IND vs ENG, 5th Test: ರಜತ್ ಪಾಟಿದಾರ್ ಈಗಾಗಲೇ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದರ ಜೊತೆಗೆ ಟೆಸ್ಟ್ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ರಜತ್ ಪಾಟಿದಾರ್ ಹೊರಗುಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

23 ವರ್ಷದ ದೇವದತ್ ಪಡಿಕ್ಕಲ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಉತ್ಸುಕರಾಗಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಮಾರ್ಚ್ 7 ರಿಂದ 11 ರವರೆಗೆ ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆಯಲಿದೆ.


ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸೊಸೆ ಟಾಪ್ ಹೀರೋಯಿನ್…ಸಿನಿರಂಗವನ್ನೇ ಆಳುತ್ತಿರುವ ಈ ಸುಂದರಿ ಯಾರು ಗೊತ್ತಾ?


ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಭಾರತ ಈಗಾಗಲೇ ಟೆಸ್ಟ್ ಸರಣಿಯನ್ನು ಗೆದ್ದಿದೆ. ಆದರೆ ತಂಡದ ನಿರ್ವಹಣೆಯು ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅವರ ಭವಿಷ್ಯವನ್ನು ನಿರ್ಧರಿಸಲಿದೆ. ದೇವದತ್ ಪಡಿಕ್ಕಲ್ ಇತ್ತೀಚೆಗೆ ರಣಜಿ ಟ್ರೋಫಿಯಲ್ಲಿ ರನ್ ಗಳಿಸುವ ಮೂಲಕ ಭಾರತೀಯ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದರು.


ಪಡಿಕ್ಕಲ್ ಅವರು 31 ಪ್ರಥಮ ದರ್ಜೆ ಪಂದ್ಯಗಳಲ್ಲಿ 44.54 ರ ಅತ್ಯುತ್ತಮ ಸರಾಸರಿಯಲ್ಲಿ 2227 ರನ್ ಗಳಿಸಿದ್ದಾರೆ, ಇದರಲ್ಲಿ 6 ಶತಕಗಳು ಮತ್ತು 12 ಅರ್ಧ ಶತಕಗಳು ಸೇರಿವೆ. ಪ್ರಥಮ ದರ್ಜೆ ಪಂದ್ಯಗಳಲ್ಲಿ ಅತ್ಯುತ್ತಮ ಸ್ಕೋರ್ 193 ರನ್. 30 ಲಿಸ್ಟ್ ಎ ಪಂದ್ಯಗಳಲ್ಲಿ 81.52 ರ ಅತ್ಯುತ್ತಮ ಸರಾಸರಿಯಲ್ಲಿ 1875 ರನ್ ಗಳಿಸಿದ್ದು, ಇದರಲ್ಲಿ 8 ಶತಕಗಳು ಮತ್ತು 11 ಅರ್ಧ ಶತಕಗಳು ಸೇರಿವೆ. ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ 152 ರನ್.


ದೇವದತ್ ಪಡಿಕ್ಕಲ್ ಅವರು ತಮ್ಮ ಕೊನೆಯ 10 ಪ್ರಥಮ ದರ್ಜೆ ಇನ್ನಿಂಗ್ಸ್‌ಗಳಲ್ಲಿ 30, 193, 42, 31, 103, 105, 65, 21, 151 ಮತ್ತು 36 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಬ್ಯಾಟಿಂಗ್ ಸರಾಸರಿ 77.7 ಆಗಿದೆ. ಕೊನೆಯ 10 ಪ್ರಥಮ ದರ್ಜೆ ಇನ್ನಿಂಗ್ಸ್‌ಗಳಲ್ಲಿ 4 ಶತಕಗಳನ್ನು ಗಳಿಸಿದ್ದು, ಇದರಲ್ಲಿ 151 ರನ್‌’ಗಳು ಅವರ ಗರಿಷ್ಠ ಸ್ಕೋರ್ ಆಗಿದೆ.


ಇದನ್ನೂ ಓದಿ: ನಟನೆ ತೊರೆದು ಸನ್ಯಾಸಿಯಾದ ಪ್ರಖ್ಯಾತ ನಟಿ: ಕೋಟಿ ಕೋಟಿ ಆಸ್ತಿ ತ್ಯಜಿಸಿ ತಪಸ್ವಿಯಾದ ‘ಮಿಸ್ ಇಂಡಿಯಾ’ ಬ್ಯೂಟಿ ಈಕೆ!


ಫಾರ್ಮ್ ಅನ್ನು ನೋಡಿದರೆ, ದೇವದತ್ ಪಡಿಕ್ಕಲ್ ಧರ್ಮಶಾಲಾದಲ್ಲಿ ಪಾದಾರ್ಪಣೆ ಮಾಡುವ ಅವಕಾಶವನ್ನು ಪಡೆಯಬಹುದು. ದೇವದತ್ ಪಡಿಕ್ಕಲ್ ಅವರು ಧರ್ಮಶಾಲಾ ಟೆಸ್ಟ್‌’ನಲ್ಲಿ 4 ನೇ ಕ್ರಮಾಂಕದಲ್ಲಿ ಆಡುವ ಅವಕಾಶವನ್ನು ಪಡೆದರೆ, ರಜತ್ ಪಾಟಿದಾರ್ ಪ್ಲೇಯಿಂಗ್ 11 ರಿಂದ ಹೊರಗುಳಿಯಬೇಕಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ