India vs Australia Test Match: ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಹಿಡಿತವನ್ನು ಬಿಗಿಗೊಳಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಈ ಆಯ್ಕೆ ಸಮಸ್ಯೆಯಾಗಿ ಪರಿಣಮಿಸಿ, ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಭಾರತದ ಸ್ಪಿನ್ನರ್‌ಗಳು ಅದ್ಭುತ ಆಟ ಪ್ರದರ್ಶಿಸಿ ಆಸ್ಟ್ರೇಲಿಯಾ ತಂಡವನ್ನು 177 ರನ್‌ಗಳಿಗೆ ಆಲೌಟ್ ಮಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: KL Rahul : ನಾಗ್ಪುರ ಟೆಸ್ಟ್ ಕೆಎಲ್ ರಾಹುಲ್ ವೃತ್ತಿಜೀವನದ ಕೊನೆಯ ಪಂದ್ಯ? ಸಂಚಲನ ಮೂಡಿಸಿದ ಬಿಸಿಸಿಐ ಅಧಿಕಾರಿ ಹೇಳಿಕೆ


ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ ಐದು ವಿಕೆಟ್ ಪಡೆದರು. ಇದಾದ ಬಳಿಕ ರೋಹಿತ್ ಶರ್ಮಾ ವೇಗದ ಬ್ಯಾಟಿಂಗ್ ವೇಳೆ ಬಿರುಸಿನ ಶತಕ ಬಾರಿಸಿದರು. ಇದೀಗ ಅವರ ಶತಕದ ಬಗ್ಗೆ ಪತ್ನಿ ರಿತಿಕಾ ಸಜ್ದೇ ಪ್ರತಿಕ್ರಿಯೆ ನೀಡಿದ್ದಾರೆ.


ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟೀಂ ಇಂಡಿಯಾದ ಸ್ಟಾರ್ ಓಪನರ್‌ಗಳಾದ ಕೆಎಲ್ ರಾಹುಲ್, ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಬೇಗನೆ ಪೆವಿಲಿಯನ್‌ಗೆ ಮರಳಿದರು. ಆದರೆ ನಂತರ ರೋಹಿತ್ ಶರ್ಮಾ ರನ್ ಗಳಿಸುವ ಜವಾಬ್ದಾರಿಯನ್ನು ವಹಿಸಿಕೊಂಡರು. ಈ ಬಳಿಕ ಕ್ರೀಸ್ ಗಿಳಿದ ಸಿಕ್ಸರ್ ಕಿಂಗ್ 120 ರನ್‌ಗಳ ಇನ್ನಿಂಗ್ಸ್‌ ಆಡಿದರು. ಇದರೊಂದಿಗೆ ನಾಯಕನಾಗಿ ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.


ರೋಹಿತ್ ಶತಕ ಬಾರಿಸಿದ ತಕ್ಷಣ ಪತ್ನಿ ರಿತಿಕಾ ಸಜ್ದೇಹ್ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ “ಐ ಲವ್ ಯು ರೋಹಿತ್ ಶರ್ಮಾ ಆದರೆ ದಯವಿಟ್ಟು ನೀವು ಬದಲಿ ಬೆರಳನ್ನು ಕಳುಹಿಸಬೇಕು” ಎಂದು ಹೇಳಿದ್ದಾರೆ.ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿರುವ ಆಟಗಾರ. ಅವರು ಯಾವುದೇ ಬೌಲಿಂಗ್ ದಾಳಿಯನ್ನು ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಒಂಬತ್ತನೇ ಶತಕವಾಗಿದೆ. ಈಗ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 43 ಶತಕಗಳನ್ನು ಗಳಿಸಿದ್ದಾರೆ.


ಇದನ್ನೂ ಓದಿ: IND vs AUS : ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಹೊಡೆತ, ಈ ಸ್ಟಾರ್ ಆಟಗಾರ ಪಂದ್ಯದಿಂದ ಔಟ್!


ನಾಗ್ಪುರದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 175 ರನ್‌ಗಳ ಮುನ್ನಡೆ ಸಾಧಿಸಿದೆ. ಅಕ್ಷರ್ ಪಟೇಲ್ 63 ರನ್ ಮತ್ತು ಮೊಹಮ್ಮದ್ ಶಮಿ 16 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ. ರೋಹಿತ್ ಶರ್ಮಾ ಹೊರತುಪಡಿಸಿ ರವೀಂದ್ರ ಜಡೇಜಾ 70 ರನ್‌ಗಳ ಇನಿಂಗ್ಸ್‌ ಆಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.