World Cup 2023 IND vs AFG: ವಿಶ್ವಕಪ್ 2023ರಲ್ಲಿ ಭಾರತದ ಎರಡನೇ ಪಂದ್ಯವು ಅಫ್ಘಾನಿಸ್ತಾನ ವಿರುದ್ಧ ನಡೆಯಲಿದೆ. ಈ ಪಂದ್ಯ ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 4K Google TV: ಕಡಿಮೆ ಬೆಲೆಗೆ ಅದ್ಭುತ ವೈಶಿಷ್ಟ್ಯ ಹೊಂದಿರುವ 65-ಇಂಚಿನ ಸ್ಮಾರ್ಟ್ ಟಿವಿ


ಇನ್ನು ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ ಕೇವಲ 3 ಏಕದಿನ ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಒಂದು ಪಂದ್ಯ ಟೈ ಆಗಿದೆ. ಇದೀಗ ಮತ್ತೊಮ್ಮೆ ಈ ಎರಡು ತಂಡಗಳು ಮೈದಾನದಲ್ಲಿ ಮುಖಾಮುಖಿಯಾಗಲಿವೆ.


ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಪಂದ್ಯ ಮಾರ್ಚ್ 2014ರಲ್ಲಿ ನಡೆದಿತ್ತು. ಮೀರ್‌ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌’ಗಳ ಜಯ ಸಾಧಿಸಿತ್ತು. ಎರಡನೇ ಪಂದ್ಯವನ್ನು ಸೆಪ್ಟೆಂಬರ್ 2018 ರಲ್ಲಿ ಆಡಲಾಯಿತು. ಈ ಪಂದ್ಯ ಟೈ ಆಗಿತ್ತು. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಮತ್ತು ಕೊನೆಯ ODI ಜೂನ್ 2019 ರಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ 11 ರನ್‌’ಗಳಿಂದ ಗೆದ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ 224 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಅಫ್ಘಾನಿಸ್ತಾನ ತಂಡ 213 ರನ್‌’ಗಳಿಗೆ ಆಲೌಟ್ ಆಯಿತು.


ಇದನ್ನೂ ಓದಿ: ಒಂದೇ ತಿಂಗಳು ಬರುವ ಗ್ಯಾಸ್ ಎರಡು ತಿಂಗಳವರೆಗೆ ಬಳಸಬೇಕೇ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ


2023ರ ವಿಶ್ವಕಪ್‌’ನಲ್ಲಿ ಭಾರತದ ಮೊದಲ ಪಂದ್ಯ ಆಸ್ಟ್ರೇಲಿಯಾ ವಿರುದ್ಧ ಎಂಬುದು ಗಮನಾರ್ಹ. ಈ ಮೂಲಕ ಟೀಂ ಇಂಡಿಯಾ 6 ವಿಕೆಟ್‌’ಗಳ ಜಯ ಸಾಧಿಸಿತ್ತು. ಈಗ ಅಫ್ಘಾನಿಸ್ತಾನ ವಿರುದ್ಧ ಪಂದ್ಯ ನಡೆಯಲಿದೆ. ಇದಾದ ನಂತರ ಅಕ್ಟೋಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಭಾರತ ತಂಡ ಸೆಮಿಫೈನಲ್‌’ಗೂ ಮುನ್ನ ಕೊನೆಯ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಈ ಪಂದ್ಯ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.