ವಿಶ್ವಕಪ್ ಪಂದ್ಯ ನಡೆಯುತ್ತಿದ್ದಂತೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡ ಪ್ಯಾಲಿಸ್ತೀನ್ ಬೆಂಬಲಿಗ

India vs Australia, World Cup 2023: ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಈ ಪಂದ್ಯದ 14ನೇ ಓವರ್ ನಡೆಯುತ್ತಿದ್ದಾಗ 'ಫ್ರೀ ಪ್ಯಾಲೆಸ್ತೀನ್' ಎಂದು ಬರೆದಿರುವ ಟೀ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬರು ಮೈದಾನಕ್ಕೆ ಆಗಮಿಸಿದ್ದರು.

Written by - Bhavishya Shetty | Last Updated : Nov 19, 2023, 06:50 PM IST
    • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಪಂದ್ಯ
    • ಅಂತಿಮ ಪಂದ್ಯದಲ್ಲಿ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ
    • ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
ವಿಶ್ವಕಪ್ ಪಂದ್ಯ ನಡೆಯುತ್ತಿದ್ದಂತೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡ ಪ್ಯಾಲಿಸ್ತೀನ್ ಬೆಂಬಲಿಗ title=
Virat Kohli

India vs Australia, World Cup 2023: ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಪಂದ್ಯದಲ್ಲಿ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ವಿರಾಟ್ ಕೊಹ್ಲಿ ಔಟಾದ ಬಳಿಕ ಅಭಿಮಾನಿಯೊಬ್ಬ ಮೈದಾನಕ್ಕೆ ಆಗಮಿಸಿ ಅವರನ್ನು ಅಪ್ಪಿಹಿಡಿದಿದ್ದಾನೆ, ಈತನ ಟೀ-ಶರ್ಟ್ ಮೇಲೆ ST.. Bombing Palestine ಎಂದು ಬರೆದಿತ್ತು, ಸದ್ಯ ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: 47 ರನ್ ಗಳಿಸಿ ಔಟಾದ್ರೂ ಶ್ರೇಷ್ಠ ದಾಖಲೆ ಬರೆದ ರೋಹಿತ್: ಯಾವ ನಾಯಕನೂ ಮಾಡಲು ಸಾಧ್ಯವಾಗದ ರೆಕಾರ್ಡ್

ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಈ ಪಂದ್ಯದ 14ನೇ ಓವರ್ ನಡೆಯುತ್ತಿದ್ದಾಗ 'ಫ್ರೀ ಪ್ಯಾಲೆಸ್ತೀನ್' ಎಂದು ಬರೆದಿರುವ ಟೀ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬರು ಮೈದಾನಕ್ಕೆ ಆಗಮಿಸಿದ್ದರು. ಮೈದಾನ ತಲುಪಿದ ಅಭಿಮಾನಿ ನೇರವಾಗಿ ವಿರಾಟ್ ಕೊಹ್ಲಿ ಬಳಿ ಹೋಗಿ ಅವರನ್ನು ಅಪ್ಪಿಕೊಂಡಿದ್ದಾರೆ. ತಕ್ಷಣವೇ ಆಗಮಿಸಿದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಬಂಧಿಸಿ, ಹೊರಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ತಾಯಿಗೆ ಅನಾರೋಗ್ಯ- ವಿಶ್ವಕಪ್ ಫೈನಲ್ ಆರಂಭದ ಬೆನ್ನಲ್ಲೇ ಆಸ್ಪತ್ರೆಗೆ ದಾಖಲು!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಗಳಿಸಲಷ್ಟೇ ಶಕ್ತವಾಗಿದೆ. ಸದ್ಯ ಫೀಲ್ಡಿಂಗ್ ಮಾಡುತ್ತಿರುವ ಭಾರತ ಸುದ್ದಿ ಬರೆಯುವವರೆಗೆ ಎದುರಾಳಿ ತಂಡದ 1 ವಿಕೆಟ್ ಕಬಳಿಸಿದೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News