ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಪ್ರಬಲ ಸ್ಪರ್ಧಿ! ಯಾಕ್ ಗೊತ್ತಾ?

Gautam Gambhir: ಭಾರತದ ಪುರುಷರ ಕ್ರಿಕೆಟ್ ತಂಡದ ಮುಂದಿನ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. 

Written by - Yashaswini V | Last Updated : May 29, 2024, 08:43 AM IST
  • ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 27ಕ್ಕೆ ಕೊನೆಗೊಂಡಿದೆ.
  • ಆರಂಭದಲ್ಲಿ ಈ ಹುದ್ದೆಗಾಗಿ ಹಲವು ವಿದೇಶಿ ಕೋಚ್‌ಗಳನ್ನು ಸಂಪರ್ಕಿಸಲಾಗಿದೆ ಎಂದು ಹಲವು ವರದಿಗಳಿದ್ದವು.
  • ಆದರೆ, ಬಿಸಿಸಿಐ ಕಾರ್ಯದರ್ಶಿ ಈ ಸುದ್ದಿಯನ್ನು ತಳ್ಳಿಹಾಕಿದ ನಂತರ ರಾಹುಲ್ ದ್ರಾವಿಡ್ ಬದಲಿಗೆ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಪ್ರಬಲ ಸ್ಪರ್ಧಿ! ಯಾಕ್ ಗೊತ್ತಾ?  title=

Gautam Gambhir Set To Succeed Rahul Dravid: ರಾಹುಲ್ ದ್ರಾವಿಡ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ (Gautam Gambhir for the post of Team India head coach) ನೇಮಕ ಬಹುತೇಕ ಖಚಿತಗೊಂಡಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. 

ವಾಸ್ತವವಾಗಿ, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ (Chief coach of the Indian cricket team) ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 27ಕ್ಕೆ ಕೊನೆಗೊಂಡಿದೆ. ಆರಂಭದಲ್ಲಿ ಈ ಹುದ್ದೆಗಾಗಿ ಹಲವು ವಿದೇಶಿ ಕೋಚ್‌ಗಳನ್ನು ಸಂಪರ್ಕಿಸಲಾಗಿದೆ  ಎಂದು ಹಲವು ವರದಿಗಳಿದ್ದವು. ಆದರೆ, ಬಿಸಿಸಿಐ ಕಾರ್ಯದರ್ಶಿ ಈ ಸುದ್ದಿಯನ್ನು ತಳ್ಳಿಹಾಕಿದ ನಂತರ ರಾಹುಲ್ ದ್ರಾವಿಡ್ ಬದಲಿಗೆ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಟೀಮ್ ಇಂಡಿಯಾ ಮುಖ್ಯ ಕೋಚ್ (Team India Head Coach) ಹುದ್ದೆಗೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ಗೌತಮ್ ಗಂಭೀರ್ ಅವರ ನಡುವೆ ಮಾತುಕತೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- T20 ವಿಶ್ವಕಪ್ 2024 ಪ್ರಾರಂಭಕ್ಕೆ ದಿನಗಣನೆ ಶುರು: ಭಾರತ ಸೇರಿ 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ

ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಗೆ ಕಾರಣ? 
ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ನಲ್ಲಿ ಕಳೆದ ಎರಡು ಋತುಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದೊಂದಿಗಿದ್ದ ಗೌತಮ್ ಗಂಭೀರ್ ಆ ಸಂದರ್ಭದಲ್ಲಿ ತಂಡವನ್ನು ಪ್ಲೇ ಆಫ್ ಹಂತಕ್ಕೆ ತಲುಪಿಸಿದ್ದರು. 2024ರ ಐಪಿಎಲ್ ಋತುವಿನಲ್ಲಿ ಗೌತಮ್ ಗಂಭೀರ್ ಕೋಲ್ಕತ್ತಾ ನೈಟ್ ರೈಡರ್ಸ್ ಎಂದರೆ ಕೆ‌ಕೆ‌ಆರ್ ತಂಡದ ಮಾರ್ಗದರ್ಶಕರಾಗಿ, ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 

ಫೈನಲ್ ಪಂದ್ಯದಲ್ಲಿ ಕೆ‌ಕೆ‌ಆರ್ (KKR) ಐ‌ಪಿ‌ಎಲ್ 2024ರ ಪ್ರಶಸ್ತಿ ಗೆದ್ದ ಬಳಿಕ ಗೌತಮ್ ಗಂಭೀರ್ ಅವರನ್ನೇ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಬೇಕು ಎಂದು ಹಲವಾರು ಪ್ರತಿಪಾದಿಸಿದ್ದಾರೆ. 

ಇದನ್ನೂ ಓದಿ- ‘All Eyes on Rafah'- ಪ್ಯಾಲೆಸ್ತೀನ್ ಬೆಂಬಲಿಸಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇಹ್ ಪೋಸ್ಟ್ ಶೇರ್

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಮಾಜಿ ಕ್ರಿಕೆಟಿಕ ಮತ್ತು ಪ್ರಸ್ತುತ ಕಾಮೆಂಟೇಟರ್ ನವಜೋತ್ ಸಿಂಗ್ ಸಿಧು (Navjot Singh Sidhu), "ಕೆ‌ಕೆ‌ಆರ್ ತಂಡದ ಗೆಲುವಿಗೆ ಪಣತೊಟ್ಟಿದ್ದ ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್‌ಗೆ ಅಗ್ರ ಸ್ಪರ್ಧಿ !!!" ಎಂದಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News