India vs Pakistan: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೆಸ್ಟ್ ಕ್ರಿಕೆಟ್ ಅನ್ನು ತಟಸ್ಥ ಸ್ಥಳದಲ್ಲಿ ಆಡಲು ನನಗೆ ಯಾವುದೇ ತೊಂದರೆ ಇಲ್ಲ ಎಂದು ಭಾರತೀಯ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ 2012 ರಿಂದ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳನ್ನು ಆಡಿಲ್ಲ. ಆದರೆ, ಎರಡೂ ದೇಶಗಳು ನಿಯಮಿತವಾಗಿ ಐಸಿಸಿ ಮತ್ತು ಎಸಿಸಿ ಪಂದ್ಯಾವಳಿಗಳಲ್ಲಿ ಪಂದ್ಯವನ್ನಾಡುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರುರನ್ನು ಗೆಲ್ಲಿಸಿ, ಕಾಂಗ್ರೆಸ್ ಕೈ ಬಲಪಡಿಸಿ: ಬಿ.ಟಿ.ಲಲಿತಾ ನಾಯಕ್  


2023ರ ವಿಶ್ವಕಪ್‌’ನಲ್ಲಿ ಉಭಯ ತಂಡಗಳ ನಡುವಿನ ಕೊನೆಯ ಪಂದ್ಯ ಭಾರತದಲ್ಲಿ ನಡೆದಿತ್ತು.


ಆಸ್ಟ್ರೇಲಿಯಾದ ಮಾಜಿ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಆಡಮ್ ಗಿಲ್‌ಕ್ರಿಸ್ಟ್ ಮತ್ತು ಇಂಗ್ಲೆಂಡ್‌’ನ ಮಾಜಿ ನಾಯಕ ಮೈಕೆಲ್ ವಾನ್ ಅವರ 'ಕ್ಲಬ್ ಪ್ರೈರೀ ಫೈರ್' ಯೂಟ್ಯೂಬ್ ಶೋನಲ್ಲಿ ಮಾತನಾಡಿದ ರೋಹಿತ್ ಶರ್ಮಾ, “ ಅವರು ಉತ್ತಮ ತಂಡವನ್ನು ಹೊಂದಿದ್ದಾರೆ. ಅತ್ಯುತ್ತಮ ಬೌಲಿಂಗ್ ಇರುತ್ತದೆ ಎಂದು ನಾನು ಸಂಪೂರ್ಣವಾಗಿ ನಂಬುತ್ತೇನೆ ಜೊತೆಗೆ ಉತ್ತಮ ಸ್ಪರ್ಧೆ ಇರುತ್ತದೆ”ಎಂದು ಹೇಳಿದ್ದಾರೆ. 


ಇದನ್ನೂ ಓದಿ: ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ


ಇಂಗ್ಲೆಂಡ್ ಅಥವಾ ಆಸ್ಟ್ರೇಲಿಯಾದಂತಹ ತಟಸ್ಥ ಸ್ಥಳದಲ್ಲಿ ಭಾರತ-ಪಾಕಿಸ್ತಾನ ಟೆಸ್ಟ್ ಸಾಧ್ಯವೇ ಎಂದು ಕೇಳಿದಾಗ, 'ಹೌದು, ನಾನು ಪಾಕಿಸ್ತಾನ ವಿರುದ್ಧ ಆಡಲು ಇಷ್ಟಪಡುತ್ತೇನೆ. ಇದು ಎರಡು ತಂಡಗಳ ನಡುವೆ ಉತ್ತಮ ಪಂದ್ಯವಾಗಲಿದೆ. ಐಸಿಸಿ ಟ್ರೋಫಿಗಳಲ್ಲಿ ಅವರ ವಿರುದ್ಧ ಆಡುತ್ತೇವೆ. ನಾನು ಕ್ರಿಕೆಟ್ ಅನ್ನು ಶ್ರೇಷ್ಠ ಸ್ಪರ್ಧೆಯನ್ನಾಗಿ ನೋಡುತ್ತಿದ್ದೇನೆ. ಹಾಗಾದರೆ ಯಾಕೆ ಬೇರೊಂದು ಸ್ಥಳದಲ್ಲಿ ಮುಖಾಮುಖಿಯಾಗಬಾರದು” ಎಂದು ಹೇಳಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...


Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.