India vs Australia, World Cup 2023: ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಪಂದ್ಯದಲ್ಲಿ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ವಿರಾಟ್ ಕೊಹ್ಲಿ ಔಟಾದ ಬಳಿಕ ಅಭಿಮಾನಿಯೊಬ್ಬ ಮೈದಾನಕ್ಕೆ ಆಗಮಿಸಿ ಅವರನ್ನು ಅಪ್ಪಿಹಿಡಿದಿದ್ದಾನೆ, ಈತನ ಟೀ-ಶರ್ಟ್ ಮೇಲೆ ST.. Bombing Palestine ಎಂದು ಬರೆದಿತ್ತು, ಸದ್ಯ ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 47 ರನ್ ಗಳಿಸಿ ಔಟಾದ್ರೂ ಶ್ರೇಷ್ಠ ದಾಖಲೆ ಬರೆದ ರೋಹಿತ್: ಯಾವ ನಾಯಕನೂ ಮಾಡಲು ಸಾಧ್ಯವಾಗದ ರೆಕಾರ್ಡ್


ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಈ ಪಂದ್ಯದ 14ನೇ ಓವರ್ ನಡೆಯುತ್ತಿದ್ದಾಗ 'ಫ್ರೀ ಪ್ಯಾಲೆಸ್ತೀನ್' ಎಂದು ಬರೆದಿರುವ ಟೀ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬರು ಮೈದಾನಕ್ಕೆ ಆಗಮಿಸಿದ್ದರು. ಮೈದಾನ ತಲುಪಿದ ಅಭಿಮಾನಿ ನೇರವಾಗಿ ವಿರಾಟ್ ಕೊಹ್ಲಿ ಬಳಿ ಹೋಗಿ ಅವರನ್ನು ಅಪ್ಪಿಕೊಂಡಿದ್ದಾರೆ. ತಕ್ಷಣವೇ ಆಗಮಿಸಿದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಬಂಧಿಸಿ, ಹೊರಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮೊಹಮ್ಮದ್ ಶಮಿ ತಾಯಿಗೆ ಅನಾರೋಗ್ಯ- ವಿಶ್ವಕಪ್ ಫೈನಲ್ ಆರಂಭದ ಬೆನ್ನಲ್ಲೇ ಆಸ್ಪತ್ರೆಗೆ ದಾಖಲು!


ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಗಳಿಸಲಷ್ಟೇ ಶಕ್ತವಾಗಿದೆ. ಸದ್ಯ ಫೀಲ್ಡಿಂಗ್ ಮಾಡುತ್ತಿರುವ ಭಾರತ ಸುದ್ದಿ ಬರೆಯುವವರೆಗೆ ಎದುರಾಳಿ ತಂಡದ 1 ವಿಕೆಟ್ ಕಬಳಿಸಿದೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.