ಹಾಲಿ ವಿಶ್ವಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ 

ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡವು ಹಾಲಿ ವಿಶ್ವಚಾಂಪಿಯನ್ ಇಂಗ್ಲೆಂಡ್ ತಂಡವನ್ನು 69 ರನ್ ಗಳಿಂದ ಸೋಲಿಸುವ ಮೂಲಕ ಐತಿಹಾಸಿಕ ಗೆಲುವನ್ನು ಕಂಡಿದೆ.

Written by - Manjunath N | Last Updated : Oct 15, 2023, 09:52 PM IST
  • ಅಫ್ಘಾನಿಸ್ತಾನ ತಂಡವು ನೀಡಿದ 285 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಬಲಿಷ್ಠ ಇಂಗ್ಲೆಂಡ್ ತಂಡವು ಆಫ್ಘಾನಿಸ್ತಾನದ ಬೌಲರಗಳನ್ನು ಎದುರಿಸಲು ಹರಸಾಹಸಪಡಬೇಕಾಯಿತು
  • ಇಂಗ್ಲೆಂಡ್ ತಂಡದ ಪರವಾಗಿ ಹ್ಯಾರಿ ಬ್ರೂಕ್ 66, ಹಾಗೂ ಡೇವಿಡ್ ಮಲಾನ್ 32 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ
  • ಅಂತಿಮವಾಗಿ ಇಂಗ್ಲೆಂಡ್ ತಂಡವು 40.3 ಓವರ್ ಗಳಲ್ಲಿ 215 ರನ್ ಗಳಿಗೆ ಸರ್ವಪತನ ಕಂಡಿತು.
 ಹಾಲಿ ವಿಶ್ವಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ  title=

ನವದೆಹಲಿ: ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡವು ಹಾಲಿ ವಿಶ್ವಚಾಂಪಿಯನ್ ಇಂಗ್ಲೆಂಡ್ ತಂಡವನ್ನು 69 ರನ್ ಗಳಿಂದ ಸೋಲಿಸುವ ಮೂಲಕ ಐತಿಹಾಸಿಕ ಗೆಲುವನ್ನು ಕಂಡಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡಿತು. ಇನ್ನೊಂದೆಡೆಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಅಫ್ಘಾನಿಸ್ತಾನ ತಂಡವು ಆರಂಭಿಕ ಆಟಗಾರ ಗುರ್ಬಾಜ್ 80, ಇಕ್ರಂ ಐಖಿಲ್,58 ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ 49.5 ಓವರ್ ಗಳಲ್ಲಿ  ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 284 ರನ್ ಗಳಿಸಿತು.

ಅಫ್ಘಾನಿಸ್ತಾನ ತಂಡವು ನೀಡಿದ 285 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಬಲಿಷ್ಠ ಇಂಗ್ಲೆಂಡ್ ತಂಡವು ಆಫ್ಘಾನಿಸ್ತಾನದ ಬೌಲರಗಳನ್ನು ಎದುರಿಸಲು ಹರಸಾಹಸಪಡಬೇಕಾಯಿತು.ಇಂಗ್ಲೆಂಡ್ ತಂಡದ ಪರವಾಗಿ ಹ್ಯಾರಿ ಬ್ರೂಕ್ 66, ಹಾಗೂ ಡೇವಿಡ್ ಮಲಾನ್ 32 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.ಅಂತಿಮವಾಗಿ ಇಂಗ್ಲೆಂಡ್ ತಂಡವು 40.3 ಓವರ್ ಗಳಲ್ಲಿ 215 ರನ್ ಗಳಿಗೆ ಸರ್ವಪತನ ಕಂಡಿತು.

ಆಫ್ಘಾನಿಸ್ತಾನದ ಪರವಾಗಿ ರಶೀದ್ ಖಾನ್ 3, ಹಾಗೂ ಮುಜೀಬ್ ಉರ್ ರೆಹಮಾನ್ 3,ಮೊಹಮದ್ ನಬಿ 2 ವಿಕೆಟ್ ಗಳನ್ನು ಪಡೆಯುವ ಮೂಲಕ ತಂಡದ ಗೆಲುವಿಗೆ ನೆರವಾದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

 

Trending News