾ ದೂರು ನೀಡಿರುವುದಾಗಿ ವರದಿಯಾಗಿದೆ.
ಇನ್ನು ಪತ್ನಿ ಗರಿಮಾ ಅವರ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿರುವ ಅಮಿತ್ ಮಿಶ್ರಾ, ʼಆಕೆಯೇ ನನಗೆ ಮತ್ತು ನನ್ನ ಕುಟುಂಬಸ್ಥರಿಗೆ ಕಿರುಕುಳ ನೀಡುತ್ತಿದ್ದಾಳೆ. ಬ್ಯಾಂಕ್ ಕಚೇರಿಯ ಹೊರಗೆ ಒಮ್ಮೆ ನನ್ನ ಮೇಲೆ ಪತ್ನಿ ಹಲ್ಲೆ ಮಾಡಿದ್ದರು. ಇದೀಗ ಮಾಧ್ಯಮಗಳ ಮುಂದೆ ಡ್ರಾಮಾ ಮಾಡುತ್ತಿದ್ದಾಳೆ ಅಂತಾ ಆರೋಪಿಸಿದ್ದಾರೆ. ಅಂದಹಾಗೆ ಅಮಿತ್ ಮಿಶ್ರಾ ಮತ್ತು ಗರಿಮಾ 2021ರ ಏಪ್ರಿಲ್ 26ರಂದು ವಿವಾಹವಾಗಿದ್ದರು. ಇದೇ ಏಪ್ರಿಲ್ 26ರಂದು ಅವರ ವಿವಾಹ ವಾರ್ಷಿಕೋತ್ಸವ ಇದ್ದು, ಈ ಶುಭ ಸಂದರ್ಭದಲ್ಲಿಯೇ ಅವರ ಕುಟುಂಬದ ಗಲಾಟೆ ಬೀದಿಗೆ ಬಂದಿದೆ.
ಇದನ್ನೂ ಓದಿ: ನಿಮಗೆ ಗೊತ್ತಾ..! ಹಾಕಿ ಭಾರತದ ಅಧಿಕೃತ ರಾಷ್ಟ್ರೀಯ ಕ್ರೀಡೆ ಅಲ್ಲವೇ ಅಲ್ಲ... ಹಾಗಿದ್ರೆ ಮತ್ಯಾವುದು?
ಅಮಿತ್ ಮಿಶ್ರಾ 2003ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಆ ಬಳಿಕ 2008ರಲ್ಲಿ ಟೆಸ್ಟ್ ಮಾದರಿಗೆ ಪಾದಾರ್ಪಣೆ ಮಾಡಿದ್ದ ಅಮಿತ್‌ಗೆ 2010ರಲ್ಲಿ ಟಿ-20 ಮಾದರಿಯಲ್ಲಿ ಆಡುವ ಅವಕಾಶ ಸಿಕ್ಕಿತ್ತು. ಭಾರತ ಪರ 22 ಟೆಸ್ಟ್ ಪಂದ್ಯಗಳನ್ನಾಡಿರುವ ಅಮಿತ್ 76 ವಿಕೆಟ್, 36 ಏಕದಿನ ಪಂದ್ಯಗಳಲ್ಲಿ 64 ವಿಕೆಟ್ ಮತ್ತು 10 ಟಿ-20 ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದಲ್ಲದೆ 162 ಐಪಿಎಲ್ ಪಂದ್ಯಗಳನ್ನು ಆಡಿರುವ ಅವರು, 174 ವಿಕೆಟ್‌ಗಳನ್ನು ಪಡೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









