World Cup 2023: ವಿಶ್ವಕಪ್ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಸಂಕಷ್ಟದ ಸುಳಿಯೇ ಎದುರಾಗಿದೆ. ಪಾಕಿಸ್ತಾನ ಕ್ರಿಕೆಟ್ ತಂಡದ ಹಲವು ಸ್ಟಾರ್ ಕ್ರಿಕೆಟಿಗರು ವೈರಲ್ ಜ್ವರಕ್ಕೆ ತುತ್ತಾಗಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ನಾಲ್ಕೈದು ಆಟಗಾರರು ತೀವ್ರ ಎದೆನೋವಿನಿಂದ ಬಳಲುತ್ತಿದ್ದು, ಜ್ವರ ಮತ್ತು ವೈರಲ್ ಸೋಂಕಿಗೆ ಒಳಗಾಗಿದ್ದಾರೆ ಎಂದು ತಂಡದ ಆಪ್ತ ಮೂಲಗಳು ಬಹಿರಂಗಪಡಿಸಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ಶ್ರೇಷ್ಠ ತಂಡ 2023ರ ವಿಶ್ವಕಪ್ ಗೆಲ್ಲಲಿದೆ: ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಭವಿಷ್ಯ


ಅಕ್ಟೋಬರ್ 14 ಶನಿವಾರದಂದು ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ 7 ವಿಕೆಟ್‌’ಗಳ ಸೋಲನ್ನು ಎದುರಿಸಬೇಕಾಯಿತು. ಅಂದಿನಿಂದ ಪಾಕಿಸ್ತಾನ ತಂಡದ ಕ್ರಿಕೆಟಿಗರು ನಿರಂತರ ಟೀಕೆಗಳನ್ನು ಎದುರಿಸುತ್ತಿದ್ದಾರೆ.


ಪಾಕಿಸ್ತಾನ ತನ್ನ ಮುಂದಿನ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಆಡಬೇಕಾಗಿದೆ. ಈ ಪಂದ್ಯಕ್ಕೂ ಮುನ್ನ ಪಾಕ್ ತಂಡ ಸಂಕಷ್ಟಕ್ಕೆ ಸಿಲುಕಿದೆ.  


ಅಕ್ಟೋಬರ್ 20 ರಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಪಂದ್ಯಕ್ಕೆ ಮುಂಚಿತವಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಇದೀಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ಮುಂದಿನ ಪಂದ್ಯದಿಂದ ಹೊರ ಬೀಳುವ ಸಾಧ್ಯತೆ ಇದೆ. ಇದು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಮತ್ತಷ್ಟು ಹಿನ್ನಡೆಯಾಗಿದೆ.


ಪಾಕಿಸ್ತಾನಿ ಸುದ್ದಿ ವಾಹಿನಿ 'ಸಮಾ ಟಿವಿ' ವರದಿಗಳ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ವೈರಲ್ ಬ್ಯಾಕ್ಟೀರಿಯಾದ ಸೋಂಕಿಗೆ ತುತ್ತಾಗಿದ್ದಾರೆ. ಶಾಹೀನ್ ಶಾ ಅಫ್ರಿದಿ ತಮ್ಮ ಆರೋಗ್ಯವನ್ನು ಸುಧಾರಿಸಲು ಆಂಟಿಬಯೋಟಿಕ್ ಡ್ರಿಪ್ ಮತ್ತು ವೈದ್ಯಕೀಯ ಸಹಾಯವನ್ನು ತೆಗೆದುಕೊಂಡಿದ್ದಾರೆ.


ಇನ್ನೊಂದೆಡೆ ಪಾಕಿಸ್ತಾನಿ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಬ್ದುಲ್ಲಾ ಶಫೀಕ್ ಕೂಡ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಸದ್ಯ ವೈದ್ಯರು ಅಬ್ದುಲ್ಲಾ ಶಫೀಕ್ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಇದಲ್ಲದೆ, ಪಾಕಿಸ್ತಾನಿ ಕ್ರಿಕೆಟ್ ತಂಡದ ವೇಗದ ಬೌಲರ್ ಜಮಾನ್ ಖಾನ್ ಕೂಡ ವೈರಲ್ ಸೋಂಕಿನಿಂದ ಬಳಲುತ್ತಿದ್ದಾರೆ.


ವೈರಲ್ ಸೋಂಕಿನಿಂದ ಪೀಡಿತರಾದ ಆಟಗಾರರಲ್ಲಿ ಲೆಗ್ ಸ್ಪಿನ್ನರ್ ಉಸಾಮಾ ಮಿರ್ ಕೂಡ ಸೇರಿದ್ದಾರೆ, ಐದು ದಿನಗಳ ಕಾಲ ಚಿಕಿತ್ಸೆ ಪಡೆದ ಅವರು, ಮುನ್ನೆಚ್ಚರಿಕೆಯಾಗಿ ಕ್ವಾರಂಟೈನ್‌’ನಲ್ಲಿ ಇದ್ದಾರೆ. ಕೋವಿಡ್ -19 ಮತ್ತು ಡೆಂಗ್ಯೂ ಹೊರತುಪಡಿಸಿ, ಮಿರ್‌’ಗೆ ನಡೆಸಿದ ಎಲ್ಲಾ ವೈದ್ಯಕೀಯ ಪರೀಕ್ಷೆಗಳ ವರದಿಗಳು ನಕಾರಾತ್ಮಕವಾಗಿವೆ.


ಇದನ್ನೂ ಓದಿ: ಬ್ಲೌಸ್ ಬಟನ್ ಹಾಕದೇ ಮೈಮಾಟ ಪ್ರದರ್ಶಿಸಿದ ಪ್ರಿಯಾ ವಾರಿಯರ್: ಕಣ್ಸನ್ನೆ ಬೆಡಗಿಯ ಹಾಟ್ ಲುಕ್’ಗೆ ಫ್ಯಾನ್ಸ್ ಫಿದಾ


ಇನ್ನೊಂದೆಡೆ ಉಸಾಮಾ ಮಿರ್ ಈಗ ಸುಧಾರಿಸಿದ್ದು ಮತ್ತೊಮ್ಮೆ ಆಯ್ಕೆಗೆ ಲಭ್ಯವಾಗಿದ್ದಾರೆ. ಈ ಸವಾಲುಗಳ ನಡುವೆ, ಕ್ರಿಕೆಟಿಗರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಧ್ಯಮ ವ್ಯವಸ್ಥಾಪಕರು ಬಹಿರಂಗಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್