ಮಹಿಳಾ ಏಷ್ಯಾ ಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ವಿರುದ್ಧ ಗೆಲುವು ಸಾಧಿಸಿದೆ. 15.1 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಥಾಯ್ಲೆಂಡ್ ಕೇವಲ 37 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನತ್ತಿದ ಭಾರತ ಒಂದು ವಿಕೆಟ್ ನಷ್ಟಕ್ಕೆ ಕೇವಲ 6 ಓವರ್ ನಲ್ಲಿ 40 ರನ್ ಬಾರಿಸಿ ಸೆಮಿ ಫೈನಲ್ ಪ್ರವೇಶಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Team India : ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದ ಓಪನರ್ ಬ್ಯಾಟ್ಸ್‌ಮನ್‌ ಚೆಂಜ್


ಭಾರತ ತಂಡ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಸಾಧಿಸಿತ್ತು. ಇದೀಗ ಮತ್ತೊಂದು ಗೆಲುವಿನ ಅಂಕ ಕೂಡ ಸೇರ್ಪಡೆಯಾಗಿದೆ.


ಇನ್ನು ದೀಪ್ತಿ ಶರ್ಮಾ 10 ರನ್ ಗೆ 2 ವಿಕೆಟ್, ಸ್ನೇಹ್ ರಾಣಾ 9 ರನ್ ಗೆ 3 ವಿಕೆಟ್, ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ 8 ರನ್ ಗೆ 2 ವಿಕೆಟ್, ಮೇಘನಾ ಸಿಂಗ್ ಒಂದು ವಿಕೆಟ್ ಪಡೆಯುವ ಮೂಲಕ ಥಾಯ್ಲೆಂಡ್ ತಂಡವನ್ನು ಆಲೌಟ್ ಮಾಡಿದ್ದಾರೆ.


ಇದನ್ನೂ ಓದಿ: T20 World Cup: T20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಇವರೇ ನೋಡಿ


ಇನ್ನೊಂದೆಡೆ ಕನ್ನಡತಿ ಸ್ಮೃತಿ ಮಂಧಾನ ಮಹಿಳಾ ಏಷ್ಯಾಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಇಂದು ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸಿದ ಎರಡನೇ ಭಾರತೀಯ ಆಟಗಾರ್ತಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.