Rohit Sharma: ಭಾರತ 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಈ ಅಂತರರಾಷ್ಟ್ರೀಯ ಕ್ರಿಕೆಟ್‌ನ ಈ ಸ್ವರೂಪದಿಂದ ನಿವೃತ್ತಿ ಘೋಷಿಸಿದ್ದರು. ಅವರ ವಯಸ್ಸನ್ನು ಪರಿಗಣಿಸಿ, 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ವಿದಾಯ ಹೇಳಲಿದ್ದಾರೆ ಎಂಬ ಊಹಾಪೋಹಗಳಿವೆ. ಇದೆಲ್ಲದರ ಮಧ್ಯೆ ಹಿಟ್‌ಮ್ಯಾನ್ ಸ್ವತಃ ತನ್ನ ನಿವೃತ್ತಿ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಐಸಿಸಿ 2025 ಚಾಂಪಿಯನ್ಸ್ ಟ್ರೋಫಿಯ ಫೈನಲ್ ಅನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಮಾತ್ರ ಟೀಂ ಇಂಡಿಯಾ ಆಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೆಲವು ದಿನಗಳ ಹಿಂದೆ ಸ್ಪಷ್ಟಪಡಿಸಿದ್ದರು ಎಂಬುದು ಗಮನಾರ್ಹ. ಆದರೆ ಆ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಜಯ್ ಶಾ ಮಾತನಾಡಲಿಲ್ಲ. ಹೀಗಿದ್ದಾಗ ಹಿಟ್‌ಮ್ಯಾನ್ 2025 ರ ಚಾಂಪಿಯನ್ಸ್ ಟ್ರೋಫಿಯವರೆಗೆ ಮಾತ್ರ ODI ಸ್ವರೂಪದಲ್ಲಿ ಆಡುತ್ತಾರೆ ಎಂಬ ಊಹಾಪೋಹಗಳು ಪ್ರಾರಂಭವಾದವು. ಆದರೆ, ಇದೀಗ ರೋಹಿತ್ ಅವರೇ ಎಲ್ಲ ಗೊಂದಲಗಳನ್ನು ನಿವಾರಿಸಿದ್ದಾರೆ. 


ಜುಲೈ 14 ರಂದು ಡಲ್ಲಾಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ರೋಹಿತ್ ಶರ್ಮಾ ಅವರು ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿಯ ಬಗ್ಗೆ ಪ್ರಶ್ನೆಯನ್ನು ಕೇಳಿದಾಗ, ಹಿಟ್‌ಮ್ಯಾನ್.. ನಾನು ಹೆಚ್ಚು ಮುಂದೆ ಯೋಚಿಸುವುದಿಲ್ಲ, ಆದರೆ ಸದ್ಯಕ್ಕೆ ಅಭಿಮಾನಿಗಳು ನನ್ನನ್ನು ಮೈದಾನದಲ್ಲಿ ನೋಡುತ್ತಾರೆ. ತಮ್ಮಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಕ್ರೇಜ್‌ ಇದೆ ಎಂದು ರೋಹಿತ್ ಹೇಳಿದ್ದಾರೆ. ಅವರ ಉತ್ತರಕ್ಕೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳು ಚಪ್ಪಾಳೆ ತಟ್ಟಿದ್ದಾರೆ.. 


ಈ ಸಮಾರಂಭದಲ್ಲಿ ರೋಹಿತ್ ಶರ್ಮಾ ಹೇಳಿದ್ದೇನು ಇಲ್ಲಿದೆ ನೋಡಿ: 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ