Women's T20 World Cup: ಇತಿಹಾಸ ಸೃಷ್ಟಿಸುವ ಮೂಲಕ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಶುಕ್ರವಾರ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 6 ರನ್‌ಗಳಿಂದ ಸೋಲಿಸಿತು. ಇದೀಗ ಪ್ರಶಸ್ತಿಗಾಗಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿವೆ.
ದಕ್ಷಿಣ ಆಫ್ರಿಕಾ ಪರ ಆರಂಭಿಕರಾದ ಲಾರಾ ವೂಲ್ಫಾರ್ಟ್ ಮತ್ತು ತಜ್ಮಿನ್ ಬ್ರಿಟ್ಜ್ ಅರ್ಧಶತಕ ಗಳಿಸಿದರು. ನಂತರ ಅಯಾಬೊಂಗಾ ಖಾಕಾ ಮತ್ತು ಶಬ್ನಿಮ್ ಇಸ್ಮಾಯಿಲ್ ತೀಕ್ಷ್ಣವಾದ ಬೌಲಿಂಗ್‌ನೊಂದಿಗೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಗುರುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 5 ರನ್‌ಗಳಿಂದ ಭಾರತವನ್ನು ಸೋಲಿಸಿತ್ತು.
ಇದನ್ನೂ ಓದಿ: ಕ್ರೀಡಾ ಸಚಿವಾಲಯದ ಯುವ ಸ್ವಯಂ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಲಾರಾ ವೂಲ್ಫಾರ್ಟ್ 44 ಎಸೆತಗಳಲ್ಲಿ 53 ರನ್ ಗಳಿಸಿದರೆ, ಬ್ರಿಟ್ಜ್ 55 ಎಸೆತಗಳಲ್ಲಿ 68 ರನ್ ಗಳಿಸಿ ಆಕರ್ಷಕ ಇನ್ನಿಂಗ್ಸ್ ಆಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 96 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ದಕ್ಷಿಣ ಆಫ್ರಿಕಾ ತಂಡವು 4 ವಿಕೆಟ್‌ಗೆ 164 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡ 8 ವಿಕೆಟ್‌ಗೆ 158 ರನ್ ಗಳಿಸಲಷ್ಟೇ ಶಕ್ತವಾಯಿತು. ದಕ್ಷಿಣ ಆಫ್ರಿಕಾ ಪರ ಖಾಕಾ 29ಕ್ಕೆ 4 ಹಾಗೂ ಇಸ್ಮಾಯಿಲ್ 27ಕ್ಕೆ 3 ವಿಕೆಟ್ ಪಡೆದರು.
ಮೊದಲ ವಿಕೆಟ್’ಗೆ 53 ರನ್ ಸೇರಿಸುವ ಮೂಲಕ ಇಂಗ್ಲೆಂಡ್‌ಗೆ ಡ್ಯಾನಿ ವ್ಯಾಟ್ (30 ಎಸೆತಗಳಲ್ಲಿ 34) ಮತ್ತು ಸೋಫಿಯಾ ಡಂಕ್ಲೆ (16 ಎಸೆತಗಳಲ್ಲಿ 28) ಉತ್ತಮ ಆರಂಭ ನೀಡಿದರು. ದಕ್ಷಿಣ ಆಫ್ರಿಕಾದ ಪ್ರಮುಖ ಬೌಲರ್ ಇಸ್ಮಾಯಿಲ್ ಡಂಕ್ಲಿಯನ್ನು ಔಟ್ ಮಾಡುವ ಮೂಲಕ ಈ ಜೊತೆಯಾಟವನ್ನು ಮುರಿದರು. ಒಂದು ಎಸೆತದ ನಂತರ ಯುವ ಬ್ಯಾಟ್ಸ್‌ಮನ್ ಆಲಿಸ್ ಕ್ಯಾಪ್ಸಿ (00) ಸಹ ಪೆವಿಲಿಯನ್ ಗೆ ಮರಳಿದರು.
ಇಂಗ್ಲೆಂಡ್‌ನ ಮೇಲೆ ಒತ್ತಡ ಹೆಚ್ಚಾಗಿದ್ದು, ಮಧ್ಯದಲ್ಲಿ 8 ರನ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡರು. ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ಗೆ 12 ರನ್ ಅಗತ್ಯವಿತ್ತು ಮತ್ತು ನೈಟ್ ಕ್ರೀಸ್‌ನಲ್ಲಿದ್ದರು.
ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್ ಧರಿಸುವ ಈ ವಾಚ್ ಬೆಲೆ ಎಷ್ಟು ಕೋಟಿ ಗೊತ್ತಾ? ತಲೆ ಸುತ್ತೋದು ಖಂಡಿತ!
ಇನ್ನು ಇಸ್ಮಾಯಿಲ್ ಉತ್ತಮವಾಗಿ ಬೌಲಿಂಗ್ ಮಾಡಿದ್ದು, ಮೂರನೇ ಎಸೆತದಲ್ಲಿ ನೈಟ್ ಬೌಲಿಂಗ್ ಮಾಡುವ ಮೂಲಕ ಇಂಗ್ಲೆಂಡ್ ಭರವಸೆಯನ್ನು ನುಚ್ಚುನೂರು ಮಾಡಿದರು. ಈ ಓವರ್‌ನಲ್ಲಿ ಕೇವಲ 6 ರನ್ ನೀಡಿದರು. ಇದಕ್ಕೂ ಮುನ್ನ ವೂಲ್ಫಾರ್ಟ್ ಸತತ ಎರಡನೇ ಅರ್ಧಶತಕ ಗಳಿಸಿದರು. 23ರ ಹರೆಯದ ಈ ಆಟಗಾರ್ತಿ ತನ್ನ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.