ಸತತ ಸೋಲಿನ ಬಳಿಕ ಯುಪಿ ವಾರಿಯರ್ಸ್ ವಿರುದ್ಧ ಗೆದ್ದುಬೀಗಿದ RCB: ಪ್ಲೇ ಆಫ್ ಕನಸು ಜೀವಂತ!
WPL 2023: ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆರನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಸ್ಮೃತಿ ಮಂಧಾನ ಸಾರಥ್ಯದ ಈ ತಂಡ ಯುಪಿ ವಾರಿಯರ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ (ಎರಡು ಬಾರಿ), ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ವಿರುದ್ಧ ಹೀನಾಯ ಸೋಲು ಕಂಡಿದ್ದರು.
WPL 2023: ಮಹಿಳಾ ಪ್ರೀಮಿಯರ್ ಲೀಗ್‌ನ 13 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯುಪಿ ವಾರಿಯರ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ. ಉಭಯ ತಂಡಗಳ ನಡುವಿನ ಪಂದ್ಯ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಿತು.
ಟಾಸ್ ಗೆದ್ದ ಆರ್’ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 19.3 ಓವರ್‌ಗಳಲ್ಲಿ 135 ರನ್’ಗಳಿಗೆ ಕಟ್ಟಿಹಾಕಿತು. ಬಳಿಕ ಗುರಿ ಬೆನ್ನತ್ತಿದ್ದ ಆರ್‌ಸಿಬಿ 18 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಗೆಲುವು ಸಾಧಿಸಿತು. ಈ ಟೂರ್ನಿಯಲ್ಲಿ ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಗೆಲುವು.
ಇದನ್ನೂ ಓದಿ: Railways: ಒಂದು ಲೀಟರ್ ಇಂಧನದಲ್ಲಿ ರೈಲು ಎಷ್ಟು ಕಿ.ಮೀ ಓಡುತ್ತದೆ? ರೈಲಿನ ಮೈಲೇಜ್ ಹೇಗಿದೆ ಗೊತ್ತಾ?
ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆರನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಸ್ಮೃತಿ ಮಂಧಾನ ಸಾರಥ್ಯದ ಈ ತಂಡ ಯುಪಿ ವಾರಿಯರ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ (ಎರಡು ಬಾರಿ), ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ವಿರುದ್ಧ ಹೀನಾಯ ಸೋಲು ಕಂಡಿದ್ದರು.
ಈ ಸೋಲು ಅಭಿಮಾನಿಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸೋಲಿನ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್’ಗೆ ಗುರಿಯಾಗಿದ್ದರು ಸ್ಮೃತಿ.
ಇದನ್ನೂ ಓದಿ: ಸಾಕಷ್ಟು ನಿಗೂಢವಾಯ್ತು ವಿ. ಸೋಮಣ್ಣನ ನಡೆ...!
20ರ ಹರೆಯದ ಕನಿಕಾ ಅಹುಜಾ ಮತ್ತು 19ರ ಹರೆಯದ ರಿಚಾ ಘೋಷ್ ಆರ್‌ಸಿಬಿ ಪರ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು. ಕನಿಕಾ 30 ಎಸೆತಗಳಲ್ಲಿ 46 ರನ್ ಗಳಿಸಿದರೆ, ರಿಚಾ 32 ಎಸೆತಗಳಲ್ಲಿ 31 ರನ್ ಗಳಿಸಿ ಅಜೇಯರಾಗಿ ಉಳಿದರು. ಅನುಭವಿ ಹೀದರ್ ನೈಟ್ 24 ರನ್ ಕೊಡುಗೆ ನೀಡಿದರು. ಸೋಫಿ ಡಿವೈನ್ 14 ಮತ್ತು ಆಲಿಸ್ ಪ್ಯಾರಿ 10 ರನ್ ಗಳಿಸಿದರು. ನಾಯಕಿ ಸ್ಮೃತಿ ಮಂಧಾನ ಮತ್ತೊಮ್ಮೆ ವಿಫಲರಾಗಿದ್ದು, ಖಾತೆ ತೆರೆಯದೆ ಪೆವಿಲಿಯನ್’ಗೆ ಮರಳಿದ್ದಾರೆ. ಶ್ರೇಯಾಂಕಾ ಪಾಟೀಲ್ ಔಟಾಗದೆ ಐದು ರನ್ ಗಳಿಸಿದರು. ಯುಪಿ ವಾರಿಯರ್ಸ್ ಪರ ದೀಪ್ತಿ ಶರ್ಮಾ ಎರಡು ವಿಕೆಟ್ ಪಡೆದರೆ, ಸೋಫಿ ಎಕ್ಲೆಸ್ಟೋನ್, ದೇವಿಕಾ ವೈದ್ಯ ಮತ್ತು ಗ್ರೇಸ್ ಹ್ಯಾರಿಸ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.