KL Rahul might quit LSG captaincy : ಐಪಿಎಲ್ 2024 ಸೀಸನ್ನಲ್ಲಿ ಕೆ.ಎಲ್.ರಾಹುಲ್ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕತ್ವ ತೊರೆಯಲಿದ್ದಾರೆ ಎಂದು ಹೇಳಾಗ್ತಿದೆ. ಕೆ.ಎಲ್ ರಾಹುಲ್ 2022 ಮತ್ತು 2023ರಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದರು. ಈ ಎರಡೂ ವರ್ಷಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ಪ್ಲೇ ಆಫ್ಗೆ ಹೋಗಿತ್ತು. ಗಾಯದ ಸಮಸ್ಯೆಯಿಂದ ಕಳೆದ ವರ್ಷ ಕೆಲವು ಪಂದ್ಯಗಳಿಂದ ಹಿಂದೆ ಸರಿದಿದ್ದರು.
ಐಪಿಎಲ್ 2024 ರಲ್ಲಿ ಹಲವು ತಂಡಗಳು ಹೊಸ ನಾಯಕರನ್ನು ನೇಮಿಸಿವೆ. ಈ ಬಾರಿ ಐಪಿಎಲ್ನಲ್ಲಿ ಕೆ.ಎಲ್ ರಾಹುಲ್ ಅವರ ನಾಯಕತ್ವ ಮತ್ತು ಬ್ಯಾಟಿಂಗ್ ಮೂಲಕ ಘರ್ಜಿಸುತ್ತಿಲ್ಲ. ಲಖನೌ ಪ್ಲೇ ಆಫ್ ಅವಕಾಶವೂ ಬಹುತೇಕ ಕೈ ತಪ್ಪಿದೆ. ಕೆಎಲ್ ರಾಹುಲ್ ಗಾಯದಿಂದ ವಾಪಸಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಬ್ಯಾಟಿಂಗ್ ಸ್ಟ್ರೈಕ್ ರೇಟ್ನ ಪ್ರಶ್ನೆಯೂ ಎದ್ದಿದೆ. ನಿನ್ನೆಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅವರ ಬ್ಯಾಟಿಂಗ್ ಮಾತ್ರವಲ್ಲದೆ ನಾಯಕತ್ವದ ಮೇಲೂ ಭಾರೀ ಟೀಕೆ ವ್ಯಕ್ತವಾಗಿತ್ತು.
ಇದನ್ನೂ ಓದಿ:
ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ರಾಹುಲ್ ಆಯ್ಕೆಯಾಗಿರಲಿಲ್ಲ. ಅವರು ಓಪನಿಂಗ್ನಲ್ಲಿ ಆಡುತ್ತಿದ್ದರಿಂದ ಅವರನ್ನು ಆಯ್ಕೆ ಮಾಡಲಾಗಿಲ್ಲ ಮತ್ತು ಅವರ ಬ್ಯಾಟಿಂಗ್ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಆಯ್ಕೆಗಾರರ ಅಧ್ಯಕ್ಷ ಅಜಿತ್ ಅಗರ್ಕರ್ ಹೇಳಿದ್ದಾರೆ. ಆದರೆ, ರಾಹುಲ್ ಮೊದಲಿನಂತೆಯೇ ಓಪನಿಂಗ್ನಲ್ಲಿ ಆಕ್ಷನ್-ಪ್ಯಾಕ್ಡ್ ಆಟವನ್ನು ಆಡುತ್ತಿಲ್ಲ ಎಂಬುದು ಕ್ರಿಕೆಟ್ ತಜ್ಞರ ಅಭಿಪ್ರಾಯ.
ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದ ಬಳಿಕ ಕೆಎಲ್ ರಾಹುಲ್ ಜೊತೆ ತಂಡದ ಮಾಲೀಕ ಸಂಜಯ್ ಗೋಯೆಂಕೆ ತೀವ್ರ ವಾಗ್ವಾದ ನಡೆಸಿದ್ದಾರೆ ಎನ್ನಲಾದ ಕೆಲವು ಫೋಟೋಗಳು ವೈರಲ್ ಆಗಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ದೃಶ್ಯ ವೈರಲ್ ಆಗ್ತಿದ್ದಂತೆ ಕೆಎಲ್ ರಾಹುಲ್ ಕ್ಯಾಪ್ಟನ್ಸಿ ಬಿಟ್ಟು ಕೊಡುತ್ತಾರೆ ಎಂಬ ವದಂತಿ ಶುರುವಾಗಿದೆ.
ವರದಿಗಳ ಪ್ರಕಾರ, ಕೆಎಲ್ ರಾಹುಲ್ ಲಕ್ನೋ ತಂಡದ ನಾಯಕತ್ವ ತೊರೆಯಲಿದ್ದಾರೆ ಎನ್ನಲಾಗ್ತಿದೆ. ಲಖನೌ ಸೂಪರ್ ಜೈಂಟ್ಸ್ ಎರಡು ಪಂದ್ಯಗಳು ಬಾಕಿ ಉಳಿದಿದ್ದು, ಬ್ಯಾಟಿಂಗ್ನತ್ತ ಗಮನ ಹರಿಸಲು ರಾಹುಲ್ 2 ಪಂದ್ಯಗಳಿಗೆ ನಾಯಕತ್ವದಿಂದ ಹೊರಗುಳಿಯಲಿದ್ದಾರೆ ಎಂದು ವದಂತಿ ಹಬ್ಬಿದೆ. ಆದರೆ, ಇದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
ಇದನ್ನೂ ಓದಿ:
ಲಖನೌ ಸೂಪರ್ ಜೈಂಟ್ಸ್ ಮುಂದಿನ ಪಂದ್ಯ ಮೇ 14 ರಂದು ದೆಹಲಿ ವಿರುದ್ಧ ನಡೆಯಲಿದೆ. ಇನ್ನೂ 5 ದಿನ ಬಾಕಿ ಇರುವ ಕಾರಣ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ. ಮೇ 17ರಂದು ಮುಂಬೈ ತಂಡದ ವಿರುದ್ಧ ಕೊನೆಯ ಲೀಗ್ ಪಂದ್ಯ ನಡೆಯಲಿರುವುದು ಗಮನಾರ್ಹ. ಲಖನೌ ಸೂಪರ್ ಜೈಂಟ್ಸ್ ಮುಂಬರುವ ಈ ಎರಡೂ ಪಂದ್ಯಗಳನ್ನು ಗೆಲ್ಲಬೇಕು.
ಕೆಎಲ್ ರಾಹುಲ್ ಅವರನ್ನು ಲಕ್ನೋ 17 ಕೋಟಿ ರೂಪಾಯಿಗೆ ಖರೀದಿಸಿದೆ. ಮುಂದಿನ ವರ್ಷ ಐಪಿಎಲ್ ಮೆಗಾ ಹರಾಜು ನಡೆಯಲಿರುವುದರಿಂದ ಲಖನೌ ಸೂಪರ್ ಜೈಂಟ್ಸ್ ಅವರನ್ನು ಉಳಿಸಿಕೊಳ್ಳುವುದು ಅನುಮಾನ ಎಂಬ ವರದಿಗಖು ಸಹ ಹರಿದಾಡುತ್ತಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.