World Cup 2023: ಆರಂಭಿಕ ಆಟಗಾರ ಲಿಟನ್ ದಾಸ್ ಬಾಂಗ್ಲಾದೇಶ ಪರ ಅತಿ ಹೆಚ್ಚು ರನ್ ಗಳಿಸಿದರು. ಈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ 66 ಎಸೆತಗಳಲ್ಲಿ 76 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಅವರು 7 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಹೊಡೆದರು. ಆದರೆ, ಇದಾದ ಬಳಿಕ ಬಾಂಗ್ಲಾದೇಶದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಹಾದಿ ಹಿಡಿದರು. 


COMMERCIAL BREAK
SCROLL TO CONTINUE READING

ರಹೀಮ್ 64 ಎಸೆತಗಳಲ್ಲಿ 51 ರನ್ ಗಳಿಸಿದರು. ತೌಹೀದ್ ಹೃದಯ್ 61 ಎಸೆತಗಳಲ್ಲಿ 39 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಜೊತೆಗೆ ಮೆಹೆದಿ ಹಸನ್, ನಜ್ಮುಲ್ ಹೊಸೈನ್ ಶಾಂಟೊ ಮತ್ತು ತನ್ಜಿದ್ ಹಸನ್ ಅವರಂತಹ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದರು.


ಇದನ್ನೂ ಓದಿ-Pakistan vs Sri Lanka: ವಿಕೆಟ್ ಕೀಪರ್ ಆಗಿ ಕುಮಾರ ಸಂಗಕ್ಕಾರ ದಾಖಲೆ ಮುರಿದ ಕುಸಾಲ್ ಮೆಂಡಿಸ್!


ರೀಸ್ ಟೋಪ್ಲಿ ಇಂಗ್ಲೆಂಡ್ ಬೌಲರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಬಳಿಸಿದರು. ಇವರು 10 ಓವರ್ ಗಳಲ್ಲಿ 43 ರನ್ ನೀಡಿ 4 ವಿಕೆಟ್ ಪಡೆದರು. ಕ್ರಿಸ್ ವೋಕ್ಸ್ 2 ವಿಕೆಟ್ ಪಡೆದರು. ಇದಲ್ಲದೇ ಮಾರ್ಕ್ ವುಡ್, ಆದಿಲ್ ರಶೀದ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್ ವಿಕೆಟ್ ಪಡೆದರು.


ಇಂಗ್ಲೆಂಡ್ 364 ರನ್ ಗಳ ಬೃಹತ್ ಸ್ಕೋರ್..
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 364 ರನ್ ಗಳಿಸಿತು. ಇಂಗ್ಲೆಂಡ್ ಪರವಾಗಿ ಆರಂಭಿಕ ಆಟಗಾರ ಡೇವಿಡ್ ಮಲಾನ್ 107 ಎಸೆತಗಳಲ್ಲಿ 140 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಜೋ ರೂಟ್ 68 ಎಸೆತಗಳಲ್ಲಿ 82 ರನ್ ಗಳಿಸಿದರು. ಇದೇ ವೇಳೆ ಜಾನಿ ಬೈರ್ಸ್ಟೋವ್ 59 ಎಸೆತಗಳಲ್ಲಿ 52 ರನ್ ಗಳಿಸಿದರು.


ಬಾಂಗ್ಲಾದೇಶ ಪರ ಮೆಹೆದಿ ಹಸನ್ ಗರಿಷ್ಠ 4 ವಿಕೆಟ್ ಪಡೆದರು. ಶೋರಿಫುಲ್ ಇಸ್ಲಾಂ ಮೂವರು ಆಟಗಾರರನ್ನು ಔಟ್ ಮಾಡಿದರು. ಇದರೊಂದಿಗೆ ತಸ್ಕಿನ್ ಅಹ್ಮದ್ ಮತ್ತು ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.


ಇದನ್ನೂ ಓದಿ-ಅಫ್ಘನ್ ಕದನದಿಂದ ಭಾರತದ ಈ ಪ್ರಮುಖ ಬೌಲರ್ ಔಟ್! ಆಸೀಸ್ ವಿರುದ್ಧ ಟೀಂ ಇಂಡಿಯಾ ಗೆಲ್ಲಲು ಕಾರಣವಾಗಿದ್ದು ಇದೇ ವೇಗಿ…


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ