Womens Asia Cup T20, 2024: ಪಾಕ್ ವಿರುದ್ಧ ಭಾರತೀಯ ಮಹಿಳಾ ತಂಡಕ್ಕೆ 7 ವಿಕೆಟ್ ಗಳ ಭರ್ಜರಿ ಜಯ

Womens Asia Cup T20, 2024:ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.

Written by - Manjunath N | Last Updated : Jul 20, 2024, 05:15 AM IST
  • ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
  • ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.\
 Womens Asia Cup T20, 2024: ಪಾಕ್ ವಿರುದ್ಧ ಭಾರತೀಯ ಮಹಿಳಾ ತಂಡಕ್ಕೆ 7 ವಿಕೆಟ್ ಗಳ ಭರ್ಜರಿ ಜಯ  title=

Womens Asia Cup T20, 2024 ದಂಬುಲ್ಲಾ: ಇಲ್ಲಿನ ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಪಾಕ್ ಮಹಿಳಾ ತಂಡದ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕ್ ಮಹಿಳಾ ತಂಡವು 19.2 ಓವರ್ ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಕೇವಲ 108 ರನ್ ಗಳನ್ನು ಗಳಿಸುವಲ್ಲಿ ಮಾತ್ರ ಶಕ್ತವಾಯಿತು.ಪಾಕ್ ಪರವಾಗಿ ಅಮೀನ್ 25 ರನ್ ಗಳಿಸಿದ್ದೆ ಅಧಿಕ ಮೊತ್ತವಾಗಿತ್ತು.

ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.

ಪಾಕ್ ಮಹಿಳಾ ತಂಡವು ನೀಡಿದ 109 ರನ್ ಗಳ ಸುಲಭ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತೀಯ ಮಹಿಳಾ ತಂಡವು ಕೇವಲ ಮೂರು ವಿಕೆಟ್ ಕಳೆದುಕೊಂಡು 14.1 ಓವರ್ ಗಳಲ್ಲಿ 109 ರನ್ ಗಳಿಸುವ ಮೂಲಕ ಗೆಲುವಿನ ಕೇಕೆ ಹಾಕಿತು.ಭಾರತೀಯ ಮಹಿಳಾ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಮೃತಿ ಮಂಧಾನ 45 ಹಾಗೂ ಶೆಪಾಲಿ ವರ್ಮಾ 40 ರನ್ ಗಳಿಸಿ ತಂಡವನ್ನು ಗೆಲುವಿನ ಗುರಿ ಮುಟ್ಟಿಸುವಲ್ಲಿ ನೆರವಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News