Virat Kohli IPL Records: ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌’ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಐಪಿಎಲ್ 2024ರಲ್ಲಿ ಅಬ್ಬರಿಸುತ್ತಿದ್ದಾರೆ. ಈ ಭಾರತೀಯ ದಂತಕಥೆ ಪ್ರಸಕ್ತ ಋತುವಿನಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಐಪಿಎಲ್ 2024ರ ಆರಂಭದಲ್ಲಿ ಬಹುತೇಕ ಹೊರಗುಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅದ್ಭುತ ಪುನರಾಗಮನ ಮಾಡಿ ಪ್ಲೇಆಫ್‌ಗೆ ಪ್ರವೇಶಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬೆಂಗಳೂರು ಮಳೆ ಎಫೆಕ್ಟ್: ಸಿಟಿ ರೌಂಡ್ಸ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?


ಈಗ ತಂಡವು ಮೇ 22 ರಂದು ಅಂದರೆ ಇಂದು ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್’ನಲ್ಲಿ ಅಬ್ಬರಿಸಿದರೆ ಐಪಿಎಲ್ ಇತಿಹಾಸದಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ.


ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮತ್ತು ಪ್ರಸಕ್ತ ಋತುವಿನಲ್ಲಿ 708 ರನ್ ಗಳಿಸಿರುವ ವಿರಾಟ್ ಕೊಹ್ಲಿ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಲು ಕೇವಲ 29 ರನ್‌’ಗಳ ಅಂತರದಲ್ಲಿದ್ದಾರೆ. ಈ ಪಂದ್ಯದಲ್ಲಿ 29 ರನ್ ಗಳಿಸುವ ಮೂಲಕ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ 8000 ರನ್ ಗಡಿ ದಾಟಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. ವಿಶೇಷವೆಂದರೆ ಬೇರೆ ಯಾವ ಬ್ಯಾಟ್ಸ್‌ಮನ್‌’ಗಳಿಗೂ 7000 ರನ್‌’ಗಳನ್ನು ತಲುಪಲು ಸಾಧ್ಯವಾಗಿಲ್ಲ. 2008ರಿಂದ ಆರ್‌ಸಿಬಿ ಪರ ಕೊಹ್ಲಿ ಆಡುತ್ತಿದ್ದು, ಇಲ್ಲಿಯವರೆಗೆ 251 ಪಂದ್ಯಗಳನ್ನು ಆಡಿದ್ದಾರೆ.


ಇದನ್ನೂ ಓದಿ: ಅನ್ನ ಬೇಯುವಾಗ ಒಂದು ಸ್ಪೂನ್ ಈ ಎಣ್ಣೆ ಬೆರಸಿ: ದೇಹದ ಹೆಚ್ಚುವರಿ ತೂಕ ಬೆಣ್ಣೆಯಂತೆ ಕರಗುತ್ತೆ! ಸ್ಲಿಮ್ ಆಗೋಕೆ ಬೇರೇನು ಬೇಡ


ಐಪಿಎಲ್‌’ನ ಶ್ರೇಷ್ಠ ಬ್ಯಾಟ್ಸ್‌ಮನ್


ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್. ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳ ಜೊತೆಗೆ ಅತಿ ಹೆಚ್ಚು ಶತಕ ಬಾರಿಸಿರುವ ಆಟಗಾರ ಎಂಬ ದಾಖಲೆಯನ್ನೂ ಕೊಹ್ಲಿ ಹೊಂದಿದ್ದಾರೆ. ಪ್ರಸಕ್ತ ಋತುವಿನಲ್ಲೂ ಕೊಹ್ಲಿ 1 ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಹೆಸರಿನಲ್ಲಿ ಒಟ್ಟು 8 ಶತಕಗಳು ದಾಖಲಾಗಿವೆ. ಅಷ್ಟೇ ಅಲ್ಲ, ಐಪಿಎಲ್‌’ನ ಒಂದೇ ಸೀಸನ್‌’ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಕೊಹ್ಲಿ. 2016ರಲ್ಲಿ ದಾಖಲೆಯ 4 ಶತಕ ಹಾಗೂ 973 ರನ್ ಗಳಿಸುವ ಮೂಲಕ ಕೊಹ್ಲಿ ತಮ್ಮ ಉಗ್ರ ಸ್ವರೂಪವನ್ನು ತೋರಿಸಿದ್ದರು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ