ಈ ಸಣ್ಣ ಹೆಜ್ಜೆಯಿಂದ ಪಾಕ್ ಆಟಗಾರನ ಆಳ್ವಿಕೆಗೆ ಬ್ರೇಕ್ ಹಾಕಲಿದ್ದಾರೆ ಟೀಂ ಇಂಡಿಯಾದ ಆಟಗಾರ!
ಸೂರ್ಯಕುಮಾರ್ ಯಾದವ್ ಮಾರ್ಚ್ 2021ರಲ್ಲಿ ಭಾರತ ತಂಡದ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಇದಾದ ನಂತರ ಹಿಂತಿರುಗಿ ನೋಡದೆ ಟೀಂ ಇಂಡಿಯಾ ಪರ ಹಲವು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಆರಂಭದಲ್ಲೂ ಅವರು 44 ಎಸೆತಗಳಲ್ಲಿ 76 ರನ್ ಗಳಿಸಿದ್ದರು.
ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾದಲ್ಲಿ ಕೆಲವು ಸಮಯದಿಂದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಟೀಮ್ ಇಂಡಿಯಾಕ್ಕೆ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಬೆನ್ನೆಲುಬಾಗಿ ಆಟವಾಡುತ್ತಿದ್ದಾರೆ. ಇತ್ತೀಚೆಗೆ ಅವರು ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್ 2 ಆಟಗಾರರಾಗಿ ಹೊರಹೊಮ್ಮಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಪಾಕಿಸ್ತಾನದ ಬಾಬರ್ ಆಜಮ್ ಅವರನ್ನು ಹಿಂದಿಕ್ಕಿ ಟಿ-20 ಕ್ರಿಕೆಟ್‌ನಲ್ಲಿ ಸಾಧನೆ ಮಾಡುವ ಸಾಧ್ಯತೆಯಿದೆ. ಇದಕ್ಕಾಗಿ ಅವರು ವಿಂಡೀಸ್ ವಿರುದ್ಧ ಕೆಲವು ದಾಖಲೆಗಳನ್ನು ಮಾಡಬೇಕಾಗಿದೆ.
ಇದನ್ನೂ ಓದಿ: ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!
ಸೂರ್ಯಕುಮಾರ್ ಯಾದವ್ ಮಾರ್ಚ್ 2021ರಲ್ಲಿ ಭಾರತ ತಂಡದ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಇದಾದ ನಂತರ ಹಿಂತಿರುಗಿ ನೋಡದೆ ಟೀಂ ಇಂಡಿಯಾ ಪರ ಹಲವು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಆರಂಭದಲ್ಲೂ ಅವರು 44 ಎಸೆತಗಳಲ್ಲಿ 76 ರನ್ ಗಳಿಸಿದ್ದರು.
ಸೂರ್ಯಕುಮಾರ್ ಯಾದವ್ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬಿರುಗಾಳಿಯ ಪ್ರದರ್ಶನವನ್ನು ನೀಡಿದ್ದರು. ಆ ಮೂಲಕ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನವನ್ನು ತಲುಪಿದ್ದರು. ಅಗ್ರ-10ರಲ್ಲಿರುವ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಆಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದರು. ಟಿ20ಯಲ್ಲಿ ಭಾರತದ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಲು ನಿಖರವಾಗಿ 506 ದಿನಗಳನ್ನು ತೆಗೆದುಕೊಂಡಿದ್ದಾರೆ. ಕೇವಲ 22 ಪಂದ್ಯಗಳಲ್ಲಿ 38.11 ಸರಾಸರಿ ಮತ್ತು 175.60 ಸ್ಟ್ರೈಕ್ ರೇಟ್‌ನಲ್ಲಿ 648 ರನ್ ಗಳಿಸಿದ್ದಾರೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಇನ್ನು ಕಳೆದ ಕೆಲವು ವರ್ಷಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ, ಬಾಬರ್ ಅಜಮ್ ಉತ್ತಮ ಪ್ರದರ್ಶನದ ಆಧಾರದ ಮೇಲೆ ತನ್ನನ್ನು ತಾನು ಸ್ಥಾಪಿಸಿಕೊಂಡಿದ್ದಾರೆ. ಬಾಬರ್ ಅಜಮ್ 818 ಅಂಕಗಳೊಂದಿಗೆ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ 816 ಅಂಕ ಪಡೆದಿದ್ದಾರೆ. ಇನ್ಸೈಡ್ ಸ್ಪೋರ್ಟ್ಸ್ ವರದಿ ಪ್ರಕಾರ, ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 50 ರನ್ ಗಳಿಸಿದರೆ, ಟಿ20 ರ್ಯಾಂಕಿಂಗ್‌ನಲ್ಲಿ ನಂಬರ್ ಒನ್ ತಲುಪುತ್ತಾರೆ. ಈ ಮೂಲಕ ಪಾಕಿಸ್ತಾನದ ಬಾಬರ್ ಅಜಮ್ ಆಳ್ವಿಕೆಯನ್ನು ಕೊನೆಗೊಳಿಸಲಿದ್ದಾರೆ.
ಇದನ್ನೂ ಓದಿ: ಗಾಳಿಪಟ -2 ಹಾಡಿಗೆ ಕಿಚ್ಚನ ಶಹಬ್ಬಾಶ್‌ಗಿರಿ: ʼಪ್ರಾಯಶಃʼ ಸಾಂಗ್ ಹಾಡಿದ ಅಭಿನಯ ಚಕ್ರವರ್ತಿ
ವೆಸ್ಟ್ ಇಂಡೀಸ್ ಪ್ರವಾಸದ ನಂತರ ಭಾರತ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಬೇಕಾಗಿದೆ. ಸದ್ಯ ಸೂರ್ಯಕುಮಾರ್ ಯಾದವ್ ಉತ್ತಮ ಫಾರ್ಮ್‌ನಲ್ಲಿ ಓಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರು ಏಷ್ಯಾಕಪ್‌ಗೆ ಆಯ್ಕೆಯಾಗುವುದು ಖಚಿತ. ಅವರು ಮಧ್ಯಮ ಕ್ರಮಾಂಕ ಮತ್ತು ಅಗ್ರ ಕ್ರಮಾಂಕದಲ್ಲಿ ರನ್ ಗಳಿಸುವ ಶ್ರೇಷ್ಠ ಆಟಗಾರ ಎನ್ನಬಹುದು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.